ಮಣ್ಣು ಉಳಿಸಿ: ಸದ್ಗುರು ಜತೆ ಯೋಗಿ ಸರ್ಕಾರ ಒಪ್ಪಂದ

Published : Jun 09, 2022, 11:04 AM IST
ಮಣ್ಣು ಉಳಿಸಿ: ಸದ್ಗುರು ಜತೆ ಯೋಗಿ ಸರ್ಕಾರ ಒಪ್ಪಂದ

ಸಾರಾಂಶ

*  ನಾವು ಭೂಮಿಗೆ ಮಾತೆಯ ಸ್ಥಾನ ನೀಡಿದ್ದೇವೆ, ಮಣ್ಣು ಉಳಿಸಿ *  ಸದ್ಗುರು ಅಭಿಯಾನಕ್ಕೆ ರಾಜ್ಯದ 25 ಕೋಟಿ ಜನರ ಸಾಥ್‌: ಯೋಗಿ *  ಮಣ್ಣು ಉಳಿಸಿ ಮತ್ತು ನದಿಗಳನ್ನು ರಕ್ಷಿಸಿ ಅಭಿಯಾನ ಅತ್ಯಗತ್ಯ  

ಬೆಂಗಳೂರು(ಜೂ.09):  ಗುಜರಾತ್‌, ರಾಜಸ್ಥಾನದ ನಂತರ ಇದೀಗ ಉತ್ತರ ಪ್ರದೇಶ ಸರ್ಕಾರ ಈಶಾ ಫೌಂಡೇಶನ್‌ ಆರಂಭಿಸಿರುವ ಮಣ್ಣು ಉಳಿಸಿ ಅಭಿಯಾನಕ್ಕೆ ಕೈಜೋಡಿಸಿದ್ದು ಬುಧವಾರ ಒಡಂಬಡಿಕೆ ಪತ್ರಕ್ಕೆ(ಎಂಒಯು) ಸಹಿ ಹಾಕಿದೆ.

ಲಖನೌದಲ್ಲಿ ನಡೆದ ಮಣ್ಣು ಉಳಿಸಿ ಕಾರ್ಯಕ್ರಮದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಸದ್ಗುರುಗಳು ಪರಸ್ಪರ ಒಡಂಬಡಿಕೆ ಪತ್ರವನ್ನು ವಿನಿಮಯ ಮಾಡಿಕೊಂಡರು. ಆ ಸಂದರ್ಭದಲ್ಲಿ ಸದ್ಗುರುಗಳು ಈ ಅಭಿಯಾನದ ಮಣ್ಣು ಉಳಿಸಿ ಕಾರ್ಯನೀತಿಯ ಕೈಪಿಡಿಯನ್ನು ಮುಖ್ಯಮಂತ್ರಿಯವರಿಗೆ ನೀಡಿದರು.

ಮಣ್ಣಿನ ನಾಶ ಸಂಪೂರ್ಣ ನಿಲ್ಲುವವರೆಗೂ ಧ್ವನಿ ಎತ್ತಿ: ಸದ್ಗುರು

ನಂತರ ಮಾತನಾಡಿದ ಸದ್ಗುರುಗಳು, ಭೂಮಿಗೆ ಮಾತೆಯ ಸ್ಥಾನ ನೀಡಿರುವ ಭಾರತ ಮಣ್ಣಿನ ಜೀರ್ಣೋದ್ಧಾರದ ಕಾರ್ಯದಲ್ಲಿ ಪಾಲ್ಗೊಂಡು ಇಡೀ ವಿಶ್ವಕ್ಕೆ ಮುಂದಾಳಾಗಬೇಕು. ಉತ್ತರ ಪ್ರದೇಶ ದೇಶದಲ್ಲೇ ಅತಿದೊಡ್ಡ ರಾಜ್ಯವಾಗಿದ್ದು ಬಹಳಷ್ಟುಭೂಮಿ ಕೃಷಿ ನಿರತವಾಗಿದೆ. ಆದ್ದರಿಂದ ಅದು ಮುಂಚೂಣಿಯಲ್ಲಿರಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತನಾಡಿ, ನದಿಗಳನ್ನು ರಕ್ಷಿಸಿ ಅಭಿಯಾನದ ಅಂಗವಾಗಿ ಈಶಾ ಫೌಂಡೇಶನ್‌ ಉತ್ತರ ಪ್ರದೇಶದ ಏಳು ನದಿಗಳ ಪುನರುಜ್ಜೀವನ ಮಾಡಿರುವುದು ಶ್ಲಾಘನೀಯ ಕಾರ್ಯ. ಮಣ್ಣು ಉಳಿಸಿ ಮತ್ತು ನದಿಗಳನ್ನು ರಕ್ಷಿಸಿ ಅಭಿಯಾನವು ಅತ್ಯಗತ್ಯವಾಗಿದ್ದು ಈ ಅಭಿಯಾನದಲ್ಲಿ ಉತ್ತರ ಪ್ರದೇಶ ರಾಜ್ಯದ 25 ಕೋಟಿ ಜನರು ಬೆಂಬಲಿಸಲಿದ್ದಾರೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಉತ್ತರಪ್ರದೇಶದ ಕೃಷಿ ಸಚಿವ ಸೂರ್ಯ ಪ್ರತಾಪ್‌ ಶಾಹಿ, ಅಲಹಾಬಾದ್‌ ಹೈಕೋರ್ಚ್‌ ಮುಖ್ಯ ನ್ಯಾಯಾಧೀಶ ರಾಜೇಶ್‌ ಬಿಂದಲ್‌, ಉತ್ತರಪ್ರದೇಶದ ಮುಖ್ಯ ಕಾರ್ಯದರ್ಶಿ ದುರ್ಗಾಶಂಕರ್‌ ಮಿಶ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಎಥೆನಾಲ್‌ ಮಿಶ್ರಣ ಗುರಿ ಸಾಧಿಸಿದ ಭಾರತ: ಮೋದಿ ಹರ್ಷ

ಪ್ರಸ್ತುತ ಮಣ್ಣು ಉಳಿಸಿ ಅಭಿಯಾನದ ಸಲುವಾಗಿ ಯೂರೋಪ್‌, ಮಧ್ಯ ಏಷ್ಯಾ ಮತ್ತು ಮಧ್ಯ ಪ್ರಾಚ್ಯ ದೇಶಗಳಲ್ಲಿ ನೂರು ದಿನಗಳ ಕಾಲ ಒಟ್ಟು 30 ಸಾವಿರ ಕಿ.ಮೀ ಏಕಾಂಗಿಯಾಗಿ ಪ್ರಯಾಣಿಸಿ ಜಾಗೃತಿ ಮೂಡಿಸುವ ಕೆಲಸದಲ್ಲಿ ಸದ್ಗುರು ತೊಡಗಿಕೊಂಡಿದ್ದಾರೆ. ಈ ಅಭಿಯಾನದ ಅವಧಿಯಲ್ಲಿ ಜಾಗತಿಕ ಮುಖಂಡರು, ವಿಜ್ಞಾನಿಗಳು, ಮಣ್ಣಿನ ತಜ್ಞರು, ಮತ್ತು ಉಳಿದ ಮಧ್ಯಸ್ಥಗಾರರನ್ನು ಭೇಟಿಯಾಗಿ ಮಣ್ಣನ್ನು ಉಳಿಸಲು ತುರ್ತು ನೀತಿ ಚಾಲಿತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸದ್ಗುರು ಒತ್ತಾಯ ಮಾಡಲಿದ್ದಾರೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸದ್ಗುರುಗಳ ಮಣ್ಣು ಉಳಿಸಿ ಅಭಿಯಾನಕ್ಕೆ ತಮ್ಮ ಸಂಪೂರ್ಣ ಬೆಂಬಲ ಮತ್ತು ಪ್ರೋತ್ಸಾಹ ವ್ಯಕ್ತಪಡಿಸಿದ್ದರು. ಸದ್ಗುರುಗಳು ಮಣ್ಣಿನ ಪುನರುಜ್ಜೀವನಕ್ಕಾಗಿ ಬೇಕಾದ ಪ್ರಾಯೋಗಿಕ ಮತ್ತು ವೈಜ್ಞಾನಿಕ ಪರಿಹಾರಗಳುಳ್ಳ ಮಣ್ಣು ಉಳಿಸಿ ಕಾರ್ಯನೀತಿ ಕೈಪಿಡಿಯನ್ನು ಸಹ ಪ್ರಧಾನಿಯವರಿಗೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ