
ಹುಬ್ಬಳ್ಳಿ(ನ.16): ಬೆಂಗಳೂರು, ಧಾರವಾಡ ಸೇರಿ ಕೆಲ ಜಿಲ್ಲೆಗಳಲ್ಲಿ ಗುರುವಾರ ರಾತ್ರಿಯಿಂದೀಚೆಗೆ ಕೆಲಕಾಲ ಉತ್ತಮ ಮಳೆಯಾಗಿದೆ. ವಿಜಯನಗರದಲ್ಲಿ ಸಿಡಿಲು ಬಡಿದು ಯುವಕನೊಬ್ಬ ಬಲಿಯಾಗಿದ್ದಾನೆ.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮಾನ್ಯರ ಮಸಲವಾಡ ಗ್ರಾಮದ ಜೆ.ಶಂಭುನಾಥ (29) ಮೃತ ವ್ಯಕ್ತಿ. ಗುರುವಾರ ರಾತ್ರಿ ಭಾರಿ ಪ್ರಮಾಣದ ಮಳೆ ಗಾಳಿ ಮತ್ತು ಸಿಡಿಲಿನ ಅಬ್ಬರವಿತ್ತು. ಆ ಸಂದರ್ಭದಲ್ಲಿ ಹುಣಸೆಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಅಕಾಲಿಕ ಮಳೆ: ಕಾಫಿಗೆ ಕೊಳೆ ರೋಗ, ನಷ್ಟದ ಆತಂಕ ಎದುರಿಸುತ್ತಿರುವ ಬೆಳೆಗಾರರು!
ಬೆಂಗಳೂರು, ವಿಜಯನಗರ, ಧಾರವಾಡ, ಬಳ್ಳಾರಿ, ಕೊಪ್ಪಳ, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ರಾತ್ರಿಯಿಂದೀಚೆಗೆ ಕೆಲಕಾಲ ಮಳೆಯಾಗಿದೆ. ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಅಕಾಲಿಕ ಮಳೆಗೆ ಭತ್ತದ ಬೆಳೆ ನೆಲಕ್ಕಚ್ಚಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ