
ತುಮಕೂರು(ಆ.20): ಪವಿತ್ರ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಸುಳ್ಳು ಮತ್ತು ಅಪಮಾನಕಾರಿ ವಿಡಿಯೋಗಳನ್ನು ಪ್ರಕಟಿಸಿದ ಆರೋಪದ ಮೇಲೆ ಯೂಟೂಬರ್ ಸಮೀರ್ ವಿರುದ್ಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಭಕ್ತರು ಮತ್ತು ಬಿಜೆಪಿ ಮುಖಂಡರು ಈ ದೂರು ಸಲ್ಲಿಸಿದ್ದು, ಸಮೀರ್‌ನ ಬಂಧನಕ್ಕೆ ಒತ್ತಾಯಿಸಿದ್ದಾರೆ.
ಕುಣಿಗಲ್ ಪೊಲೀಸ್ ಠಾಣೆಗೆ ಆಗಮಿಸಿದ ನೂರಾರು ಭಕ್ತರು ಮತ್ತು ಬಿಜೆಪಿ ಕಾರ್ಯಕರ್ತರು, ಸಮೀರ್‌ನ ವಿಡಿಯೋಗಳು ಕೋಟ್ಯಂತರ ಹಿಂದು ಭಕ್ತರ ಭಾವನೆಗಳಿಗೆ ಧಕ್ಕೆ ಉಂಟುಮಾಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧರ್ಮಸ್ಥಳದಂತಹ ಪವಿತ್ರ ಕ್ಷೇತ್ರದ ವಿರುದ್ಧ ಎಡಪಂಥೀಯ ಕುತಂತ್ರದ ಭಾಗವಾಗಿ ಸುಳ್ಳು ಪ್ರಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಧರ್ಮಸ್ಥಳ ಭಕ್ತರು, ಇಂತಹ ಕೃತ್ಯಗಳು ಹಿಂದು ಸಮುದಾಯದ ಧಾರ್ಮಿಕ ಭಾವನೆಗಳನ್ನು ಕೆರಳಿಸಿವೆ ಎಂದು ದೂರಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು ಕ್ರಮ ಜರುಗಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್‌ನ ಆಧಾರರಹಿತ, ಸುಳ್ಳು, ಅಪಪ್ರಚಾರದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಧಾರ್ಮಿಕ ಕ್ಷೇತ್ರಗಳ ವಿರುದ್ಧ ಇಂತಹ ಅವಮಾನಕಾರಿ ಕೃತ್ಯಗಳನ್ನು ತಡೆಗಟ್ಟಲು ಕಠಿಣ ಕಾನೂನು ಕ್ರಮಕ್ಕೆ ಒತ್ತಾಯ ಕೇಳಿಬಂದಿದೆ. ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದಿನ ಕಾನೂನು ಕ್ರಮಗಳ ಬಗ್ಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ