
ಬೆಂಗಳೂರು : ಜೆಡಿಎಸ್‌ನ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅವರು ಈ ತಿಂಗಳ 23ರಂದು ಅಧಿಕಾರ ಸ್ವೀಕರಿಸಲಿದ್ದಾರೆ.
ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಂದು ವಿಧ್ಯುಕ್ತವಾಗಿ ಪ್ರಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರ ಹುದ್ದೆಗೆ ದತ್ತ ಹೆಸರನ್ನು ಘೋಷಣೆ ಮಾಡಿದ್ದರು.
ಪದಗ್ರಹಣ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸೇರಿದಂತೆ ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ದತ್ತ ಅವರು ಪಕ್ಷದ ವಕ್ತಾರರಾಗಿ, ಶಾಸಕರಾಗಿ ಅನುಭವ ಹೊಂದಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಚಿರಪರಿಚಿತರಾಗಿರುವ ಕಾರಣ ಪಕ್ಷವನ್ನು ಸಂಘಟಿಸಲು ಸುಲಭವಾಗಲಿದೆ ಎಂಬ ಉದ್ದೇಶದಿಂದ ಜೆಡಿಎಸ್ ವರಿಷ್ಠರು ಪ್ರಚಾರ ಸಮಿತಿ ಅಧ್ಯಕ್ಷ ಹುದ್ದೆಯ ಜವಾಬ್ದಾರಿಯನ್ನು ವಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ