ಮತ್ತೊಂದು ಗ್ಯಾರಂಟಿ ಜಾರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

Published : Jul 23, 2023, 01:30 AM IST
ಮತ್ತೊಂದು ಗ್ಯಾರಂಟಿ ಜಾರಿ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಸಾರಾಂಶ

ಗ್ಯಾರಂಟಿ ಯೋಜನೆ: ಡಿಸೆಂಬರ್‌ನಿಂದ ಯುವನಿಧಿ ಸ್ಕೀಂ ಜಾರಿ, ಪದವಿ, ಡಿಪ್ಲೊಮಾ ಆದ ನಿರುದ್ಯೋಗಿಗಳಿಗೆ ಹಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು(ಜು.23):  ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ‘ಯುವನಿಧಿ’ ಬಹುತೇಕ ಡಿಸೆಂಬರ್‌ನಿಂದ ಜಾರಿಯಾಗಲಿದೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶನಿವಾರ ವಿಧಾನಸೌಧ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಚುನಾವಣೆ ಪ್ರಣಾಳಿಕೆಯಲ್ಲಿ ಐದನೇ ಗ್ಯಾರಂಟಿಯಾಗಿ ‘ಯುವನಿಧಿ’ ಘೋಷಿಸಲಾಗಿತ್ತು. ಅದರಂತೆ 2022-23ರಲ್ಲಿ ಪದವೀದರರಾಗಿ ಹೊರಬಂದು ನಿರುದ್ಯೋಗಿಗಳಾದಲ್ಲಿ ಅವರಿಗೆ ಮೂರು ಸಾವಿರ ಭತ್ಯೆ, ಡಿಪ್ಲಮೋ ಪದವೀಧರರಿಗೆ ಒಂದೂವರೆ ಸಾವಿರ ರುಪಾಯಿ ಭತ್ಯೆ ನೀಡುವ ಯೋಜನೆಯನ್ನು ಘೋಷಿಸಿದ್ದೇವೆ. ಈ ಯೋಜನೆ ನಿರುದ್ಯೋಗಿಗಳಿಗೆ ಆಶಾದಾಯಕವಾಗಲಿದೆ. ಬಹುತೇಕ ಡಿಸೆಂಬರ್‌ನಲ್ಲಿ ಆರಂಭವಾಗಲಿದೆ. ಜೊತೆಗೆ ಕೌಶಲ್ಯ ಇಲಾಖೆಯಿಂದ ತರಬೇತಿ ನೀಡುವ ಕೆಲಸವನ್ನು ಮಾಡಲಾಗುವುದು ಎಂದರು.

ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆ ಭಾಗ್ಯವನ್ನು ಸರ್ಕಾರ ಕರುಣಿಸಿದೆ: ಹೆಚ್‌ಡಿಕೆ

ಶೀಘ್ರವೇ ಕೈಗಾರಿಕೋದ್ಯಮಿಗಳ ಜೊತೆ ಸಭೆ ನಡೆಸಿ ಉದ್ಯಮಗಳಲ್ಲಿ ಪ್ರಸ್ತುತ ಮಾರುಕಟ್ಟೆಯ ಕಾಲಕ್ಕನುಗುಣವಾಗಿ ಯಾವ ರೀತಿ ಉದ್ಯೋಗಿಗಳು ಬೇಕಾಗುತ್ತಾರೆ ಎಂಬುದನ್ನು ತಿಳಿಯಲಾಗುವುದು. ಅದಕ್ಕೆ ಅನುಗುಣವಾದ ಪಠ್ಯವನ್ನು ಕಾಲೇಜು ಶಿಕ್ಷಣದಲ್ಲಿ ಅಳವಡಿಸಿ ಬೋಧನೆ ಮಾಡಲಾಗುವುದು. ಇದರಿಂದ ನಿರುದ್ಯೋಗವೂ ನಿಯಂತ್ರಣವಾಗಲಿದೆ, ಕೈಗಾರಿಕೆಗಳಿಗೆ ಉದ್ಯೋಗಿಗಳೂ ಲಭ್ಯರಾಗುತ್ತಾರೆ ಎಂದು ಹೇಳಿದರು.

ಹಿಂದೆ ನಮ್ಮ ಸರ್ಕಾರವಿದ್ದಾಗ ಕೈಗಾರಿಕಾ ಬೆಳವಣಿಗೆಗಾಗಿ ಪ್ರತ್ಯೇಕ ಕೌಶಲ್ಯ ತರಬೇತಿ ಇಲಾಖೆ ತರೆದು ವಿವಿಧ ಕಾರ್ಯಕ್ರಮ ಆರಂಭಿಸಲಾಗಿತ್ತು. ಆದರೆ ಬಳಿಕ ಬಂದ ಸರ್ಕಾರ ಅದಕ್ಕೆ ಪ್ರೋತ್ಸಾಹ ನೀಡಲಿಲ್ಲ. ಆದರೆ ನಾವೀಗ ಆ ಇಲಾಖೆಯ ಕಾರ್ಯಕ್ರಮಗಳಿಗೆ ಪುನಃ ಅದಕ್ಕೆ ಶಕ್ತಿ ತುಂಬಲಿದ್ದೇವೆ. ಕೈಗಾರಿಕೆ ಬೆಳೆದರೆ ಉದ್ಯೋಗ ಸೃಷ್ಟಿಯಾಗುತ್ತದೆ. ಅದರಿಂದ ರಾಜ್ಯದ ಜಿಡಿಪಿ ಬೆಳೆಯುತ್ತದೆ. ಆ ಮೂಲಕ ದೇಶದ ಜಿಡಿಪಿಗೆ ರಾಜ್ಯದಿಂದ ಹೆಚ್ಚು ಕೊಡುಗೆ ನೀಡಲು ಸಾಧ್ಯವಾಗಲಿದೆ ಎಂದರು.

ಏನಿದು ಯುವನಿಧಿ ಯೋಜನೆ?

2022-23ನೇ ಸಾಲಿನಲ್ಲಿ ಯಾವುದೇ ವೃತ್ತಿಪರ ಕೋಸ್‌, ಪದವಿ, ಡಿಪ್ಲಮೋ ಪದವಿ ಪಡೆದವರಿಗೆ ಅನ್ವಯ. ಪದವಿ ಪಡೆದ 6 ತಿಂಗಳಲ್ಲಿ ಯಾವುದೇ ಉದ್ಯೋಗ ಸಿಗದೇ ಇದ್ದಲ್ಲಿ ಮುಂದಿನ 24 ತಿಂಗಳ ಅವಧಿಯಿಗೆ ಪದವೀಧರಿಗೆ ಮಾಸಿಕ 3000 ರು. ಮತ್ತು ಡಿಪ್ಲಮೋ ಪದವೀಧರರಿಗೆ ಮಾಸಿಕ 1500 ರು. ನಿರುದ್ಯೋಗ ಭತ್ಯೆ ನೀಡಲಾಗುವುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಾಯಕತ್ವ ಬದಲಾವಣೆ ಹೇಳಿಕೆ ಒಂದು ತಿಂಗಳ ಮೌನವ್ರತ : ಪಿ.ರವಿಕುಮಾರ್
ಡಿಕೆ ಊಟ ವರ್ಸಸ್‌ ಸಿದ್ದು ನಾಷ್ಟ! ಕಾಂಗ್ರೆಸ್‌ ಬಣಗಳ ಔತಣ ಸಮರ