ಬೆಂಗಳೂರು ಗಲಭೆ: ಹೈಕೋರ್ಟ್‌ ಜಡ್ಜ್‌ರಿಂದ ತನಿಖೆ ನಡೆಸಿ, ಜಮೀರ್‌ ಅಹಮದ್‌

By Kannadaprabha NewsFirst Published Aug 21, 2020, 7:46 AM IST
Highlights

ಕೆ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ವಿಧಿಸಿರುವ ನಿಷೇಧಾಜ್ಞೆ ಹಿಂಪಡೆಯಬೇಕು| ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಎಷ್ಟು ಮುಖ್ಯವೋ ಅಮಾಯಕರು ಶಿಕ್ಷೆಗೆ ಒಳಗಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯ| 

ಬೆಂಗಳೂರು(ಆ.21): ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಹಾಗೂ ಪೊಲೀಸ್‌ ಠಾಣೆಗಳ ಮೇಲಿನ ದಾಳಿ ಪ್ರಕರಣವನ್ನು ಸರ್ಕಾರ ಹೈಕೋರ್ಟ್‌ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ಮಾಜಿ ಸಚಿವ ಜಮೀರ್‌ ಅಹಮದ್‌ಖಾನ್‌ ಒತ್ತಾಯಿಸಿದ್ದಾರೆ.

ಇದೇ ವೇಳೆ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ವ್ಯಾಪ್ತಿಯಲ್ಲಿ ವಿಧಿಸಿರುವ ನಿಷೇಧಾಜ್ಞೆ ಹಿಂಪಡೆಯಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದು ಎಷ್ಟು ಮುಖ್ಯವೋ ಅಮಾಯಕರು ಶಿಕ್ಷೆಗೆ ಒಳಗಾಗದಂತೆ ನೋಡಿಕೊಳ್ಳುವುದು ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದ್ದಾರೆ. 

'ಜಮೀರ್ ಅಹ್ಮದ್ ಕರ್ನಾಟಕದ ಓವೈಸಿ ಇದ್ದಂತೆ'

ಹೀಗಾಗಿ ಸರ್ಕಾರ ಮಾತೃ ಹೃದಯದಿಂದ ವರ್ತಿಸಿ ಘಟನೆಗೆ ಸಂಬಂಧಪಡದವರು ಬಂಧಿಸಲ್ಪಟ್ಟಿದ್ದರೆ ಅವರನ್ನು ತಕ್ಷಣ ಬಿಡುಗಡೆಗೊಳಿಸಬೇಕು ಎಂದು ತಿಳಿಸಿದ್ದಾರೆ. 
 

click me!