ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸಲು ಸರ್ಕಾರ ಬದ್ಧ ಎಂದಿದ್ದಾರೆ.
ಬೆಂಗಳೂರು (ಜು.30): ಮುಂದುವರೆದ ತಂತ್ರಜ್ಞಾನವಾಗಿ ಅಭಿವೃದ್ಧಿಗೊಂಡಿರುವ ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ಮೂಲಕ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿ ಸಾಧಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಏಟ್ರಿಯಾ ವಿಶ್ವವಿದ್ಯಾಲಯವು ಸ್ವಿಸ್ನೆಕ್ಸ್ ಸಂಸ್ಥೆಯ ಸಹಯೋಗದಲ್ಲಿ ನಗರದ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ‘ಡಿಜಿಟಲ್ ತಂತ್ರಜ್ಞಾನದ ಮೂಲಕ ಜೀವ ವೈವಿದ್ಯ ಸಂರಕ್ಷಣೆ ಉದ್ದೇಶದ ಮೊದಲ ಅಂತಾರಾಷ್ಟ್ರೀಯ ಸಮ್ಮೇಳನ’ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಇಲಾಖೆಯಲ್ಲಿ ಜೈವಿಕ ತಂತ್ರಜ್ಞಾನ ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ. ಇದರ ಮುಂದಿನ ಭಾಗವಾಗಿ ಕೃತಕ ಬುದ್ಧಿಮತ್ತೆ ಮೂಲಕ ಈ ಕ್ಷೇತ್ರದಲ್ಲಿ ಮತ್ತಷ್ಟುಅಭಿವೃದ್ಧಿ ಸಾಧಿಸಲಾಗುವುದು ಎಂದರು.
undefined
KARNATAKA EDUCATION POLICY: ರಾಜ್ಯ ಶಿಕ್ಷಣ ನೀತಿಗೆ ರೂಪುರೇಷೆ ಪ್ರಸ್ತಾವನೆ ಸಿದ್ಧಪಡಿಸಲು ಸೂಚನೆ
ಜೈವಿಕ ಬದಾಲಾವಣೆಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ಸಾಧ್ಯತೆಗಳ ಬಗ್ಗೆ ಸೆಂಟರ್ ಆಫ್ ಎಕ್ಸಲೆ®್ಸ… ನೆರವನ್ನೂ ಪಡೆಯಲಾಗುವುದು. ಜೀವ ವೈವಿಧ್ಯತೆಯ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮುಡಿಸುವ ಅಗತ್ಯವಿದೆ. ಜೊತೆಗೆ ಪರಿಸರ ಅವನತಿಯಿಂದ ಮನುಕುಲವು ಸೇರಿದಂತೆ ಜೀವವೈವಿಧ್ಯತೆಯ ಮೇಲಾಗುತ್ತಿರುವ ಪರಿಣಾಮಗಳನ್ನು ಎದುರಿಸಲು ಶಿಕ್ಷಣ, ಉದ್ಯಮ ಮತ್ತು ಸಂರಕ್ಷಣೆಯ ಮಧ್ಯಸ್ಥಗಾರರನ್ನು ಒಟ್ಟುಗೂಡಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಹಣಕಾಸು ಕ್ಷೇತ್ರದಲ್ಲಿ ಕೋರ್ಸ್‌ಗೆ ಬೇಸ್ ವಿವಿ-ಎನ್‌ಎಸ್‌ಇ ಒಪ್ಪಂದ
ಪರಿಸರ ಸುಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸಲು ಏಟ್ರಿಯಾ ವಿಶ್ವವಿದ್ಯಾಲಯ ಶ್ರಮಿಸುತ್ತಿರುವುದನ್ನು ಶ್ಲಾಘಿಘಿಸಿದ ಸಚಿವರು, ಸ್ವಿಸ್ನೆಕ್ಸ್ ಸಹಯೋಗದಲ್ಲಿ ಆಯೋಜಿಸಿರುವ ಈ ಸಮ್ಮೇಳನವನ್ನು ಏಷ್ಯಾದ ಸಿಲಿಕಾನ್ ಸಿಟಿ ಎಂದೇ ಕರೆಯುವ ಬೆಂಗಳೂರಿನಲ್ಲಿ ಆಯೋಜಿಸಿರುವುದು ಹಾಗೂ ಇಲ್ಲಿ ಜಿ-20 ಪ್ರತಿನಿಧಿಗಳು ಭಾಗವಹಿಸಿರುವುದು ಹೆಮ್ಮೆಯ ವಿಷಯ. ಈ ವೇದಿಕೆಯು ವಿಶ್ವದ ನಾನಾ ರಾಷ್ಟ್ರಗಳ ನಡುವೆ ಸಹಕಾರವನ್ನು ಬೆಳೆಸಲು ಮತ್ತು ಜೀವವೈವಿಧ್ಯ ಸಂರಕ್ಷಣೆಯ ನಿರ್ಣಾಯಕ ಸಮಸ್ಯೆಗಳನ್ನು ಎದುರಿಸಲು ಅನನ್ಯ ಅವಕಾಶಕ್ಕೆ ದಾರಿಯಾಗಲಿದೆ ಎಂದು ಆಶಿಸಿದರು.