
ಬೆಂಗಳೂರು[ಜೂ.22]: ವಿಶ್ವದ ಅಗ್ರ 10 ವಿಜ್ಞಾನ ಸಂಸ್ಥೆಗಳ ಪೈಕಿ ಬೆಂಗಳೂರಿನ ಜವಾಹರಲಾಲ್ ನಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆ 7ನೇ ಸ್ಥಾನ ಪಡೆದುಕೊಂಡಿದೆ.
ವಿಜ್ಞಾನ ಲೇಖನಗಳನ್ನು ಪ್ರಕಟಿಸುವ ‘ನೇಚರ್’ ನಿಯತಕಾಲಿಕೆ ವಿಶ್ವದ ಅಗ್ರ ವಿಜ್ಞಾನ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಅಮೆರಿಕದ 5, ಆಸ್ಪ್ರೇಲಿಯಾ, ಇಸ್ರೇಲ್, ಜಪಾನ್, ಸ್ವಿಜರ್ಲೆಂಡ್‌ನ ತಲಾ ಒಂದು ಸಂಸ್ಥೆಗಳು ಸ್ಥಾನ ಪಡೆದುಕೊಂಡಿವೆ.
ಈ ಮುನ್ನ ಭಾರೀ ಬಜೆಟ್, ದೊಡ್ಡ ಗಾತ್ರದ ಸಂಸ್ಥೆಗಳು ಮತ್ತು ಅಧಿಕ ಮಾನವಶಕ್ತಿಯನ್ನು ಹೊಂದಿವ ಸಂಸ್ಥೆಗಳಿಗೆ ಶ್ರೇಯಾಂಕ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನೂ ಸಹ ಪರಿಗಣಿಸಲಾಗಿದೆ. ಹೀಗಾಗಿ ಸಣ್ಣ ಸಂಸ್ಥೆಯಾಗಿದ್ದರೂ ಜವಾಹರಲಾಲ್ ನೆಹರು ಸೆಂಟರ್ ಅನ್ನು ಪರಿಗಣಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.