ತೇಜಸ್ವಿ ಸೂರ್ಯ + ನಂದನ್ ನಿಲೇಕಣಿ..  ಮಾಫಿಯಾ ಆಟ ಇನ್ನು ನಡೆಯಲ್ಲ!

Published : May 05, 2021, 06:08 PM IST
ತೇಜಸ್ವಿ ಸೂರ್ಯ + ನಂದನ್ ನಿಲೇಕಣಿ..  ಮಾಫಿಯಾ ಆಟ ಇನ್ನು ನಡೆಯಲ್ಲ!

ಸಾರಾಂಶ

ಬೆಡ್ ಬುಕಿಂಗ್ ದಂಧೆ/ ಹಗರಣ ಬಯಲಿಗೆ ಎಳೆದ ನಂತರವೂ ಸುಮ್ಮನೆ ಕೂರದ ಸೂರ್ಯ/ ಸುರಕ್ಷಿತ ತಂತ್ರಾಂಶ ಸಿದ್ಧಪಡಿಸಲು ದಿಗ್ಗಜರಿಗೆ ಮನವಿ/ ನಂದನ್ ನಿಲೇಕಣಿ ಅವರಿಂದ ಸ್ಪಂದನೆ 

ಬೆಂಗಳೂರು(ಮೇ 05)  ಕೊರೋನಾ ರೋಗಿಗಳಿಗೆ ನೀಡಬೇಕಿದ್ದ ಬೆಡ್ ಬ್ಲಾಕ್ ಆಗುತ್ತಿದ್ದ ದಂಧೆಯನ್ನು ಸಾಕ್ಷಿ ಆಧಾರ ಸಮೇತ ಜನರ ಮುಂದೆ ಇಟ್ಟಿದ್ದ ತೇಜಸ್ವಿ ಸೂರ್ಯ ತಮ್ಮ ಕೆಲಸವನ್ನು ಅಲ್ಲಿಗೆ ನಿಲ್ಲಿಸಿಲ್ಲ. ದಿಗ್ಗಜರೊಂದಿಗೆ ಮಾತನಾಡಿ ಹೊಸ ಸಾಫ್ಟ್ ವೇರ್ ಸಿದ್ಧಮಾಡುವ ಪ್ರಯತ್ನದಲ್ಲಿದ್ದಾರೆ.

ಬೆಳಿಗ್ಗೆ ನಂದನ್ ನಿಲೇಕಣಿ ಅರೊಂದಿಗೆ ಮಾತನಾಡಿ ಬಿಬಿಎಂಪಿ ಬೆಡ್ ಹಂಚಿಕೆಗೆ ಸಂಬಂಧಿಸಿದಂತೆ ಸಾಫ್ಟ್ ವೇರ್ ಅನ್ನು ಮರುವಿನ್ಯಾಸಗೊಳಿಸಲು ತಾಂತ್ರಿಕ ಸಹಕಾರ ಒದಗಿಸುವಂತೆ ಮನವಿ ಮಾಡಿದ್ದು, ಪರಿಣಿತರ ತಂಡವನ್ನು ಇದಕ್ಕೊ ಸ್ಕರವೇ ಸಜ್ಜುಗೊಳಿಸಿರುವುದು ಶ್ಲಾಘನೀಯ ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.ನಂದನ್ ನಿಲೇಕಣಿ ರವರ ಜನಪರ ಕಾಳಜಿ, ಬದ್ಧತೆ ಅಭಿನಂದನಾರ್ಹ ಎಂದು ಸ್ಮರಿಸಿದ್ದಾರೆ.

ಕಾಂಗ್ರೆಸ್ ಮುಖಂಡರೊಂದಿಗೆ ಬೆಡ್ ಬ್ಲಾಕಿಂಗ್ ದಂಧೆಕೋರ್ತಿ

ProductNation/iSPIRT ಸಂಸ್ಥೆ ಸಹ ಕೈಜೋಡಿಸಲಿದೆ ಎಂದು ಸೂರ್ಯ ತಿಳಿಸಿದ್ದಾರೆ.  ಬೆಡ್ ಹಂಚಿಕೆಯಲ್ಲಿನ ಯಾರದ್ದೂ ಹಸ್ತಕ್ಷೇಪ ಸಾಧ್ಯವಾಗದಂತೆ, ಸುರಕ್ಷಿತ ಮತ್ತು ಪಾರದರ್ಶಕ ವ್ಯವಸ್ಥೆ ಲಭ್ಯವಾಗುಗವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಬಿಎಂಪಿ ವಾರ್  ರೂಂಗೆ ಭೇಟಿ ನೀಡಿದ್ದ ಬೆಂಗಳೂರು ದಕ್ಷಿಣ ಸಂಸದ  ಕೊರೋನಾಕ್ಕೆ ಮೀಸಲಿಟ್ಟ ಬೆಡ್ ಗಳನ್ನು  ಹೇಗೆ ಹಣಕ್ಕೆ ಮಾರಿಕೊಳ್ಳಲಾಗುತ್ತಿತ್ತು ಎಂಬ ದಂಧೆಯನ್ನು ಬಟಾಬಯಲು ಮಾಡಿದ್ದರು. 

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಅಯೋಧ್ಯೆಯ ರಾಮಲಲ್ಲಾ ಪ್ರತ್ಯಕ್ಷನಾಗಿ ಆಶೀರ್ವದಿಸಿದರೆ ಹೇಗಿರತ್ತೆ? ರೋಮಾಂಚಕಾರಿ ವಿಡಿಯೋ ವೈರಲ್​
75 ಸಾವಿರದ ಫೋನ್‌ ಬರೀ 37 ಸಾವಿರಕ್ಕೆ, ಇದು ಫ್ಲಿಪ್‌ಕಾರ್ಟ್‌ ಬೆಸ್ಟ್‌ ಆಫರ್‌