
ಬೆಂಗಳೂರು (ಮೇ.27): ಬೆಂಗಳೂರು ಮೂಲದ ಟೆಕ್ ಸ್ಟಾರ್ಟ್ ಅಪ್ ಕಂಪನಿಯೊಂದು ಎಲೆಕ್ಟ್ರಿಕ್ ಬೈಕ್ ವೊಂದನ್ನು ನಿರ್ಮಿಸುತ್ತಿದೆ. ಒಂದು ಸಲ ರಿಚಾರ್ಜ್ ಮಾಡಿದರೆ 500 ಕಿ.ಮೀ ಓಡಬಲ್ಲ ಸಾಮರ್ಥ್ಯ ಈ ಬೈಕ್ ಇರಲಿದೆ.
ಹೌದು ಬೆಂಗಳೂರು ಮೂಲದ ಮ್ಯಾನಕಾಮೆ ಇಪಿ-1 ಎಂಬ ಟೆಕ್ ಸ್ಟಾರ್ಟ್ ಅಪ್ ಕಂಪನಿ ಈ ಬೈಕ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದು, ಗಂಟೆಗೆ 250 ಕಿ.ಮೀ ದೂರ ಚಲಿಸಬಲ್ಲ ಸಾಮರ್ಥ್ಯ ಹೊಂದಿದೆ ಎಂದು ಕಂಪನಿ ತಿಳಿಸಿದೆ. ಅಲ್ಲದೇ ಈ ಬೈಕ್ ನಿರ್ಮಾಣ ಕಾರ್ಯಕ್ಕೆ ಸಾವರ್ವಜನಿಕರಿಂದ ದೇಣಿಗೆ ಕೂಡ ಸಂಗ್ರಹಿಸುತ್ತಿದೆ.
18.4 kWh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಕಡಿಮೆ ವಿದ್ಯುತ್ ಬಳಕೆಯಾಗಲಿದೆ ಎನ್ನಲಾಗಿದೆ. ಈಗಾಗಲೇ ಬೈಕ್ ನಿರ್ಮಾಣ ಕಾರ್ಯ ಮುಂದುವರೆದಿದ್ದು, ಶೀಘ್ರದಲ್ಲೇ ಮೊದಲ ಭಾರತೀಯ ಎಲೆಕ್ಟ್ರಿಕ್ ಬೈಕ್ ಮಾರುಕಟ್ಟೆಗೆ ಅಪ್ಪಳಿಸಲಿದೆ. ಈ ಎಲೆಕ್ಟ್ರಿಕ್ ಬೈಕ್ ಕುರಿತು ಇನ್ನಷ್ಟು ಮಾಹಿತಿಗಳು ಹೊರಬೀಳಬೇಕಿದ್ದು, ಮ್ಯಾನಕಾಮೆ ಕಂಪನಿ ಈ ಬೈಕ್ ತಂತ್ರಜ್ಞಾನದ ಕುರಿತು ಮತ್ತಷ್ಟು ಮಾಹಿತಿ ನೀಡಲಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.