
ಬೆಂಗಳೂರು: ಈದ್ ಉಲ್ ಫಿತರ್ ಹಬ್ಬದ ಅಂಗವಾಗಿ ಬಿಎಸ್‌ಎನ್‌ಎಲ್ ವತಿಯಿಂದ ಗ್ರಾಹಕರಿಗೆ ವಿಶೇಷ ರೀಚಾರ್ಜ್ ಕೊಡುಗೆ ನೀಡಲಾಗಿದೆ.
ಬಿಎಸ್‌ಎನ್‌ಎಲ್ ಪ್ರೀಪೇಯ್ಡ್ ಗ್ರಾಹಕರು 786 ರು.ಗೆ ರೀಚಾರ್ಜ್ ಮಾಡಿಸಿಕೊಂಡರೆ ಅನ್‌ಲಿಮಿಟೆಡ್ ಕರೆಗಳು, ಪ್ರತಿದಿನ 2 ಜಿ.ಬಿ ಡಾಟಾ, 100 ಎಸ್ ಎಂಎಸ್, 150 ದಿನ ವ್ಯಾಲಿಡಿಟಿ ಪಡೆಯಬಹುದು.
ಇದು ಸೀಮಿತ ಅವಧಿಯ ಕೊಡುಗೆಯಾಗಿದ್ದು, ಜೂ 26 ವರೆಗೆ ಮಾತ್ರ ಲಭ್ಯವಿದೆ. ಕೊಡುಗೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಬಿಎಸ್ಎನ್ಎಲ್ ವೆಬ್‌ಸೈಟ್‌ನಲ್ಲಿ ಪಡೆಯಬಹುದಾಗಿದೆ ಎಂದು ಬಿಎಸ್‌ಎನ್‌ಎಲ್ ಮುಖ್ಯ ಮಹಾ ಪ್ರಬಂಧಕ ಆರ್.ಮಣಿ ತಿಳಿಸಿದ್ದಾರೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.