ಜಯೊ, ಪೇಟಿಎಂಗೆ ಕೇಂದ್ರದ ನೋಟಿಸ್

Published : Feb 10, 2017, 12:12 PM ISTUpdated : Apr 11, 2018, 01:10 PM IST
ಜಯೊ, ಪೇಟಿಎಂಗೆ ಕೇಂದ್ರದ ನೋಟಿಸ್

ಸಾರಾಂಶ

ವಾಣಿಜ್ಯ ಉದ್ದೇಶಕ್ಕಾಗಿ ಪ್ರಧಾನಿ ಹೆಸರು ಮತ್ತು ಚಿತ್ರ ಬಳಕೆ ತಡೆಯುವ, ಲಾಂಛನ ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯ್ದೆ 1950ರ ಅನ್ವಯ ನೋಟಿಸ್ ನೀಡಲಾಗಿದೆ.

ನವದೆಹಲಿ(ಫೆ.10): ತಮ್ಮ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೊ ಬಳಸಿಕೊಂಡಿದ್ದುದಕ್ಕಾಗಿ ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೊ ಮತ್ತು ಪೇಟಿಎಂ ಸಂಸ್ಥೆಗಳಿಗೆ ಸರ್ಕಾರ ನೋಟಿಸ್ ಜಾರಿಗೊಳಿಸಿದೆ. ರಾಷ್ಟ್ರಪತಿ, ಪ್ರಧಾನಿ ಮತ್ತು ಐತಿಹಾಸಿಕ ವ್ಯಕ್ತಿಗಳ ಘನತೆಯನ್ನು ಕಾಪಾಡುವ ಗ್ರಾಹಕ ವ್ಯವಹಾರಗಳ ಸಚಿವಾಲಯದಿಂದ ನೋಟಿಸ್ ಜಾರಿಯಾಗಿದೆ.

ವಾಣಿಜ್ಯ ಉದ್ದೇಶಕ್ಕಾಗಿ ಪ್ರಧಾನಿ ಹೆಸರು ಮತ್ತು ಚಿತ್ರ ಬಳಕೆ ತಡೆಯುವ, ಲಾಂಛನ ಮತ್ತು ಹೆಸರುಗಳ (ಅನುಚಿತ ಬಳಕೆ ತಡೆ) ಕಾಯ್ದೆ 1950ರ ಅನ್ವಯ ನೋಟಿಸ್ ನೀಡಲಾಗಿದೆ. ಎರಡೂ ಕಂಪೆನಿಗಳಿಗೆ ನೋಟಿಸ್ ಕಳುಹಿಸಿದ್ದೇವೆ. ಇನ್ನಷ್ಟೇ ಪ್ರತಿಕ್ರಿಯೆ ಲಭ್ಯವಾಗಬೇಕಾಗಿದೆ ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ಹೇಮ್ ಪಾಂಡೆ ಹೇಳಿದ್ದಾರೆ.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
Viral Video: ಗಗನಯಾನ್‌ ಮಿಷನ್‌ ಲ್ಯಾಡಿಂಗ್‌ ಪ್ಯಾರಚೂಟ್‌ ಯಶಸ್ವಿ ಪರೀಕ್ಷೆ ನಡೆಸಿದ ಇಸ್ರೋ