
ಬೆಂಗಳೂರು (ಜೂ. 02): ಸಮಾಜದಲ್ಲಿ ದಿನದಿಂದ ದಿನಕ್ಕೆ ಸೈಬರ್ ವಂಚನೆ (Cyber Crime) ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಲ್ಲರೂ ಇವುಗಳಿಗೆ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ (C N Ashwath Narayan) ಹೇಳಿದ್ದಾರೆ. ರಾಜ್ಯ ಸರಕಾರದ ಸೈಬರ್ ಸೆಕ್ಯುರಿಟಿ ಉತ್ಕೃಷ್ಟತಾ ಕೇಂದ್ರದ ಭಾಗವಾದ ಸೈಸೆಕ್ ಕೇಂದ್ರದ 'ಸೈಬರ್ ವಾರ್ತಿಕಾ' ಮಾಸಿಕದ ವಾರ್ಷಿಕ ಸಂಚಿಕೆಯನ್ನು ಅವರು ಗುರುವಾರ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಟರ್ನೆಟ್ ಬಳಸುವ ಮುನ್ನ ಅದರ ಬಗ್ಗೆ ಸರಿಯಾದ ಜಾಗೃತಿ ಇರಬೇಕಾದ್ದು ಅಗತ್ಯವಾಗಿದೆ ಎಂದರು. ಈ ಮಾಸಿಕದಲ್ಲಿ ಸೈಬರ್ ವಂಚನೆಗಳ ಮಾಹಿತಿ ಮತ್ತು ಅಂಕಿಅಂಶಗಳು, ಉಲ್ಲಂಘನೆ, ಮಾಹಿತಿಯುಕ್ತ ಪೋಸ್ಟರುಗಳು ಮತ್ತು ಸ್ಪರ್ಧೆಗಳು ಇರುತ್ತವೆ ಎಂದು ಅವರು ನುಡಿದರು.
ಕೋವಿಡ್ ನಂತರದ ಕಾಲಘಟ್ಟದಲ್ಲಿ ಸೈಬರ್ ಸುರಕ್ಷತೆಯು ಅತ್ಯಂತ ಅಗತ್ಯವಾಗಿದೆ. ಯುವಜನರು ಮತ್ತು ಹಿರಿಯರಿಬ್ಬರೂ ಈ ಬಗ್ಗೆ ಅರಿವು ಬೆಳೆಸಿ ಕೊಳ್ಳಬೇಕು ಎಂದು ಸಚಿವರು ಹೇಳಿದರು.ಕಾರ್ಯಕ್ರಮದಲ್ಲಿ ಕಿಟ್ಸ್ ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಗರಾಜ್, ಸೈಸೆಕ್ ಮುಖ್ಯಸ್ಥ ಡಾ.ಕಾರ್ತಿಕ್ ರಾವ್ ಬಪ್ಪನಾಡು, ಕೆಎಸ್ಸಿಎಸ್ಟಿ ಕಾರ್ಯದರ್ಶಿ ಪ್ರೊ. ಅಶೋಕ ರಾಯಚೂರು, ಕಾರ್ಯನಿರ್ವಾಹಕ ಕಾರ್ಯದರ್ಶಿ ಎಚ್.ಹೇಮಂತಕುಮಾರ್, ಪ್ರೊ.ನಾಗರತ್ನ ಮುಂತಾದ ವರಿದ್ದರು.
ಇದನ್ನೂ ಓದಿ: ಬ್ರಿಟನ್‌ನ 20 ವಿವಿ ಕುಲಪತಿಗಳ ನಿಯೋಗದಿಂದ ಜೂನ್ 9ರಂದು ಕರ್ನಾಟಕ ಭೇಟಿ
ಇದನ್ನೂ ಓದಿ: 1000 ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡೇಟಾ ಸಾಕ್ಷರತೆಗೆ ಲಂಡನ್‌ನ ಐಒಎ ಆಸಕ್ತಿ
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.