ಇಜ್ಞಾನಕ್ಕೆ ಹದಿನೈದರ ಸಂಭ್ರಮ: 'ಮೂಲವಸ್ತುಗಳು' ಕಿರುಪುಸ್ತಕ ಲೋಕಾರ್ಪಣೆ

Published : May 07, 2022, 05:58 PM IST
ಇಜ್ಞಾನಕ್ಕೆ ಹದಿನೈದರ ಸಂಭ್ರಮ: 'ಮೂಲವಸ್ತುಗಳು' ಕಿರುಪುಸ್ತಕ ಲೋಕಾರ್ಪಣೆ

ಸಾರಾಂಶ

*"ಕನ್ನಡದಲ್ಲೂ ಅವಕಾಶಗಳಿವೆಯೆಂದು ತೋರಿಸಬೇಕು" *ಇಜ್ಞಾನ ಹದಿನೈದರ ಸಂಭ್ರಮದಲ್ಲಿ ಡಾ. ಎ. ಎಂ. ರಮೇಶ್ *ತಂತ್ರಾಂಶ ಸಾಧನಗಳ ನೆರವಿನಿಂದ ಸಿದ್ಧಪಡಿಸಿದ ಪುಸ್ತಕ ಲೋಕಾರ್ಪಣೆ

ಬೆಂಗಳೂರು (ಮೇ. 07):  "ಇಂಗ್ಲಿಷನ್ನು ಅವಕಾಶಗಳ ಭಾಷೆಯೆಂದು ಕರೆಯುತ್ತಾರೆ. ಕನ್ನಡದಲ್ಲೂ ಅವಕಾಶಗಳನ್ನು ಸೃಷ್ಟಿಸುವುದು, ಅಂತಹ ಅವಕಾಶಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ನಮ್ಮ ಜವಾಬ್ದಾರಿ" ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ. ಎಂ. ರಮೇಶ್ ಹೇಳಿದರು. ಸುರಾನ ಕಾಲೇಜಿನಲ್ಲಿ ನಡೆದ ಇಜ್ಞಾನ (Ejnana) ಜಾಲತಾಣದ ಹದಿನೈದನೇ ವರ್ಷದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.   

ಕನ್ನಡದ ವಿಜ್ಞಾನ-ತಂತ್ರಜ್ಞಾನ ಜಾಲತಾಣ 'ಇಜ್ಞಾನ' ನಡೆದು ಬಂದ ದಾರಿಯ ಕುರಿತು ಸಂಪಾದಕ ಟಿ. ಜಿ. ಶ್ರೀನಿಧಿ ಮಾತನಾಡಿದರು. ವಿಜ್ಞಾನ-ತಂತ್ರಜ್ಞಾನದ ವಿಷಯಗಳನ್ನು ಕನ್ನಡದಲ್ಲಿ ಹೇಳುವುದಷ್ಟೇ ಅಲ್ಲ, ವಿಜ್ಞಾನ ಸಂವಹನದಲ್ಲೂ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. 

ಇಂಗ್ಲಿಷಿನಲ್ಲಿ ಲಭ್ಯವಿರುವ ಮಾಹಿತಿಯನ್ನು ಸಂಗ್ರಹಿಸಿ, ಸರಳ ತಂತ್ರಾಂಶ ಸಾಧನಗಳ ನೆರವಿನಿಂದ ಕನ್ನಡದಲ್ಲಿ ರೂಪಿಸಲಾದ 'ಮೂಲವಸ್ತುಗಳು' ಎಂಬ ಕಿರುಪುಸ್ತಕವನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು.

ಇದನ್ನೂ ಓದಿ: ಮಂಗಳನ ನಂತರ ಈಗ ಶುಕ್ರಯಾನಕ್ಕೆ ಇಸ್ರೋ ಸಜ್ಜು!

ಹಿರಿಯ ವಿಜ್ಞಾನ ಸಂವಹನಕಾರ ಕೊಳ್ಳೇಗಾಲ ಶರ್ಮ ಮಾತನಾಡಿ, "ಭಾಷೆ ಎನ್ನುವುದು ವಿಜ್ಞಾನದ ಕಲ್ಪನೆಗಳನ್ನು ಗ್ರಹಿಸಲು ನಮಗೆ ನೆರವಾಗುವ ಮಾಧ್ಯಮ. ವಿಜ್ಞಾನದ ವಿಷಯಗಳನ್ನು ಇಂಗ್ಲಿಷಿನಲ್ಲಿ ಹೇಳಿದಷ್ಟೇ ಪರಿಣಾಮಕಾರಿಯಾಗಿ ನಮ್ಮ ಭಾಷೆಯಲ್ಲೂ ಹೇಳಬಹುದು. ಕನ್ನಡಕ್ಕೆ ವಿಜ್ಞಾನ ಕಲಿಸುವ ಸಾಮರ್ಥ್ಯ ಇದೆ, ಅದನ್ನು ನಾವು ಬಳಸಿಕೊಳ್ಳಬೇಕಿದೆ," ಎಂದು ಹೇಳಿದರು. 

ಇದೇ ಸಂದರ್ಭದಲ್ಲಿ ನಡೆದ 'ಕನ್ನಡದಲ್ಲಿ ವಿಜ್ಞಾನ-ತಂತ್ರಜ್ಞಾನ ಶಿಕ್ಷಣ' ವಿಚಾರ ಸಂಕಿರ್ಣದಲ್ಲಿ ಲೇಖಕ ಟಿ. ಎಸ್. ಗೋಪಾಲ್, ಡಾ. ಎಸ್. ಎಲ್. ಮಂಜುನಾಥ್, ಡಾ. ಎಲ್. ಜಿ. ಮೀರಾ, ಶ್ರೀಮತಿ ಎಂ. ಎಸ್. ಗಾಯತ್ರಿ ಹಾಗೂ ಶ್ರೀ ನಾರಾಯಣ ಬಾಬಾನಗರ ವಿಚಾರ ಮಂಡನೆ ಮಾಡಿದರು.   

ಸುರಾನ ಕಾಲೇಜಿನ ಡಾ. ಭವಾನಿ ಎಂ. ಆರ್., ಡಾ. ವತ್ಸಲಾ ಮೋಹನ್, ಡಾ. ಸುಷ್ಮಾ, ಲೇಖಕ ಉದಯ ಶಂಕರ ಪುರಾಣಿಕ, ಇಜ್ಞಾನ ಟ್ರಸ್ಟ್‌ನ ಡಾ. ಎಚ್. ಆರ್. ಅಪ್ಪಣ್ಣಯ್ಯ, ಚೇತನ್ ಗುಪ್ತ, ಅಭಿಷೇಕ್ ಜಿ. ಎಸ್. ಮತ್ತಿತರರು ಉಪಸ್ಥಿತರಿದ್ದರು.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

Read more Articles on
click me!

Recommended Stories

ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ
ಆಧಾರ್​ ಕಾರ್ಡ್​ ಕಳೆದು ನಂಬರ್​ ಮರೆತಿರುವಿರಾ? ಹಾಗಿದ್ರೆ ಈ ಸ್ಟೆಪ್​ ಫಾಲೋ ಮಾಡಿ ವಾಪಸ್​ ಪಡೆಯಿರಿ