
ಹೈದರಾಬಾದ್: ವಿಶ್ವದ ಪ್ರಸಿದ್ಧ ಸಾಮಾಜಿಕ ಜಾಲ ತಾಣವಾಗಿರುವ ಫೇಸ್‌ಬುಕ್‌ನಲ್ಲಿ, 2017ರ ಡಿಸೆಂಬರ್‌ವರೆಗೂ 20 ಕೋಟಿ ನಕಲಿ ಖಾತೆಗಳಿದ್ದು, ಅದರಲ್ಲಿ ಭಾರತೀಯರೇ ಹೆಚ್ಚು ನಕಲಿ ಖಾತೆ ಹೊಂದಿದ್ದಾರೆ ಎಂಬುದಾಗಿ ಫೇಸ್’ಬುಕ್ ತಿಳಿಸಿದೆ.
2017ರ ಡಿ.31ರ ವೇಳೆಗೆ 213 ಕೋಟಿ ಖಾತೆಗಳನ್ನು ಹೊಂದಿದ ಫೇಸ್‌ಬುಕ್, ಖಾತೆಯನ್ನು ಶೇ.14ರಷ್ಟು ವೃದ್ಧಿಸಿಕೊಂಡಿತ್ತು. ಇದರಲ್ಲಿ ಶೇ.10ರಷ್ಟು ನಕಲಿ ಖಾತೆಗಳಿವೆ ಎಂದು ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ.
ಅಭಿವೃದ್ಧಿ ಮಾರುಕಟ್ಟೆ ಹೊಂದಿದ ರಾಷ್ಟ್ರಗಳಿಗಿಂತ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಭಾರತ, ಇಂಡೋನೇಷ್ಯಾ, ಪಿಲಿಫ್ಪೀನ್ಸ್‌ನಲ್ಲೇ ಹೆಚ್ಚು ನಕಲಿ ಖಾತೆಗಳಿವೆ ಎಂದು ಸಂಸ್ಥೆ ಅಭಿಪ್ರಾಯಪಟ್ಟಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.