
ನವದೆಹಲಿ, [ಏ01]: ದೇಶದಲ್ಲಿ ಲೋಕಸಭೆ ಚುನಾವಣೆಯ ಬಿಸಿ ಜೋರಾಗಿದೆ. ಅದರಲ್ಲೂ ಫೇಸ್ಬುಕ್, ಟ್ವಿಟರ್, ವಾಟ್ಸಾಪ್ನಲ್ಲಿ ಚುನಾವಣದ ಕಾವು ದಿನದಿಂದ ದಿನಕ್ಕೆ ರಂಗೇರಿದೆ.
ಬಹುಮಖ್ಯವಾಗಿ ಸಾಮಾಜಿಕ ಜಾಲತಾಣಗಳ ಪ್ರಮುಖ ವೇದಿಕೆಯಾಗಿರುವ ಫೇಸ್ಬುಕ್ನಲ್ಲಿ ಪ್ರಚಾರದ ಅಬ್ಬರ, ಆರೋಪ, ಪ್ರತ್ಯಾರೋಪಗಳ ಭರಾಟೆ ಜೋರಾಗಿದೆ. ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ವಿರುದ್ಧ ಟೀಕಾಪ್ರಹಾರ ಮಾಡುವುದಕ್ಕೆ ಫೇಸ್ಬುಕ್ ಕೆಲವು ಖಾತೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ.
ಕಾಂಗ್ರೆಸ್’ನ 687 ಪೇಜ್ ಡಿಲೀಟ್ ಮಾಡಿದ ಫೇಸ್’ಬುಕ್!
ಕಾಂಗ್ರೆಸ್’ನ ಐಟಿ ಸೆಲ್’ನೊಂದಿಗೆ ಗುರುತಿಸಿಕೊಂಡಿದ್ದ 687 ಪೇಜ್ ಹಾಗೂ ಖಾತೆಗಳನ್ನು ಫಿನಿಶ್ ಮಾಡಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ‘ನಮೋ ಆ್ಯಪ್’ಗೆ ಸಂಬಂಧಿಸಿದ ಒಟ್ಟು 15 ಫೇಸ್ಬುಕ್ ಪೇಜ್ಗಳಿಗೆ ಕತ್ತರಿ ಬಿದ್ದಿದೆ.
ಫೇಸ್ಬುಕ್ ಮೊದಲು ಪಾಕಿಸ್ತಾನ ಸೇನೆಗೆ ಸಂಬಂಧಿಸಿದ ಕೆಲ ಖಾತೆಗಳನ್ನೂ ರಿಮೂವ್ ಮಾಡಿತ್ತು. ಇದೀಗ ನಮೋ ಆ್ಯಪ್ ಮೇಲೆ ಕಣ್ಣಿಟ್ಟಿರುವ ಫೇಸ್ಬುಕ್, ಸಿಲ್ವರ್ ಐಟಿ ಸಂಸ್ಥೆಗೆ ಸಂಬಂಧಿಸಿದ 15 ಫೇಸ್ಬುಕ್ ಪೇಜ್ಗಳನ್ನ ಡಿಲೀಟ್ ಮಾಡಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.