
ಬೆಂಗಳೂರು(ಅ.16): ಗ್ಯಾಸ್ ಸಿಲಿಂಡರ್ ಸ್ಫೋಟಿಸಿ 6 ಮನೆಗಳು ಕುಸಿದು, ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಈಜಿಪುರದಲ್ಲಿ ನಡೆದಿದೆ.
ಇಂದು ಬೆಳಗ್ಗೆ 6 30. ಕ್ಕೆ ಸಿಲಿಂಡರ್ ಸ್ಫೋಟಗೊಂಡು 6 ಮನೆಗಳು ಕುಸಿದಿದ್ದು, ಈ ಸ್ಫೋಟದಿಂದಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈಗಾಗಲೇ 6 ಮಂದಿಯನ್ನು ಹೊರತೆಗೆಯಲಾಗಿದ್ದು, ಇನ್ನು ಮೂವರು ಅವಶೇಷಗಳಡಿ ಸಿಲುಕಿದ್ದು, ಅಗ್ನಿಶಾಮಕ ಸದಳದಿಂದ ರಕ್ಷಣಾ ಕಾರ್ಯ ಮುಂದುವರೆದಿದೆ.
ಮೃತರನ್ನು ಕಲಾವತಿ(68), ರವಿಚಂದ್ರನ್(46), ಹರಿಪ್ರಸಾದ್(19), ಪವನ್ ಕಲ್ಯಾಣ(19), ಅಶ್ವಿನಿ (ಗರ್ಭಿಣಿ) ಎಂದು ಗುರುತಿಸಲಾಗಿತ್ತು. ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.