ಎಲೆಕ್ಟ್ರಿಕಲ್ ಕಾರು ಖರೀದಿಸುವವರಿಗೆ ಮೋದಿ ಸರ್ಕಾರದಿಂದ ಬಂಪರ್ ಆಫರ್

Published : Aug 03, 2018, 09:01 PM IST
ಎಲೆಕ್ಟ್ರಿಕಲ್ ಕಾರು ಖರೀದಿಸುವವರಿಗೆ ಮೋದಿ ಸರ್ಕಾರದಿಂದ ಬಂಪರ್ ಆಫರ್

ಸಾರಾಂಶ

ಭಾರತದಲ್ಲಿ ಎಲೆಕ್ಟ್ರಿಕಲ್ ಕಾರು ಉತ್ಪಾದನೆ ಹಾಗೂ ಮಾರಾಟವನ್ನ ಹೆಚ್ಚಿಸಲು ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಇದೀಗ ಎಲೆಕ್ಟ್ರಿಕಲ್ ಕಾರು ಖರೀದಿಸೋ ಗ್ರಾಹಕನಿಗೆ ಭಂಪರ್ ಆಫರ್ ನೀಡಲು ಮೋದಿ ಸರ್ಕಾರ ಸಜ್ಜಾಗಿದೆ. ಹಾಗಾದರೆ ಮೋದಿ ಸರ್ಕಾರದ ಹೊಸ ಯೋಜನೆ ಏನು? ಇಲ್ಲಿದೆ ವಿವರ

ಬೆಂಗಳೂರು(ಆ.03): ಇಡೀ ವಿಶ್ವವೀಗ ಪೆಟ್ರೋಲ್ ಹಾಗೂ ಡಿಸೆಲ್ ಕಾರುಗಳನ್ನ ಬದಿಗಿಟ್ಟು ಎಲೆಕ್ಟ್ರಿಕಲ್ ಕಾರು ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದಕ್ಕೆ ಭಾರತ ಕೂಡ ಹೊರತಾಗಿಲ್ಲ. ಭಾರತದಲ್ಲಿ ಎಲೆಕ್ಟ್ರಿಕಲ್ ಕಾರುಗಳನ್ನ ಜನಸಾಮಾನ್ಯರಿಗೆ ತಲುಪಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂಪರ್ ಆಫರ್ ನೀಡಲು ಮುಂದಾಗಿದೆ.

ಎಲೆಕ್ಟ್ರಿಕಲ್ ಕಾರು ಉತ್ಪಾದನೆ ಹಾಗೂ ಮಾರಾಟವನ್ನ ಹೆಚ್ಚಿಸಲು ಕೇಂದ್ರ ಸರ್ಕಾರ ಈಗಾಗಲೇ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಕಾರಿನ ಬ್ಯಾಟರಿಗೆ ಜಿಎಸ್‌ಟಿ ತೆರಿಗೆ ಕೂಡ ಕಡಿಮೆಗೊಳಿಸೋ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ.

ಎಲೆಕ್ಟ್ರಿಕಲ್ ಕಾರು ಖರೀದಿಸುವ ಗ್ರಾಹಕರಿಗೆ ಬರೋಬ್ಬರಿ 2.5 ಲಕ್ಷ ರೂಪಾಯಿ ಸಬ್ಸಿಡಿ  ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ.  ಜೊತೆಗೆ ನಗರಗಳಲ್ಲಿ ಎಲೆಕ್ಟ್ರಿಕಲ್ ಕಾರಿನ ಚಾರ್ಜಿಂಗ್ ಸ್ಟೇಶನ್‌ಗಳನ್ನ ಹೆಚ್ಚಿಸಲು ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಬರೋಬ್ಬರಿ 9000 ಕೋಟಿ ರೂಪಾಯಿ ತೆಗೆದಿಡಲಿದೆ.

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಈ ಮಹತ್ವದ ಯೋಜನೆಗಳನ್ನ ಜಾರಿಗೊಳಿಸಲಿದ್ದಾರೆ.  ಈ ಮೂಲಕ ಮಂಬರೋ ದಿನಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಹಾಗೂ ಡಿಸೆಲ್ ಕಾರಿನ ಪ್ರಮಾಣ ತಗ್ಗಿಸಲು ಮೋದಿ ಸಜ್ಜಾಗಿದ್ದಾರೆ. ಇಷ್ಟೇ ಅಲ್ಲ ಇದರೊಂದಿಗೆ ಪರಿಸರ ಮಾಲಿನ್ಯ ತಡೆಗಟ್ಟಲು ಮಹತ್ವದ ಯೋಜನೆಗೆ ಕೈಹಾಕಿದ್ದಾರೆ.

ಷರತ್ತುಗಳು ಅನ್ವಯ: ಎಲೆಕ್ಟ್ರಿಕಲ್ ಕಾರುಗಳಿಗೆ ಕೇಂದ್ರ ಸರ್ಕಾರ ನೀಡೋ ಸಬ್ಸಿಡಿಗೆ ಕೆಲ ಷರತ್ತುಗಳನ್ನ ವಿಧಿಸಿದೆ. ಪೆಟ್ರೋಲ್ ಅಥವಾ ಡೀಸೆಲ್ ಕಾರು ಹೊಂದಿದೆ ಗ್ರಾಹಕರಿಗೆ ಈ ಸಬ್ಸಿಡಿ ಅನ್ವಯವಾಗಲಿದೆ. ಹಳೆ ಪೆಟ್ರೋಲ್ ಅಥವಾ ಡೀಸೆಲ್ ಕಾರು ಹೊಂದಿದ ಗ್ರಾಹಕ ಈ ಕಾರನ್ನ ಗುಜರಿಗೆ ನೀಡಿ ನೂತನ ಎಲೆಕ್ಟ್ರಿಕಲ್ ಕಾರು ಖರೀದಿಸಬೇಕಿದೆ. 

ಹೊಸದಾಗಿ ಎಲೆಕ್ಟ್ರಿಕಲ್ ಕಾರು ಖರೀದಿಸೋ ಗ್ರಾಹಕರಿಗೆ ಕೇಂದ್ರ ಸರ್ಕಾರ ವಿಶೇಷ ಆಫರ್ ನೀಡಲು ತಯಾರಿ ನಡೆಸುತ್ತಿದೆ. ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕಲ್ ಕಾರಿನ ಮಾರಾಟ ಹೆಚ್ಚಿಸೋ ಜೊತೆಗೆ ನಿರ್ಮಲ ಪರಿಸರ ನಿರ್ಮಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

PREV
click me!