
ನವದೆಹಲಿ: ಮಹಿಳೆಯರ ಭದ್ರತೆ ಬಗ್ಗೆ ತನ್ನ ಗಮನ ಕೇಂದ್ರೀಕರಿಸಿರುವ ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಸಾಮಾನ್ಯ(ಫೀಚರ್) ಫೋನ್‌ಗಳಲ್ಲಿಯೂ ಜಿಪಿಎಸ್ ವ್ಯವಸ್ಥೆ ಕಡ್ಡಾಯಗೊಳಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮಹಿಳೆಯರು ಸಂಕಷ್ಟದಲ್ಲಿ ಸಿಲುಕಿದ ಸಂದರ್ಭಗಳಲ್ಲಿ ಅವರ ರಕ್ಷಣೆಗೆ ಸಹಕಾರಿಯಾಗುವಂಥ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್‌ಗಳನ್ನು ಮೊಬೈಲ್ ಫೋನ್‌ಗಳಲ್ಲಿ ಮೊಬೈಲ್ ತಯಾರಕರು ಕಡ್ಡಾಯವಾಗಿ ಅಳವಡಿಸಲೇಬೇಕು ಎಂದು ಕೇಂದ್ರ ಸರ್ಕಾರ ಆದೇಶಿಸಿತ್ತು.
ಈ ವ್ಯವಸ್ಥೆಗಳ ಅಳವಡಿಕೆಗೆ ಹೆಚ್ಚಿನ ಹಣ ವ್ಯಯವಾಗಲಿದ್ದು, ಫೀಚರ್ ಫೋನ್‌ಗಳು ಮತ್ತು ಸ್ಮಾರ್ಟ್‌ಫೋನ್‌ಗಳಲ್ಲದ ಫೋನ್‌ಗಳ ಬೆಲೆ ದುಬಾರಿಯಾಗಬಹುದು ಎಂದು ಮೊಬೈಲ್ ತಯಾರಿಕಾ ಕಂಪನಿಗಳು ಹೇಳಿದ್ದವು. ಹಾಗಾಗಿ, ಇವುಗಳಿಗೆ ಕಡ್ಡಾಯ ಜಿಪಿಎಸ್‌ನಿಂದ ವಿನಾಯ್ತಿ ನೀಡಲಾಗಿತ್ತು.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.