
ನವದೆಹಲಿ(ಜು.11): ಭಾರತದಲ್ಲಿ ಟಿಕ್‌ಟಾಕ್ ಆ್ಯಪ್ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹೀಗಾಗಿ ನಿಷೇಧಕ್ಕೂ ಒಳಗಾಗಿತ್ತು. ಆದರೆ ಇದೀಗ ಟಿಕ್‌ಟಾಕ್ ಆ್ಯಪ್ ಹೊಸ ವಿವಾದ ಸೃಷ್ಟಿಸಿದೆ. ಟಿಕ್‌ಟಾಕ್ ಆ್ಯಪ್ ಜಿಹಾದ್ ಹಾಗೂ ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಹೀಗಾಗಿ ತಕ್ಷಣವೇ ಟಿಕ್‌ಟಾಕ್ ಆ್ಯಪ್ ನಿಷೇಧಿಸುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್‌ರಿಗೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ವೈರಸ್ ದಾಳಿ! ನಿಮ್ದು ಸೇಫ್ ಇದಿಯಾ ನೋಡಿ...
ಸಾಮಾಜಿಕ ಜಾಲತಾಣದಲ್ಲಿ ಇದೀಗ ಟಿಕ್‌ಟಾಕ್ ನಿಷೇಧಿಸುವಂತೆ ಅಭಿಯಾನ ಆರಂಭಗೊಂಡಿದೆ. ಹಲವರು ಮೋದಿ ಹಾಗೂ ರವಿಶಂಕರ್ ಪ್ರಸಾದ್‌ಗೆ ಮನವಿ ಮಾಡಿದ್ದಾರೆ. ಇದಕ್ಕೆ ಕಾರಣ ಜಾರ್ಖಂಡ್‌ನಲ್ಲಿ ಹತ್ಯೆಯಾದ ತ್ರಬೈಝ್ ಅನ್ಸಾರಿ ಪರ ಕೆಲ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಟಿಕ್‌ಟಾಕ್‌ನಲ್ಲಿ ಜಿಹಾದ್‌ಗೆ ಪ್ರಚೋದನೆ ನೀಡುವಂತೆ ವಿಡಿಯೋಗಳನ್ನು ಹರಿಬಿಡಲಾಗಿತ್ತು. ಈ ಕುರಿತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಇದರಿಂದ ಆಕ್ರೋಶಗೊಂಡ ಹಲವರು ಟಿಕ್‌ಟಾಕ್ ಬ್ಯಾನ್ ಮಾಡುವಂತೆ ಆಗ್ರಹಿಸಿದ್ದಾರೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.