ಟಿಕ್‌ಟಾಕ್‌ ಸ್ಥಾನ ತುಂಬಲು ಬರಲಿದೆ ಇನ್‌ಸ್ಟಾಗ್ರಾಂ ರೀಲ್ಸ್‌!

Published : Jul 08, 2020, 01:26 PM ISTUpdated : Jul 08, 2020, 01:27 PM IST
ಟಿಕ್‌ಟಾಕ್‌ ಸ್ಥಾನ ತುಂಬಲು ಬರಲಿದೆ ಇನ್‌ಸ್ಟಾಗ್ರಾಂ ರೀಲ್ಸ್‌!

ಸಾರಾಂಶ

ಟಿಕ್‌ಟಾಕ್‌ ಸೇರಿದಂತೆ ಚೀನಾ ಮೂಲದ 59 ಆ್ಯಪ್‌ಗಳನ್ನು ಭಾರತ ನಿಷೇಧ| ಟಿಕ್‌ಟಾಕ್‌ ಸ್ಥಾನ ತುಂಬಲು ಬರಲಿದೆ ಇನ್‌ಸ್ಟಾಗ್ರಾಂ ರೀಲ್ಸ್‌| 

ನವದೆಹಲಿ(ಜು.08): ಟಿಕ್‌ಟಾಕ್‌ ಸೇರಿದಂತೆ ಚೀನಾ ಮೂಲದ 59 ಆ್ಯಪ್‌ಗಳನ್ನು ಭಾರತ ನಿಷೇಧಿಸಿದ ಬೆನ್ನಲ್ಲೇ, ಫೇಸ್‌ಬುಕ್‌ ಮಾಲೀಕತ್ವದ ಸಾಮಾಜಿಕ ಜಾಲತಾಣವಾಗಿರುವ ಇನ್‌ಸ್ಟಾಗ್ರಾಂ ಚೀನಾದ ಟಿಕ್‌ಟಾಕ್‌ ಅನ್ನೇ ಹೋಲುವ ‘ರೀಲ್ಸ್‌’ ಎಂಬ ಹೊಸ ಆ್ಯಪನ್ನು ಭಾರತ ಸೇರಿದಂತೆ ಹಲವು ದೇಶಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಟಿಕ್‌ಟಾಕ್‌ ಸೇರಿ ಚೀನಿ ಆ್ಯಪ್‌ಗಳು ಅಮೆರಿಕದಲ್ಲೂ ನಿಷೇಧ?

‘ರೀಲ್ಸ್‌’ ಭಾವನೆಗಳನ್ನು ವ್ಯಕ್ತಪಡಿಸಬಹುದಾದ ಮತ್ತು ಮನೋರಂಜನಾತ್ಮಕವಾದ ಅಪ್ಲಿಕೇಶನ್‌. ರೀಲ್ಸ್‌ ಆ್ಯಪ್‌ನ ಅಪ್‌ಡೇಟೆಡ್‌ ವರ್ಶನ್‌ ಅನ್ನು ಹಲವು ದೇಶಗಳಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿದ್ದೇವೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಫೇಸ್‌ಬುಕ್‌ ವಕ್ತಾರರೊಬ್ಬರು ತಿಳಿಸಿದ್ದಾರೆ.

ಇನ್‌ಸ್ಟಾಗ್ರಾಂ ರೀಲ್ಸ್‌ ಎಂಬುದು ವಿಡಿಯೋ ಎಡಿಟಿಂಗ್‌ ಆ್ಯಪ್‌ ಆಗಿದ್ದು, ಆಡಿಯೋ ಮತ್ತು ವಿಡಿಯೋವನ್ನು ಸಂಯೋಜಿಸಿ 15 ಸೆಕೆಂಡ್‌ಗಳ ವಿಡಿಯೋಗಳನ್ನು ರಚಿಸಬಹುದು.

PREV

ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್‌ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್‌. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್‌ ಸಿಗುವ ಏಕೈಕ ತಾಣ ಏಷ್ಯಾನೆಟ್‌ ಸುವರ್ಣ ನ್ಯೂಸ್‌. ಹೊಸ ಗ್ಯಾಜೆಟ್‌ ರಿಲೀಸ್‌ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್‌ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್‌ ಎಕ್ಸ್‌ಪ್ಲೇನರ್ಸ್‌ ಹಾಗೂ ಗ್ಯಾಜೆಟ್‌ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.

click me!

Recommended Stories

75 ಸಾವಿರದ ಫೋನ್‌ ಬರೀ 37 ಸಾವಿರಕ್ಕೆ, ಇದು ಫ್ಲಿಪ್‌ಕಾರ್ಟ್‌ ಬೆಸ್ಟ್‌ ಆಫರ್‌
ಭಾರತದ ಶಾಶ್ವತ ಬಾಹ್ಯಾಕಾಶ ನಿವಾಸ ಬಿಎಎಸ್-01ಕ್ಕೆ ನೀಲಿ ನಕ್ಷೆ ಅಂತಿಮಗೊಳಿಸಿದ ಇಸ್ರೋ