
ಬೆಂಗಳೂರು(ಮೇ.02): ಮುಂಬರುವ ಜುಲೈ ತಿಂಗಳಲ್ಲಿ ಚಂದ್ರನ ಅನ್ಷೇಷಣೆಗಾಗಿ ಚಂದ್ರಯಾನ-2 ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತಿಳಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಇಸ್ರೋ, ಚಂದ್ರನ ದಕ್ಷಿಣ ಭಾಗದಲ್ಲಿರುವ ಖನಿಜ ನಿಕ್ಷೇಪಗಳ ಕುರಿತು ಮತ್ತಷ್ಟು ಸಂಶೋಧನೆ ನಡೆಸುವ ಉದ್ದೇಶದಿಂದ ಮುಂಬರುವ ಜುಲೈ 9ರಿಂದ 16ರ ಅವಧಿಯಲ್ಲಿ ಚಂದ್ರಯಾನ-2 ಯೋಜನೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದೆ.
ಚಂದ್ರಯಾನ-2 ಯೋಜನೆಗಾಗಿ ಇಸ್ರೋ GSLV Mk III (ಜಿಎಸ್ಎಲ್ವಿ ಎಂಕೆ 3) ಎಂಬ ಹೊಸ ಮಾದರಿಯ ರಾಕೆಟ್ ಒಂದನ್ನು ನಿರ್ಮಿಸಿದೆ. ಇದರ ಮೂಲಕ ಉಪಗ್ರಹವನ್ನು ಭೂ ಕಕ್ಷೆಯಿಂದ ಚಂದ್ರನ ಮೇಲ್ಮೈಗೆ ಉಡಾಯಿಸಲಾಗುವುದು.
ಉಡಾವಣೆಯ ನಂತರ ಪೂರ್ವ ನಿರ್ಧಾರಿತದಂತೆ ಉಪಗ್ರಹ ಚಂದ್ರನ ದಕ್ಷಿಣ ಧೃವದಲ್ಲಿ ಇಳಿಯಲಿದ್ದು, ಚಂದ್ರನ ಮೇಲ್ಮೈಯಲ್ಲಿರುವ ಶಕ್ತಿಯ ಪ್ರಮುಖ ಮೂಲವಾದ ಹೀಲಿಯಂ ಕುರಿತು ಸಂಶೋಧನೆ ನಡೆಸಲಿದೆ ಎಂದು ಇಸ್ರೋ ತಿಳಿಸಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.