ಅಗ್ಗದ ದರದಲ್ಲಿ ಇಂಟರ್ ನೆಟ್ ಸಿಗುವುದರಿಂದ ಸಾಮಾಜಿಕ ತಾಣಗಳ ಬಳಕೆ ಹೆಚ್ಚಾಗಿದೆ| ಸುಳ್ಳು ಸುದ್ದಿ ಹಬ್ಬಿಸುವಿಕೆ, ದ್ವೇಷದ ಹೇಳಿಕೆ, ರಾಷ್ಟ್ರ ವಿರೋಧಿ ಚಟುವಟಿಕೆಗಳು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಗಳು ಹೆಚ್ಚಾಗುತ್ತಿವೆ |
ನವದೆಹಲಿ (ಅ. 22): ಪ್ರಜಾಪ್ರಭುತ್ವ ರಾಜಕೀಯಕ್ಕೆ ಅಂತರ್ಜಾಲ ಊಹಿಸಲೂ ಆಗದಷ್ಟುಹಾನಿ ಉಂಟು ಮಾಡುತ್ತಿದ್ದು, ಫೇಸ್‌ಬುಕ್, ವಾಟ್ಸಾಪ್‌ನಂತಹ ಮಧ್ಯವರ್ತಿಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ಪ್ರವಾಸಿಗರೇ ಗಮನಿಸಿ! ಸಿಯಾಚಿನ್ ಯುದ್ಧಭೂಮಿ ಭೇಟಿಗೆ ಮುಕ್ತ
undefined
ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ವಾಟ್ಸಪ್ ಮತ್ತು ಯೂಟ್ಯೂಬ್ ಹಾಗೂ ಅನ್ಯ ಮಧ್ಯವರ್ತಿಗಳ ಹೊಣೆಗಾರಿಕೆಯನ್ನು ಮರು ಹಂಚಿಕೆ ಮಾಡಲು ಸರ್ಕಾರ ಒತ್ತು ನೀಡಿದೆ. ಈ ಸಂಬಂಧ 2011ರಲ್ಲಿ ರೂಪಿಸಿರುವ ನಿಯಮಗಳನ್ನು ಬದಲಾವಣೆ ಮಾಡುವ ಅಗತ್ಯವಿದೆ. ಅಂತರ್ಜಾಲದಲ್ಲಿ ಪ್ರಕಟವಾಗುವ ವಿಷಯಗಳಿಗೆ ವೇದಿಕೆ ಒದಗಿಸಿದ ಮಧ್ಯವರ್ತಿಗಳನ್ನೇ ಹೊಣೆಗಾರರನ್ನಾಗಿಸಲು ಸರ್ಕಾರ ಬಯಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ನಿಯಂತ್ರಣ ಏಕೆ?
ಅಗ್ಗದ ದರದಲ್ಲಿ ಇಂಟರ್ನೆಟ್ ಲಭ್ಯತೆಯಿಂದಾಗಿ ಕಳೆದ ಕೆಲವು ವರ್ಷಗಳಿಂದ ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ಒಂದೆಡೆ ತಂತ್ರಜ್ಞಾನದ ಬಳಕೆ ಆರ್ಥಿಕ ಮತ್ತು ಸಾಮಾಜಿಕ ಏಳಿಗೆಗೆ ಕಾರಣವಾದರೆ, ಮತ್ತೊಂದೆಡೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸುವಿಕೆ, ದ್ವೇಷದ ಹೇಳಿಕೆ, ರಾಷ್ಟ್ರ ವಿರೋಧಿ ಚಟುವಟಿಕೆಗಳು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಗಳು ಹೆಚ್ಚಾಗುತ್ತಿವೆ. ಇದು ಪ್ರಜಾಪ್ರಭುತ್ವ ರಾಜಕೀಯಕ್ಕೆ ಹಾನಿ ಉಂಟು ಮಾಡುತ್ತಿದೆ. ಅಲ್ಲದೇ ವ್ಯಕ್ತಿಗಳ ಹಕ್ಕುಗಳು ರಾಷ್ಟ್ರೀಯ ಸಮಗ್ರತೆ ಮತ್ತು ಭದ್ರತೆಗೆ ಮಾರಕವಾಗಲಿದೆ ಎಂಬ ಕಾರಣಕ್ಕಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳ ನಿಯಂತ್ರಣಕ್ಕೆ ಮುಂದಾಗಿದೆ.
ಅ.22ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ