
Nokia 9 PureView ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ. ಕಳೆದ ಫೆಬ್ರವರಿಯಲ್ಲಿ ಮೊಬೈಲ್ ವರ್ಲ್ಡ್ ಕಾಂಗ್ರೆಸ್ 2019ರಲ್ಲಿ ಇದನ್ನು ಮೊದಲ ಬಾರಿಗೆ ಪ್ರದರ್ಶನಕ್ಕಿಡಲಾಗಿತ್ತು.
Nokia ಈ ಹೊಸ ಫೋನ್ 5.99 ಇಂಚಿನ ಪರದೆ, 18.5:9 ಆ್ಯಸ್ಪೆಕ್ಟ್ ರೇಶ್ಯೋ ಮತ್ತು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಫೀಚರ್ ಹೊಂದಿದೆ.
6GB RAM, 128GB ಸ್ಟೋರೆಜ್ ಇರುವ Nokia 9 PureView ಫೋನ್, ವೈರ್‌ಲೆಸ್ ಚಾರ್ಜಿಂಗ್ ಸೌಲಭ್ಯವಿರುವ 3,320mAh ಬ್ಯಾಟರಿಯನ್ನು ಹೊಂದಿದೆ.
ಹಿಂಬದಿಯಲ್ಲಿ ಬರೋಬ್ಬರಿ 5 ಕ್ಯಾಮೆರಾ ಹಾಗೂ ಸೆಲ್ಫಿ ಪ್ರಿಯರಿಗೆ 20 ಮೆಗಾಪಿಕ್ಸೆಲ್ ಸಾಮರ್ಥ್ಯದ ಕ್ಯಾಮೆರಾವನ್ನು ಹೊಂದಿರುವುದು Nokia 9 PureViewನ ವಿಶೇಷತೆ.
ನೋಕಿಯಾ ಇಂಡಿಯಾ ಈ ಫೋನ್‌ನ ಟೀಸರನ್ನೂ ಕೂಡಾ ಬಿಡುಗಡೆ ಮಾಡಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.