ದೆಹಲಿಗೆ ತೆರಳುತ್ತಿದ್ದ ಇಂಡಿಗೋ ಫ್ಲೈಟ್‌ನಲ್ಲಿ ಸ್ಮಾರ್ಟ್‌ಫೋನ್‌ಗೆ ಬೆಂಕಿ: DGCA ಮಾಹಿತಿ

By Suvarna NewsFirst Published Apr 15, 2022, 12:59 PM IST
Highlights

ಇಂಡಿಗೋದ ದಿಬ್ರುಗಢದಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಸ್ಮಾರ್ಟ್‌ಫೋನ್‌ಗೆ ಬೆಂಕಿ ಹೊತ್ತಿಕೊಂಡಿದೆ.

ನವದೆಹಲಿ (ಏ. 15): ಗುರುವಾರ ಇಂಡಿಗೋದ ದಿಬ್ರುಗಢ-ದೆಹಲಿ ವಿಮಾನದಲ್ಲಿ (Dibrugarh-Delhi Flight) ಪ್ರಯಾಣಿಕರೊಬ್ಬರ ಮೊಬೈಲ್ ಫೋನ್‌ಗೆ ಪ್ರಯಾಣದ ವೇಳೆಯೇ ಬೆಂಕಿ ಹತ್ತಿಕೊಂಡಿದ್ದು ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನದ ಸಹಾಯದಿಂದ ಬೆಂಕಿ ನಂದಿಸಿದ್ದಾರೆ ಎಂದು ವಾಯುಯಾನ ನಿಯಂತ್ರಕ ಡಿಜಿಸಿಎ (DGCA) ಅಧಿಕಾರಿಗಳು ತಿಳಿಸಿದ್ದಾರೆ.ಈ ಘಟನೆಯಿಂದಾಗಿ ಯಾವುದೇ ಪ್ರಯಾಣಿಕರಿಗೆ ಅಥವಾ ಕ್ಯಾಬಿನ್ ಸಿಬ್ಬಂದಿಗೆ ಯಾವುದೇ ಗಾಯವಾಗಿಲ್ಲ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಅಧಿಕಾರಿಗಳು ತಿಳಿಸಿದ್ದಾರೆ.

6E 2037 ವಿಮಾನವು ದಿಬ್ರುಗಢದಿಂದ ದೆಹಲಿಗೆ ತೆರಳುತ್ತಿದ್ದಾಗ ಕ್ಯಾಬಿನ್ ಸಿಬ್ಬಂದಿಯೊಬ್ಬರು ಪ್ರಯಾಣಿಕರ ಫೋನ್‌ನಿಂದ ಕಿಡಿಗಳು ಮತ್ತು ಹೊಗೆಯನ್ನು ಹೊರಸೂಸುವುದನ್ನು ಕಂಡಿದ್ದಾರೆ ಎಂದು ಅಧಿಕಾರಿಗಳು ಗಮನಿಸಿದ್ದಾರೆ. ನಂತರ ಕ್ಯಾಬಿನ್ ಸಿಬ್ಬಂದಿ ಅಗ್ನಿಶಾಮಕ ಸಾಧನವನ್ನು ಬಳಸಿ ಬೆಂಕಿಯನ್ನು ನಂದಿಸಿದರು ಎಂದು ಅವರು ಹೇಳಿದ್ದಾರೆ. ವಿಮಾನವು ಗುರುವಾರ ಮಧ್ಯಾಹ್ನ 12.45 ರ ಸುಮಾರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: OnePlus Nord 2 5G ಸ್ಫೋಟ: ಸ್ಮಾರ್ಟ್‌ಫೋನ್ ಡಿಸ್ಪ್ಲೇ, ಫ್ರೇಮ್‌ ಛಿದ್ರ ಛಿದ್ರ

"ದಿಬ್ರುಗಢ್‌ನಿಂದ ದೆಹಲಿಗೆ 6E 2037 ವಿಮಾನದಲ್ಲಿ ಮೊಬೈಲ್ ಸಾಧನದ ಬ್ಯಾಟರಿ ಅಸಹಜವಾಗಿ ಬಿಸಿಯಾದ ಘಟನೆ ಸಂಭವಿಸಿದೆ. ಎಲ್ಲಾ ಅಪಾಯಕಾರಿ ಘಟನೆಗಳನ್ನು ನಿರ್ವಹಿಸಲು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಮತ್ತು ಅವರು ಪರಿಸ್ಥಿತಿಯನ್ನು ತ್ವರಿತವಾಗಿ ನಿರ್ವಹಿಸಿದ್ದಾರೆ. ಯಾವುದೇ ಪ್ರಯಾಣಿಕರಿಗೆ ಅಥವಾ ಆಸ್ತಿಗೆಯಾವುದೇ ಹಾನಿ ಸಂಭವಿಸಿಲ್ಲ" ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ

ಇದೇ ರೀತಿಯ ಮತ್ತೊಂದು ಘಟನೆಯಲ್ಲಿ, OnePlus Nord 2 ಬಳಸುವಾಗ ಬಳಕೆದಾರರ ಕೈಯಲ್ಲಿ ಸ್ಫೋಟಗೊಂಡಿದೆ. ಅದೃಷ್ಟವಶಾತ್, ಇದು ಬಳಕೆದಾರರಿಗೆ ಯಾವುದೇ ಹಾನಿಯನ್ನುಂಟುಮಾಡಲಿಲ್ಲ. ಸ್ಮಾರ್ಟ್‌ಫೋನ್‌ ಸ್ಫೋಟಗೊಳ್ಳುವುದು ಅಥವಾ ಬೆಂಕಿ ಹೊತ್ತಿಕೊಂಡಿರುವುದು ಇದೇ ಮೊದಲಲ್ಲ. ಬೆಂಕಿ ಅಥವಾ ಸ್ಫೋಟದಿಂದ ಬಳಕೆದಾರರು ತೀವ್ರವಾದ ಸುಟ್ಟಗಾಯಗಳನ್ನು ಸ್ವೀಕರಿಸಿದ ಪ್ರಕರಣಗಳು ಸೇರಿದಂತೆ ಇತ್ತೀಚೆಗೆ ಇಂತಹ ಅನೇಕ ಪ್ರಕರಣಗಳಿವೆ.

ಕಳೆದ ವರ್ಷ ನವೆಂಬರ್‌ನಲ್ಲಿ, ಮತ್ತೊಂದು ಒನ್‌ಪ್ಲಸ್ ಸ್ಮಾರ್ಟ್‌ಫೋನ್ ಸ್ಫೋಟಗೊಂಡು ಬಳಕೆದಾರರಿಗೆ ಹಾನಿಯನ್ನುಂಟುಮಾಡಿತ್ತು. ಘಟನೆ ಬೆನ್ನಲ್ಲೇ ಕಂಪನಿಯು ಗ್ರಾಹಕರಿಗೆ ಮರುಪಾವತಿ ಮಾಡಿತು ಮತ್ತು ವೈದ್ಯಕೀಯ ವೆಚ್ಚವನ್ನು ಭರಿಸಿತ್ತು. 
 

click me!