BTS2022:ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತದ ಪಾತ್ರದ ಬಗ್ಗೆ ಹೆಮ್ಮೆ ಪಡಬೇಕಿದೆ:ರಾಜೀವ್ ಚಂದ್ರಶೇಖರ್

By Gowthami KFirst Published Nov 17, 2022, 6:39 PM IST
Highlights

ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತದ ಪಾತ್ರದ ಬಗ್ಗೆ ಹೆಮ್ಮೆ ಪಡಬೇಕಿದೆ ಎಂದು ಕೇಂದ್ರ‌ ಸಚಿವ ರಾಜೀವ್ ಚಂದ್ರಶೇಖರ್ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರು (ನ.17): ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತದ ಪಾತ್ರದ ಬಗ್ಗೆ ಹೆಮ್ಮೆ ಪಡಬೇಕಿದೆ ಎಂದು ಕೇಂದ್ರ‌ ಸಚಿವ ರಾಜೀವ್ ಚಂದ್ರಶೇಖರ್ ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ (ಬಿಟಿಎಸ್‌) ಹೇಳಿಕೆ ನೀಡಿದ್ದಾರೆ. ತಮ್ಮಲ್ಲೆರಿಗೂ ನಮಸ್ಕಾರ ಎಂದು ಮಾತು ಆರಂಭಿಸಿದ ರಾಜೀವ್ ಚಂದ್ರಶೇಖರ್, ಎಲ್ಲರಿಗೂ ಬೆಂಗಳೂರು ಟೆಕ್‌ ಸಮ್ಮಿಟ್ ಗೆ ಸ್ವಾಗತ  75 ವರ್ಷಗಳ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಇದ್ದೇವೆ. ಮುಂದೆ 25 ವರ್ಷಗಳ ಬಗ್ಗೆ ನಾವು ಗಮನ ಹರಿಸಬೇಕಿದೆ. ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತದ ಪಾತ್ರದ ಬಗ್ಗೆ ನಾವು ಹೆಮ್ಮೆ ಪಡಬೇಕಿದೆ . ಭವಿಷ್ಯದಲ್ಲಿ ತಂತ್ರಜ್ಞಾನ ಎಷ್ಟು ಮುಖ್ಯ ಎಂದು ನಿನ್ನೆ ಪ್ರಧಾನಿ ಮೋದಿ G20 ಶೃಂಗ ಸಭೆಯಲ್ಲಿ ಮಾತನಾಡಿದ್ದಾರೆ. ಟ್ರಿಲಿಯನ್ ಡಾಲರ್ ಎಕಾನಮಿ ವಿಚಾರವಾಗಿ ಪ್ರಧಾನಿಗಳು ಹಿಂದೆಯೇ ಮಾತನಾಡಿದ್ದರು. ಟೆಕ್ನಾಲಜಿ ಹಾಗೂ ಎಲೆಕ್ಟ್ರಾನಿಕ್ಸ್  ಮಹತ್ವ ಏನು ಎಂಬುದು ತಿಳಿದಿದೆ. ಕೋವಿಡ್ ನ ಬಳಿಕ ಹಲವು ರಾಷ್ಟ್ರಗಳು ಎಂಥಾ ಪರಿಸ್ಥಿತಿ ಎದುರಿಸಿವೆ ಎಂಬುದನ್ನ ನೋಡಿದ್ದೇವೆ. ಹೊಸ ಭಾರತವನ್ನ ಪ್ರಪಂಚ ನೋಡುತ್ತಿದೆ. ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಬಗ್ಗೆ ನಾವು ಹೆಚ್ಚು ಗಮನ ಹರಿಸ್ತಿದ್ದೇವೆ. ಭಾರತದ‌ ಎಲೆಕ್ಟ್ರಾನಿಕ್ ಇಕೋ‌ ಸಿಸ್ಟಮ್ ನಲ್ಲಿ ಆಮದು ಮಾಡಿಕೊಳ್ಳುವ ಬಗ್ಗೆ ಹೆಚ್ಚು ಅವಲಂಬಿತವಾಗಿದೆ ಎಂದರು.

2014 ವೇಳೆಗೆ ಬಳಕೆಯಾಗ್ತಿದ್ದ ಮೊಬೈಲ್ ಗಳು 92% ಅಷ್ಟು ಆಮದು ಮಾಡಿಕೊಳ್ಳಲಾಗ್ತಿತ್ತು. ಆದರೆ 2022 ರ ವೇಳೆಗೆ 97% ಬಳಕೆಯಾಗ್ತಿರುವ ಮೊಬೈಲ್ ಗಳು ಭಾರತದಲ್ಲೇ ಉತ್ಪಾದನೆ ಆಗ್ತಿದೆ. 2022 ರಲ್ಲಿ 70 ಸಾವಿರ ಕೋಟಿ ಮೊತ್ತದ ಎಲೆಕ್ಟ್ರಾನಿಕ್ ಉತ್ಪನ್ನಗಳ ಎಕ್ಪೋರ್ಟ್ ಮಾಡಿದ್ದೇವೆ ಎಂದು ಇದೇ ವೇಳೆ ಹೇಳಿದರು.

ವಿದ್ಯುನ್ಮಾನ ವಲಯದಲ್ಲಿ 36000 ಕೋಟಿ ರು. ಹೂಡಿಕೆ
ರಾಜ್ಯದ ಎಲೆಕ್ಟ್ರಾನಿಕ್‌ ವಲಯದಲ್ಲಿ 36,804 ಕೋಟಿ ರು. ಬಂಡವಾಳ ಹೂಡಿಕೆಗೆ ಉದ್ಯಮಿಗಳು ಆಸಕ್ತಿ ವ್ಯಕ್ತಪಡಿಸಿದ್ದಾರೆ ಎಂದು ಐಟಿ-ಬಿಟಿ ಸಚಿವ ಡಾ.ಸಿ ಎನ್‌.ಅಶ್ವತ್ಥನಾರಾಯಣ ಪ್ರಕಟಿಸಿದರು.

‘ಬೆಂಗಳೂರು ತಂತ್ರಜ್ಞಾನ ಸಮಾವೇಶ’ದಲ್ಲಿ ಮಾತನಾಡಿದ ಅವರು, ಎಲೆಕ್ಟ್ರಾನಿಕ್‌ ವಲಯದಲ್ಲಿ ರಾಜ್ಯದಬೇರೆ ಬೇರೆ ಭಾಗಗಳಲ್ಲಿ 36 ಸಾವಿರ ಕೋಟಿ ರು. ಹೂಡಿಕೆ ಮಾಡಲು ಕಂಪನಿಗಳು ಆಸಕ್ತಿ ವಹಿಸಿವೆ. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಸಾಧನೆ ಅಭೂತಪೂರ್ವವಾಗಿದ್ದು, ಇಡೀ ದೇಶ ಮತ್ತು ಜಗತ್ತು ನೋಡುತ್ತಿವೆ ಎಂದು ಹೇಳಿದರು.

ಐಟಿ ಮತ್ತು ಬಿಟಿ ವಲಯದಲ್ಲಿ ಈಗ ನಡೆಯುತ್ತಿರುವ 135 ಶತಕೋಟಿ ಡಾಲರ್‌ ಮೌಲ್ಯದ ರಫ್ತು ವಹಿವಾಟನ್ನು 2025ರ ಹೊತ್ತಿಗೆ 300 ಶತಕೋಟಿ ಡಾಲರ್‌ಗೆ ಹೆಚ್ಚಿಸುವ ಗುರಿಯಿದೆ. ರಾಜ್ಯವು ಸೆಮಿಕಂಡಕ್ಟರ್‌, ಚಿಪ್‌, ವಿನ್ಯಾಸ ಇತ್ಯಾದಿ ಕ್ಷೇತ್ರಗಳ ತೊಟ್ಟಿಲಾಗುತ್ತಿದೆ. ಸೆಮಿ ಕಂಡಕ್ಟರ್‌ ಕ್ಷೇತ್ರದಲ್ಲಿ ಈಗಾಗಲೇ 22,900 ಕೋಟಿ ರು. ಮೊತ್ತದ ಹೂಡಿಕೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು.

BTS2022: 100ಕ್ಕೂ ಹೆಚ್ಚು ಸ್ಟಾರ್ಟಪ್‌ ಮಳಿಗೆಗಳಿಗೆ ಭೇಟಿ ನೀಡಿ ಪ್ರೋತ್ಸಾಹಿಸಿದ ಅಶ್ವತ್ಥನಾರಾಯಣ

ರಾಜ್ಯದಲ್ಲಿ ಗುಣ ಮಟ್ಟದ ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಆದ್ಯತೆ ನೀಡಲಾಗಿದೆ. ಉದ್ಯಮಗಳಿಗೆ ಬೇಕಾದ ನುರಿತ ಮಾನವ ಸಂಪನ್ಮೂಲವನ್ನು ನಿರಂತರವಾಗಿ ಪೂರೈಸುವ ದಕ್ಷ ವ್ಯವಸ್ಥೆಯನ್ನು ಸೃಷ್ಟಿಸಲಾಗುತ್ತಿದೆ. ದೇಶದ ಒಟ್ಟು ಸ್ಟಾರ್ಟಪ್‌ ವಲಯದ ಮೌಲ್ಯದಲ್ಲಿ ರಾಜ್ಯವು ಶೇ.55 ರಷ್ಟುಪಾಲು ಹೊಂದಿದೆ. ರಾಜ್ಯದಲ್ಲಿ ಮೂಲಸೌಲಭ್ಯ ಸುಧಾರಣೆ ಮತ್ತು ಸಂಚಾರ ವ್ಯವಸ್ಥೆಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಪ್ರಾಶಸ್ತ್ಯ ನೀಡಿದೆ ಎಂದರು.

Bengaluru Tech Summit: ಬಡತನ ವಿರುದ್ಧ ತಂತ್ರಜ್ಞಾನದ ಅಸ್ತ್ರ: ಪ್ರಧಾನಿ ಮೋದಿ

ಮಳಿಗೆಗಳಿಗೆ ಸಚಿವರ ಭೇಟಿ, ಮೆಚ್ಚುಗೆ
ಬೆಂಗಳೂರು: ಟೆಕ್‌ ಶೃಂಗದಲ್ಲಿ ಭಾಗಿಯಾಗಿರುವ 100ಕ್ಕೂ ಅಧಿಕ ಸ್ಟಾರ್ಚ್‌ಅಪ್‌ ಮಳಿಗೆಗಳಿಗೆ ಐಟಿ-ಬಿಟಿ ಸಚಿವ ಡಾ.ಸಿ ಎನ್‌.ಅಶ್ವತ್ಥನಾರಾಯಣ ಅವರು ಭೇಟಿ ನೀಡಿ, ಮೆಚ್ಚುಗೆ ವ್ಯಕ್ತಪಡಿಸಿದರು. ನವೋದ್ಯಮವನ್ನು ಉತ್ತೇಜಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ತಿಳಿಸಿದರು. ಯುವ ಜನರು ಮತ್ತು ಮಕ್ಕಳೊಂದಿಗೂ ಮಾತನಾಡಿದರು. ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್‌, ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಅರ್ಜುನ್‌ ಒಡೆಯರ್‌ ಸಚಿವರಿಗೆ ಸಾಥ್‌ ನೀಡಿದರು.

click me!