
ಮುಂಬೈ(ಅ.22): ಮೆಸೆಂಜಿಗ್ ಆಪ್ ಗಳಲ್ಲೇ ಅತೀ ಹೆಚ್ಚಿನ ಬಳಕೆದಾರರನ್ನು ಹೊಂದಿರುವ ಫೇಸ್ ಬುಕ್ ಮಾಲೀಕತ್ವದ ವಾಟ್ಸಪ್ ದಿನೇ ದಿನೇ ಹೊಸ ತನವನ್ನು ಮೈಗೂಡಿಸಿಕೊಳ್ಳುತ್ತಿದ್ದು, ಸದ್ಯ ತನ್ನ ಬಳಕೆದಾರರಿಗೆ ವಿಡಿಯೋ ಕಾಲಿಂಗ್ ಸೌಲಭ್ಯವನ್ನು ನೀಡಲು ಮುಂದಾಗಿದೆ.
ಇತ್ತೀಚೆಗೆ ವಾಟ್ಸಪ್ ಪ್ರತಿ ಸ್ಪರ್ಧಿಯಾಗಿ ಹಲವಾರು ಆಪ್ ಗಳು ಮಾರುಕಟ್ಟೆಯನ್ನು ಪ್ರವೇಶಿಸಿದ್ದು ಈ ಹಿನ್ನಲೆಯಲ್ಲಿ ತನ್ನ ಗ್ರಾಹಕರನ್ನು ಉಳಿಸಿಕೊಳ್ಳುವ ಸಲುವಾಗಿ ವಾಟ್ಸಪ್ ವಿಡಿಯೋ ಕಾಲಿಂಗ್ ಅವಕಾಶವನ್ನು ನೀಡಲು ಮುಂದಾಗಿದೆ.
ಸದ್ಯ ಈ ವಿಡಿಯೋ ಕಾಲಿಂಗ್ ಅವಕಾಶವು ಪ್ರಯೋಗಿಕ ಹಂತದಲ್ಲಿದ್ದು, ಕೇವಲ ವಿಂಡೋಸ್ ಪೋನ್ ಬಳಕೆದಾರರಿಗೆ ಮಾತ್ರ ಲಭ್ಯವಾಗಲಿದೆ. ದಿನ ಕಳೆದಂತೆ ಆಂಡ್ರಾಯ್ಡ್ ಮತ್ತು ಐಎಸ್ಓ ಬಳಕೆ ದಾರರಿಗೂ ಲಭ್ಯವಾಗಲಿದೆ.
ಸದ್ಯ v2.16.269 ವಾಟ್ಸಪ್ ಬಿಟಾ ವರ್ಷನ್ ಅಪ್ ಡೇಟ್ ಮಾಡುವ ಮೂಲಕ ವಿಂಡೋಸ್ ಪೋನ್ ಬಳಕೆದಾರರು ಈ ವಿಡಿಯೋ ಕಾಲಿಂಗ್ ಸೌಲಭ್ಯ ಪಡೆಯಬಹುದಾಗಿದೆ. ವಾಟ್ಸಪ್'ನ ಈ ಸೌಲಭ್ಯ ನಿಮಗೆ ಹುಚ್ಚುಹಿಡಿಸುವುದಂತು ಖಂಡಿತ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.