
ನವದೆಹಲಿ(ಅ.12): ನಿಮ್ಮುಂದೆ ನಿಮ್ಮ ಮೊಬೈಲ್ ನಂಬರ್ 10 ಸಂಖ್ಯೆಯನ್ನು ಮೀರಲಿದೆ. ದಿನದಿಂದ ದಿನಕ್ಕೆ ಮೊಬೈಲ್ ಗ್ರಾಹಕರ ಸಂಖ್ಯೆ ಜಾಸ್ತಿ ಆಗುತ್ತಿರುವ ಹಿನ್ನಲೆಯಲ್ಲಿ ಇನ್ಮುಂದೆ ಮೊಬೈಲ್ 11 ಸಂಖ್ಯೆಯಾಗಲಿದೆ.
ಈ ಕುರಿತು ಡಿಪಾರ್ಟ್ಮೆಂಟ್ ಆಫ್ ಟೆಲಿಕಾಂ ಚಿಂತನೆ ನಡೆಸಿದ್ದು, ಶೀಘ್ರವೇ ಮೊಬೈಲ್ ಸಂಖ್ಯೆಯನ್ನು 10 ರಿಂದ 11ಕ್ಕೆ ಏರಿಕೆ ಮಾಡಲಿದೆಯಂತೆ. 2003ರಲ್ಲಿ 10 ನಂಬರ್ ಗಳ ಸಂಖ್ಯೆಯನ್ನು ಬಳಸಲು ಡಾಟ್ ನಿರ್ಧರಿಸಿತ್ತು.
ಆದರೆ ಈಗ ಮೊಬೈಲ್ ಬಳಕೆದಾರ ಸಂಖ್ಯೆ ನಿರೀಕ್ಷಿತ ಮಟ್ಟಕ್ಕಿಂತ ಹೆಚ್ಚಿನ ವೇಗದಲ್ಲಿ ಬೆಳೆಯುತ್ತಿದ್ದು, ಈ ಹಿನ್ನಲೆಯಲ್ಲಿ 10 ನಂಬರ್ ಗಳನ್ನು 11 ಸಂಖ್ಯೆಗೆ ಏರಿಕೆ ಮಾಡಲು ನಿರ್ಧರಿಸಲಾಗಿದೆ.
ಈಗಾಗಲೇ ಎಲ್ಲಾ ಟೆಲಿಕಾಂ ಅಪರೇಟರ್'ಗಳಿಗೆ ಸೂಚನೆ ನೀಡಲಾಗಿದ್ದು, ಆರು ತಿಂಗಳಲ್ಲಿ ಹೊಸ ನಂಬರ್ ಗಳನ್ನು ನೀಡಲಾಗಿದೆ. ಅವುಗಳು ಶೀಘ್ರವೇ ಅಳವಡಿಸಿಕೊಳ್ಳಲಾಗುವುದು ಎನ್ನಲಾಗಿದೆ.
ಸ್ಮಾರ್ಟ್‌ಫೋನ್‌ಗಳು ಮತ್ತು AI ನಿಂದ ಸೈಬರ್ ಭದ್ರತೆ ಮತ್ತು ವಿಜ್ಞಾನದ ಪ್ರಗತಿಯವರೆಗೆ ಇತ್ತೀಚಿನ ಟೆಕ್ನಾಲಜಿ (Technology News in Kannada) ಬಗ್ಗೆ ನಿರಂತರವಾದ ಅಪ್‌ಡೇಟ್. ಡಿಜಿಟಲ್ ಟ್ರೆಂಡ್‌ಗಳ ಕುರಿತು ತಜ್ಞರ ಮಾತುಗಳು, ವಿವರವಾದ ಮಾಹಿತಿ ಮತ್ತು ಬ್ರೇಕಿಂಗ್ ನ್ಯೂಸ್ ಸಿಗುವ ಏಕೈಕ ತಾಣ ಏಷ್ಯಾನೆಟ್ ಸುವರ್ಣ ನ್ಯೂಸ್. ಹೊಸ ಗ್ಯಾಜೆಟ್ ರಿಲೀಸ್ ಆಯ್ತಾ? ಹೊಸ ಸ್ಟಾರ್ಟ್‌ಅಪ್‌ಗಳು ಬಂದಿದ್ಯಾ? ಭವಿಷ್ಯವನ್ನು ಬದಲಿಸುವ ಟೆಕ್ ಪಾಲಿಸಿ ಯಾವುದು? ಇವುಗಳ ಇಂಚಿಂಚೂ ಮಾಹಿತಿ ಸಿಗಲಿದೆ. ಟೆಕ್ ಎಕ್ಸ್‌ಪ್ಲೇನರ್ಸ್ ಹಾಗೂ ಗ್ಯಾಜೆಟ್ ಡೆಮೋ ವಿಡಿಯೋಗಳು ಕೂಡ ನೀವು ಕಾಣಬಹುದು.