ಜಪಾನ್‌ ಮಣಿಸಿ, ರ‍್ಯಾಂಕಿಂಗ್‌ನಲ್ಲಿ ಶ್ರೇಷ್ಠ ಸಾಧನೆ ಮಾಡಿದ ಭಾರತ ಹಾಕಿ ತಂಡ..!

Suvarna News   | Asianet News
Published : Jul 31, 2021, 01:37 PM IST
ಜಪಾನ್‌ ಮಣಿಸಿ, ರ‍್ಯಾಂಕಿಂಗ್‌ನಲ್ಲಿ ಶ್ರೇಷ್ಠ ಸಾಧನೆ ಮಾಡಿದ ಭಾರತ ಹಾಕಿ ತಂಡ..!

ಸಾರಾಂಶ

* ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಮಿಂಚಿನ ಪ್ರದರ್ಶನ ತೋರುತ್ತಿರುವ ಭಾರತ ಹಾಕಿ ತಂಡ * ರ‍್ಯಾಂಕಿಂಗ್‌ನಲ್ಲಿ ಸರ್ವಶ್ರೇಷ್ಠ ಸಾಧನೆ ಮಾಡಿದ ಮನ್‌ಪ್ರೀತ್ ಸಿಂಗ್ ಪಡೆ * ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವತ್ತ ಭಾರತ ದಿಟ್ಟ ಹೆಜ್ಜೆ

ಟೋಕಿಯೋ(ಜು.31): ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತೀಯ ಹಾಕಿ ತಂಡವು ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ತೋರುತ್ತಿದ್ದು ನಾಕೌಟ್‌ ಹಂತಕ್ಕೇರುವಲ್ಲಿ ಯಶಸ್ವಿಯಾಗಿದೆ. ಗ್ರೂಪ್‌ ಹಂತದ ಕೊನೆಯ ಪಂದ್ಯದಲ್ಲಿ ಆತೀಥೇಯ ಜಪಾನ್ ವಿರುದ್ದ 5-3 ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ರ‍್ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೇರಿ ಶ್ರೇಷ್ಠ ಸಾಧನೆ ಮಾಡಿದೆ.

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 'ಎ' ಗುಂಪಿನಲ್ಲಿ ಸ್ಥಾನ ಪಡೆದಿರುವ ಭಾರತ ಹಾಕಿ ತಂಡವು ಆಡಿದ 5 ಪಂದ್ಯಗಳ ಪೈಕಿ 4 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದೆ. ಇದೇ ವೇಳೆ ಅಂತಾರಾಷ್ಟ್ರೀಯ ಹಾಕಿ ಫೆಡರೇಷನ್‌ ಬಿಡುಗಡೆ ಮಾಡಿದ ನೂತನ ರ‍್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದೆ. ಟೋಕಿಯೋ ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನ ನಾಲ್ಕನೇ ಸ್ಥಾನದಲ್ಲಿದ್ದ ಭಾರತ ಹಾಕಿ ತಂಡವು ಇದೀಗ ಗ್ರೂಪ್ ಹಂತ ಮುಕ್ತಾಯದ ವೇಳೆ ನೆದರ್ಲೆಂಡ್ ತಂಡವನ್ನು ಹಿಂದಿಕ್ಕಿ ಮೂರನೇ ಸ್ಥಾನಕ್ಕೇರಿದೆ. 

ಟೋಕಿಯೋ 2020: ಹರಿಣಗಳ ಬೇಟೆಯಾಡಿದ ಮಹಿಳಾ ಹಾಕಿ ತಂಡ

2003ರಿಂದ ಹಾಕಿಯಲ್ಲಿ ರ‍್ಯಾಂಕಿಂಗ್‌ ನೀಡುವ ಪದ್ದತಿ ಜಾರಿಗೆ ಬಂದಿದೆ. ರ‍್ಯಾಂಕಿಂಗ್‌ ಪದ್ದತಿ ಜಾರಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಭಾರತ ಹಾಕಿ ತಂಡವು ಟಾಪ್ 3 ಪಟ್ಟಿಯೊಳಗೆ ಸ್ಥಾನ ಪಡೆದಿದೆ. 1980ರ ಒಲಿಂಪಿಕ್ಸ್‌ನಲ್ಲಿ ಭಾರತೀಯ ಹಾಕಿ ತಂಡವು ಪದಕದ ಬೇಟೆಯಾಡಿತ್ತು. ಇದಾದ ಬಳಿಕ ಭಾರತೀಯರ ಪಾಲಿಗೆ ಹಾಕಿಯಲ್ಲಿ ಒಲಿಂಪಿಕ್ಸ್ ಪದಕ ಗೆಲ್ಲುವುದು ಕಬ್ಬಿಣದ ಕಡಲೆಯಾಗಿತ್ತು. ಆದರೆ ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡವು ಒಲಿಂಪಿಕ್ಸ್‌ನಲ್ಲಿ ಪದಕದ ಬೇಟೆಯಾಡಬಲ್ಲ ನೆಚ್ಚಿನ ತಂಡಗಳಲ್ಲಿ ಒಂದು ಎನಿಸಿದೆ.
 

PREV
click me!

Recommended Stories

ಭಾರತೀಯ ಸೇನೆ ಪಾಕ್ ದಾಳಿ ಹಿಮ್ಮೆಟ್ಟಿಸುತ್ತಿದ್ದಂತೆ ಶಾಂತಿ ಪಾಠ ಮಾಡಿದ ಸಾನಿಯಾ ಮಿರ್ಜಾ
ಕಣ್ಮುಚ್ಚಿ ಯುವತಿರಿಗೆ ಕಿಸ್ ಕೊಡುವಾಗ ಜಾಗೃತೆ, ಅಥ್ಲೀಟ್‌ಗೆ ಒಂದು ಮುತ್ತಿನ ಕತೆ ಎಚ್ಚರಿಕೆ