ಟೋಕಿಯೋ ಒಲಿಂಪಿಕ್ಸ್‌ಗೆ ಇಬ್ಬರು ಆಳ್ವಾಸ್ ವಿದ್ಯಾರ್ಥಿಗಳು ಆಯ್ಕೆ

By Suvarna NewsFirst Published Jul 14, 2021, 6:56 PM IST
Highlights

* ಟೋಕಿಯೋ ಒಲಿಂಪಿಕ್ಸ್‌ಗೆ ರಿಲೇ ತಂಡದಲ್ಲಿ ಅರ್ಹತೆ ಪಡೆದ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು

* ಧನಲಕ್ಷ್ಮಿ ಹಾಗೂ ಶುಭ ದೇಶವನ್ನು ಪ್ರತಿನಿಧಿಸಲು ರೆಡಿಯಾಗಿದ್ದಾರೆ.

* ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟ ಜುಲೈ 23ರಿಂದ ಆರಂಭ

ಬೆಂಗಳೂರು(ಜು.14): ಬಹುನಿರೀಕ್ಷಿತ ಜುಲೈ 23ರಿಂದ ಆರಂಭವಾಗಲಿರುವ ಟೋಕಿಯೋ ಒಲಿಂಪಿಕ್ಸ್‌ಗೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಮಿಶ್ರ ರಿಲೇ ವಿಭಾಗದಲ್ಲಿ ಆಳ್ವಾಸ್ ಸಂಸ್ಥೆಯ ವಿದ್ಯಾರ್ಥಿಗಳಾದ ಧನಲಕ್ಷ್ಮಿ ಹಾಗೂ ಶುಭ ದೇಶವನ್ನು ಪ್ರತಿನಿಧಿಸಲು ರೆಡಿಯಾಗಿದ್ದಾರೆ.

ಆಳ್ವಾಸ್‌ ಕ್ರೀಡಾ ವಿಭಾಗದ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷ್ಮಿ ಹಾಗೂ ಶುಭ 4*400 ಮೀಟರ್‌ ವಿಭಾಗದಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ. ಇವರಿಬ್ಬರು 2016-17ನೇ ಸಾಲಿನ ಶೈಕ್ಷಣಿಕ ವರ್ಷದಿಂದ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಯಲ ಕೂಟಗಳಲ್ಲಿ ಪ್ರತಿನಿಧಿಸಿದ್ದಾರೆ. ಟೋಕಿಯೋ ಒಲಿಂಪಿಕ್ಸ್‌ಗೆ ಆಯ್ಕೆಯಾಗಿರುವ ಈ ಇಬ್ಬರು ಅಥ್ಲೀಟ್‌ಗಳಿಗೆ ಅಭಿನಂದನೆಗಳು ಎಂದು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌: ಪಿ.ವಿ ಸಿಂಧುವಿಗೆ ಒಟ್ಟಿಗೆ ಐಸ್‌ಕ್ರೀಮ್‌ ತಿನ್ನೋಣವೆಂದ ಮೋದಿ

ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾ ವಿದ್ಯಾರ್ಥಿಗಳು ಈಗಾಗಲೇ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಸಾಧನೆ ಮಾಡಿದ್ದು, ಈ ಬಾರಿಯ ಒಲಿಂಪಿಕ್ಸ್‌ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ. ಮೋಹನ್ ಆಳ್ವ ತಲಾ ಒಂದು ಲಕ್ಷ ರುಪಾಯಿ ಪ್ರೋತ್ಸಾಹಧನ ನೀಡಿದ್ದಾರೆ.

ಭಾರತ ಮಿಶ್ರ ರಿಲೇಯಲ್ಲಿ ರೇವತಿ ವೀರಮಣಿ, ಶುಭ ವೆಂಕಟೇಶನ್‌, ಧನಲಕ್ಷ್ಮಿ ಶೇಖರ್, ಶಾರ್ಥಕ್‌ ಬಾಂಬ್ರಿ, ಅಲೆಕ್ಸ್ ಆಂಟನಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳಿಗೆ ಚೀಯರ್ ಅಪ್‌ ಮಾಡಿ, ಪ್ರತಿದಿನ ಭಾರತೀಯ ಒಲಿಂಪಿಕ್ಸ್‌ ಜೆರ್ಸಿ ಪಡೆಯಿರಿ. ಒಲಿಂಪಿಕ್ಸ್‌ ಕ್ವಿಜ್‌ನಲ್ಲಿ ಪಾಲ್ಗೊಳ್ಳಲು ಈ ಲಿಂಕ್‌ ಕ್ಲಿಕ್‌ ಮಾಡಿ.

click me!