* ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು
* ಪ್ರೀಕ್ವಾರ್ಟರ್ ಫೈನಲ್‌ನಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್ ಸಿಂಧುವಿಗೆ ಜಯ
* ಕ್ವಾರ್ಟರ್‌ಫೈನಲ್‌ನಲ್ಲಿ ಅಕಾನೆ ಯಮಗುಚಿ ಎದುರಾಗುವ ಸಾಧ್ಯತೆ
ಟೋಕಿಯೋ(ಜು.29): ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದ ಪ್ರೀಕ್ವಾರ್ಟರ್ ಫೈನಲ್‌ನಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್ ಎದುರು 21-15, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.
ಮೊದಲ ಸೆಟ್‌ನಲ್ಲಿ ಸಿಂಧು ಆರಂಭದಿಂದಲೇ ಎಚ್ಚರಿಕೆಯ ಆಟ ಪ್ರದರ್ಶಿಸಿದರು. ಕ್ರಮೇಣ ಆಟಕ್ಕೆ ಮುಂದಾದ ಸಿಂಧು ಪಂದ್ಯದ ಮೇಲೆ ಹಿಡಿತ ಸಾಧಿಸುತ್ತಾ ಸಾಗಿದರು. ಒಂದು ಹಂತದಲ್ಲಿ ಸಿಂಧು 16-15 ಅಂಕಗಳ ಮುನ್ನಡೆಯಲ್ಲಿದ್ದರು. ಇದಾದ ಬಳಿಕ ಸತತ 6 ಅಂಕಗಳನ್ನು ಗಳಿಸುವ ಮೂಲಕ ಮೊದಲ ಗೇಮ್ ಅನ್ನು 21-15 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು.
ಟೋಕಿಯೋ 2020: ಹಾಂಕಾಂಗ್ ಆಟಗಾರ್ತಿ ಬಗ್ಗುಬಡಿದು ನಾಕೌಟ್ ಹಂತಕ್ಕೇರಿದ ಸಿಂಧು
. advances to the quarter-final of Women's Singles at | | pic.twitter.com/ISXqHR3teO
— SAIMedia (@Media_SAI)ಇನ್ನು ಎರಡನೇ ಸೆಟ್‌ನಲ್ಲಿ ಸಿಂಧು ಆರಂಭದಲ್ಲೇ 5-0 ಮುನ್ನಡೆ ಸಾಧಿಸುವ ಮೂಲಕ ಉತ್ತಮ ಆರಂಭವನ್ನು ಪಡೆದರು. ಆ ಬಳಿಕವೂ ಡೆನ್ಮಾರ್ಕ್ ಆಟಗಾರ್ತಿ ಮೇಲುಗೈ ಸಾಧಿಸದಂತೆ ನೋಡಿಕೊಳ್ಳುವಲ್ಲಿ ಹೈದರಾಬಾದ್ ಮೂಲದ ಸಿಂಧು ಯಶಸ್ವಿಯಾದರು. ಅಂತಿಮವಾಗಿ ಸಿಂಧು 21-13 ಅಂಕಗಳ ಅಂತರದಲ್ಲಿ ಎರಡನೇ ಸೆಟ್ ಗೆಲ್ಲುವ ಮೂಲಕ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟರು.
. wins the match against Mia Blichfeldt with a score of 21-15, 21-13
With this, Sindhu advances to quarter-final
Wishing her all the best for the future matches! 🔥🔥🔥 pic.twitter.com/pTxnkKxcGv
ಇನ್ನು ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸಿಂಧು ದಕ್ಷಿಣ ಕೊರಿಯಾದ ಕಿಮ್ ಗ್ಯು ಉನ್ ಇಲ್ಲವೇ ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಎದುರಿಸಲಿದ್ದಾರೆ.