Paralympics ಕಂಚು ಗೆದ್ದ ಸಿಂಗ್‌ರಾಜ್‌ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

Suvarna News   | Asianet News
Published : Aug 31, 2021, 03:35 PM ISTUpdated : Aug 31, 2021, 03:41 PM IST
Paralympics ಕಂಚು ಗೆದ್ದ ಸಿಂಗ್‌ರಾಜ್‌ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಸಾರಾಂಶ

* ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದ ಸಿಂಗ್‌ರಾಜ್‌ * ಶೂಟರ್‌ ಸಿಂಗ್‌ರಾಜ್‌ಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ * ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಪದಕಗಳ ಸಂಖ್ಯೆ 8ಕ್ಕೆ ಏರಿಕೆ

ಟೋಕಿಯೋ(ಆ.31): ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದ ಪುರುಷರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಜಯಿಸಿದ ಪ್ಯಾರಾಥ್ಲೀಟ್‌ ಸಿಂಗ್‌ರಾಜ್‌ ಅಧಾನ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಸಿಂಗ್‌ರಾಜ್ ಅಧಾನ ಅಧ್ಭುತ ಪ್ರದರ್ಶನ ತೋರಿದ್ದಾರೆ. ಭಾರತದ ಪ್ರತಿಭಾನ್ವಿತ ಶೂಟರ್‌ ಬೆಳ್ಳಿ ಪದಕ ಗೆಲ್ಲುವ ಮೂಲಕ ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಈ ಸ್ಮರಣೀಯ ಸಾಧನೆಗೆ ಅವರು ಸಾಕಷ್ಟು ಕಠಿಣ ಪರಿಶ್ರಮ ನಡೆಸಿದ್ದಾರೆ, ಮುಂಬರುವ ದಿನಗಳಲ್ಲಿ ಮತ್ತಷ್ಟು ಯಶಸ್ಸು ಸಿಗಲಿ, ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ.

ಪ್ಯಾರಾಲಿಂಪಿಕ್ಸ್‌; ಭಾರತಕ್ಕೆ ಒಲಿದ 8ನೇ ಪದಕ ಸಿಂಗ್‌ರಾಜ್‌ಗೆ ಕಂಚಿನ ಮಿಂಚು..!

ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ರಾಷ್ಟ್ರಪತಿ ರಾಮ್‌ನಾಥ್‌ ಕೋವಿಂದ್‌, ಮಾಸ್ಟರ್ ಬ್ಲಾಸ್ಟರ್‌ ಸಚಿನ್ ತೆಂಡುಲ್ಕರ್‌ ಸಹಾ ಟ್ವೀಟ್‌ ಮೂಲಕ ಭಾರತದ ಶೂಟರ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. 

ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾದ ಭಾನುವಾರ (ಆ.29) ಭಾರತ ಎರಡು ಪದಕಗಳನ್ನು ಜಯಿಸಿತ್ತು. ಇನ್ನು ಸೋಮವಾರ(ಆ.30) ಎರಡು ಚಿನ್ನ ಸಹಿತ ಒಟ್ಟು 5 ಪದಕಗಳನ್ನು ಜಯಿಸಿತ್ತು. ಇಂದು ಸಿಂಗ್‌ರಾಜ್‌ ಭಾರತಕ್ಕೆ ಮತ್ತೊಂದು ಪದಕ ಗೆದ್ದುಕೊಟ್ಟಿದ್ದಾರೆ. ಇದರೊಂದಿಗೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

PREV
click me!

Recommended Stories

ಭಾರತೀಯ ಸೇನೆ ಪಾಕ್ ದಾಳಿ ಹಿಮ್ಮೆಟ್ಟಿಸುತ್ತಿದ್ದಂತೆ ಶಾಂತಿ ಪಾಠ ಮಾಡಿದ ಸಾನಿಯಾ ಮಿರ್ಜಾ
ಕಣ್ಮುಚ್ಚಿ ಯುವತಿರಿಗೆ ಕಿಸ್ ಕೊಡುವಾಗ ಜಾಗೃತೆ, ಅಥ್ಲೀಟ್‌ಗೆ ಒಂದು ಮುತ್ತಿನ ಕತೆ ಎಚ್ಚರಿಕೆ