ಪ್ಯಾರಾಲಿಂಪಿಕ್ಸ್‌: ಭಾರತಕ್ಕೆ ಡಬಲ್ ಧಮಾಕಾ, ಡಿಸ್ಕಸ್‌ ಥ್ರೋನಲ್ಲಿ ಬೆಳ್ಳಿ ಪದಕ ಜಯಿಸಿದ ಯೋಗೇಶ್..!

Suvarna News   | Asianet News
Published : Aug 30, 2021, 09:04 AM IST
ಪ್ಯಾರಾಲಿಂಪಿಕ್ಸ್‌: ಭಾರತಕ್ಕೆ ಡಬಲ್ ಧಮಾಕಾ, ಡಿಸ್ಕಸ್‌ ಥ್ರೋನಲ್ಲಿ ಬೆಳ್ಳಿ ಪದಕ ಜಯಿಸಿದ ಯೋಗೇಶ್..!

ಸಾರಾಂಶ

* ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಸೋಮವಾರ ಭಾರತಕ್ಕೆ ಡಬಲ್ ಧಮಾಕಾ * ಡಿಸ್ಕಸ್‌ ಥ್ರೋನಲ್ಲಿ ರಜತ ಪದಕ ಗೆದ್ದ ಯೋಗೇಶ್ ಕಥುನಿಯಾ * ಟೋಕಿಯೋ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಲಿದ 5ನೇ ಪದಕ 

ಟೋಕಿಯೋ(ಆ.30): ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಸೋಮವಾರ(ಆ.30) ಭಾರತ ಮತ್ತೆರಡು ಪದಕಗಳನ್ನು ಜಯಿಸಿದ್ದು ಸಾರ್ವಕಾಲಿಕ ಗರಿಷ್ಠ ಪದಕಗಳ ಸಾಧನೆ ಮಾಡಿದೆ. ಶೂಟಿಂಗ್‌ನಲ್ಲಿ ಅವನಿ ಲೆಖಾರಾ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಕೆಲವೇ ನಿಮಿಷಗಳಲ್ಲಿ ಡಿಸ್ಕಸ್‌ ಥ್ರೋನಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಜಯಿಸಿದ್ದಾರೆ. ಇದರೊಂದಿಗೆ ಟೋಕಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ 5ನೇ ಪದಕ ಜಯಿಸಿದ ಸಾಧನೆ ಮಾಡಿದೆ.

ಹೌದು, ಈ ಮೊದಲು 2016ರ ರಿಯೋ ಪ್ಯಾರಾಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಭಾರತ 4 ಪದಕಗಳನ್ನು ಜಯಿಸಿತ್ತು. ಇದೀಗ ಹಳೆಯ ದಾಖಲೆಯನ್ನು ಅಳಿಸಿಹಾಕಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಭಾರತೀಯ ಪ್ಯಾರಾ ಅಥ್ಲೀಟ್‌ಗಳು ಯಶಸ್ವಿಯಾಗಿದ್ದಾರೆ. ಪುರುಷರ F56 ವಿಭಾಗದ ಡಿಸ್ಕಸ್‌ ಥ್ರೋ ಸ್ಪರ್ಧೆಯಲ್ಲಿ ಯೋಗೇಶ್ 44.38 ಮೀಟರ್‌ ದೂರ ಡಿಸ್ಕಸ್‌ ಥ್ರೋ ಎಸೆಯುವ ಮೂಲಕ ರಜತ ಪದಕ ಜಯಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಟೋಕಿಯೋ ಪ್ಯಾರಾಲಿಂಪಿಕ್ಸ್‌: ಚಿನ್ನದ ಪದಕ ಬೇಟೆಯಾಡಿದ ಅವನಿ..!

ಹರ್ಯಾಣದ ಬಹುದುರ್ಗಾ ಮೂಲದ 24 ವರ್ಷದ ಯೋಗೇಶ್ ಕಥುನಿಯಾ ಫೈನಲ್‌ನಲ್ಲಿ ಆರನೇ ಹಾಗೂ ಕೊನೆಯ ಯತ್ನದಲ್ಲಿ ಶ್ರೇಷ್ಠ ಪ್ರದರ್ಶನ(44.38 ಮೀ) ದೂರ ಎಸೆಯುವ ಮೂಲಕ ರಜತ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. 

PREV
click me!

Recommended Stories

ಭಾರತೀಯ ಸೇನೆ ಪಾಕ್ ದಾಳಿ ಹಿಮ್ಮೆಟ್ಟಿಸುತ್ತಿದ್ದಂತೆ ಶಾಂತಿ ಪಾಠ ಮಾಡಿದ ಸಾನಿಯಾ ಮಿರ್ಜಾ
ಕಣ್ಮುಚ್ಚಿ ಯುವತಿರಿಗೆ ಕಿಸ್ ಕೊಡುವಾಗ ಜಾಗೃತೆ, ಅಥ್ಲೀಟ್‌ಗೆ ಒಂದು ಮುತ್ತಿನ ಕತೆ ಎಚ್ಚರಿಕೆ