ಚಿಕ್ಕಮಗಳೂರು: ಕಾಫಿನಾಡ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ, ಆರೇ ತಿಂಗಳಲ್ಲಿ 30 ಲಕ್ಷ ಜನರ ಭೇಟಿ..!

By Girish Goudar  |  First Published Jul 16, 2023, 1:00 AM IST

ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಆದ್ರೆ ಈ ವರ್ಷ ಆರೇ ತಿಂಗಳಿಗೆ 30 ಲಕ್ಷ ಪ್ರವಾಸಿಗರು ಭೇಟಿ ನೀಡಿರುವುದು ಪ್ರವಾಸೋದ್ಯಮ ಇಲಾಖೆ ಅಂಕಿ ಅಂಶಗಳಿಂದ ಹೊರಬಂದಿದೆ. 


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಜು.16):  ಕಾಫಿನಾಡು ಚಿಕ್ಕಮಗಳೂರಂದ್ರೆ ನಿಸರ್ಗ ಮಾತೆಯೇ ತವರು. ಜಗನ್ಮಾತೆ ಅನ್ನಪೂರ್ಣೇಶ್ವರಿ-ಶಾರದಾಂಭೆಯ ನೆಲಬೀಡು. ಕಾಫಿನಾಡು ಕೇವಲ ಜಿಲ್ಲೆಯಲ್ಲಿ  ಧಾರ್ಮಿಕತೆ ಜೊತೆ ಪ್ರವಾಸಿಗರಿಗೆ ನಿಂತಲ್ಲೆ ಮೈಮರೆಸೋ ಹಾಟ್ ಸ್ಪಾಟ್. ಇಲ್ಲಿನ ಸುಂದರ ರಮಣೀಯ ತಾಣಗಳು ವರ್ಷಪೂರ್ತಿ ಪ್ರವಾಸಿಗರನ್ನ ಕೈಬೀಸಿ ಕರೆಯುತ್ತಲೇ ಇರುತ್ತೆ. ಪ್ರತಿ ವರ್ಷ ಕಾಫಿನಾಡಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತೆ. ಆದ್ರೆ ಈ ವರ್ಷ ಆರೇ ತಿಂಗಳಿಗೆ 30 ಲಕ್ಷ ಪ್ರವಾಸಿಗರು ಭೇಟಿ ನೀಡಿರುವುದು ಪ್ರವಾಸೋದ್ಯಮ ಇಲಾಖೆ ಅಂಕಿ ಅಂಶಗಳಿಂದ ಹೊರಬಂದಿದೆ. 

Latest Videos

undefined

ಕಾಫಿನಾಡ ಸೌಂದರ್ಯಕ್ಕೆ ಪ್ರವಾಸಿಗರ ಫಿದಾ !

ಕಾಫಿನಾಡನ್ನ ರಾಜ್ಯದ ಅತೀ ದೊಡ್ಡ ಜಿಲ್ಲೆ ಅಂತಾನೂ ಕರೆಯಲಾಗುತ್ತೆ. ಎರಡು ತಾಲೂಕುಗಳನ್ನ ಹೊರತು ಪಡಿಸಿದ್ರೆ ಉಳಿದೆಲ್ಲಾ ತಾಲೂಕುಗಳು ಪ್ರವಾಸಿ ಹಾಗೂ ಧಾರ್ಮಿಕ ತಾಣಗಳೇ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಕೆಮ್ಮಣ್ಣುಗುಂಡಿ, ಕಲ್ಲತ್ತಿಗರಿ, ದತ್ತಪೀಠ, ಮಾಣಿಕ್ಯಧಾರ, ಶಿಶಿಲ ಗುಡ್ಡ, ದೇವರಮನೆಗುಡ್ಡ, ಶೃಂಗೇರಿ, ಹೊರನಾಡು ಹೇಳ್ತಾ ಹೋದ್ರೆ ಕಾಫಿನಾಡ ಪ್ರವಾಸಿ ತಾಣಗಳ ಸಂಖ್ಯೆ ಒಂದೋ ಎರಡೋ. ಧಾರ್ಮಿಕವಾಗಿ ಬಂದ್ರಂತು ಒಬ್ಬಳು ಅನ್ನ ನೀಡೋ ಅನ್ನದಾತೆ. ಮತ್ತೊಬ್ಬಳು ವಿಧ್ಯೆ ನೀಡೋ ವಿದ್ಯಾದೇವತೆ.ಕಾಫಿನಾಡ ಭೌಗೋಳಿಕತೆಯಲ್ಲಿ ಅರ್ಧಕರ್ಧ ಕಾಡೇ ಇದ್ದು, ಅಸಂಖ್ಯಾತ ವನ್ಯ ಮೃಗಗಳ ನಾಡು ಕೂಡ. ಇಲ್ಲಿನ ಪ್ರಕೃತಿ ಸೌಂದರ್ಯವನ್ನ ಸವಿಯೋಕೆಂದು ವರ್ಷಪೂರ್ತಿ ಪ್ರವಾಸಿಗರು ಹರಿದು ಬರ್ತಾರೆ. ಎರಡು ವರ್ಷಗಳಿಗೆ ಹೋಲಿಸಿದ್ರೆ ಈ ವರ್ಷ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಜೂನ್ ಒಂದೇ ತಿಂಗಳಿಗೆ ಜಿಲ್ಲೆಗೆ ಏಳು ಲಕ್ಷ ಟೂರಸ್ಟ್ಗಳು ಭೇಟಿ ನೀಡಿದ್ದಾರೆ. 2023ರ ಜನವರಿಯಿಂದ ಜೂನ್ 30ರವರೆಗೆ ಸುಮಾರು 30 ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ. ಅದರಲ್ಲಿ ಗ್ಯಾರಂಟಿ ಸರ್ಕಾರದ ಶಕ್ತಿಯ ಯೋಜನೆಯ ಪಾಲು ಕೂಡ ಒಂದಷ್ಟು ಇದ್ದೇ ಇದೆ ಎನ್ನುವುದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿದೇರ್ಶಕರಾದ ಲೋಹಿತ್ ಅಭಿಪ್ರಾಯವಾಗಿದೆ. 

ಉಚಿತ ಪ್ರಯಾಣ ಇದ್ದರೂ ತಗ್ಗಿದ ವೀಕೆಂಡ್‌ ರಶ್‌: ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸಂಖ್ಯೆ ಕುಸಿತ

ಜನವರಿ-ಜೂನ್ ನಲ್ಲಿ ಕಾಫಿನಾಡಿಗೆ 30 ಲಕ್ಷ ಪ್ರವಾಸಿಗರು ವಿಜ್ಹಿಟ್

ಕಾಫಿನಾಡ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಲ್ಲಿ ಇಷ್ಟು ದೊಡ್ಡ ಮಟ್ಟದ ಪ್ರವಾಸಿಗರು ಬರಲು ಗ್ಯಾರಂಟಿ ಸರ್ಕಾರದ ಶಕ್ತಿ ಯೋಜನೆ ಪಾಲು ಇದೆ. ಯಾಕಂದ್ರೆ, ಈ ವರ್ಷ ಜನವರಿಯಿಂದ ಜುಲೈವರೆಗೆ ಸುಮಾರು 30 ಲಕ್ಷದಷ್ಟು ಪ್ರವಾಸಿಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಕಳೆದ ವರ್ಷ ಇಡೀ ವರ್ಷಕ್ಕೆ 50 ಲಕ್ಷವಿತ್ತು, 2021ರಲ್ಲಿ ಇನ್ನೂ ಕಡಿಮೆ ಇತ್ತು. ಈ ಬಾರಿ ಜನವರಿಯಿಂದ ಆರೇ ತಿಂಗಳಿಗೆ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಏರಿದೆ. ಆರು ತಿಂಗಳಲ್ಲಿ 30 ಲಕ್ಷ. ಜೂನ್ ಒಂದೇ ತಿಂಗಳಿಗೆ 7 ಲಕ್ಷ. ಇನ್ನು ಈ ವರ್ಷದ ಕೊನೆಗೆ ಜಿಲ್ಲೆಗೆ ಭೇಟಿ ನೀಡಿರೋ ಪ್ರವಾಸಿಗರ ಸಂಖ್ಯೆ ಕೋಟಿ ದಾಟೋದ್ರಲ್ಲಿ ಅನುಮಾನವಿಲ್ಲ. 

ಒಟ್ಟಾರೆ, ಚಿಕ್ಕಮಗಳೂರು ಜಿಲ್ಲೆ ದಿನದಿಂದ ದಿನಕ್ಕೆ ಹೆಚ್ಚು ಪ್ರವಾಸಿಗರನ್ನ ಆಕರ್ಷಿಸುತ್ತಿದೆ. ಇಲ್ಲಿಯ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳೊಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿರು ಭೇಟಿ ನೀಡುವುದರಿಂದ ಸ್ಥಳೀಯವಾಗಿ ಆರ್ಥಿಕ ಚಟುವಟಿಕೆಗೂ ಕಾರಣವಾಗಿದೆ.

click me!