ಜೂನ್‌ನಿಂದ ಬೀದರ್‌-ಕಲಬುರಗಿಗೆ ಬೆಂಗ್ಳೂರಿಂದ ವಿಮಾನ ಸೇವೆ ಪುನರಾರಂಭ; ಮುಂಗಡ ಬುಕ್ಕಿಂಗ್ ಶುರು

Published : May 23, 2026, 05:14 AM IST
Airport

ಸಾರಾಂಶ

ಕಲ್ಯಾಣ ಕರ್ನಾಟಕ ಭಾಗದ ಬೀದರ್‌ ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ವಿಮಾನಯಾನ ಸೇವೆ ಪುನರಾರಂಭಗೊಳ್ಳಲಿದೆ. ಸ್ಟಾರ್‌ ಏರ್‌ಲೈನ್ಸ್‌ ಈ ಸೇವೆಯನ್ನು ಒದಗಿಸಲಿದ್ದು, ಪ್ರಾದೇಶಿಕ ಸಂಪರ್ಕ ವೃದ್ಧಿಸುವ ಉದ್ದೇಶದಿಂದ ಸರ್ಕಾರವು ವಯಾಬಲಿಟಿ ಗ್ಯಾಪ್‌ ಫಂಡಿಂಗ್‌ ಮೂಲಕ ಆರ್ಥಿಕ ಬೆಂಬಲ ನೀಡುತ್ತಿದೆ.

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಬೀದರ್‌ ಮತ್ತು ಕಲಬುರಗಿ ವಿಮಾನ ನಿಲ್ದಾಣಗಳಿಗೆ ಬೆಂಗಳೂರಿನಿಂದ ಕ್ರಮವಾಗಿ ಜೂ.1 ಮತ್ತು ಜೂ.10ರಿಂದ ವಿಮಾನಯಾನ ಸೇವೆ ಪುನರಾರಂಭಿಸಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸ್ಟಾರ್‌ ಏರ್‌ಲೈನ್ಸ್‌ ಸಂಸ್ಥೆಯು ಬೆಂಗಳೂರಿನಿಂದ ಬೀದರ್‌, ಕಲಬುರಗಿಗೆ ವಿಮಾನಯಾನ ಸೇವೆ ಒದಗಿಸಲಿದೆ. ಅದಕ್ಕೆ ಬೆಂಬಲ ನೀಡಲು ಸರ್ಕಾರವು 28.47 ಕೋಟಿ ರು.ಗಳನ್ನು ವಯಾಬಲಿಟಿ ಗ್ಯಾಪ್‌ ಫಂಡಿಂಗ್‌ ಆಗಿ ಕೊಡುತ್ತಿದೆ. ಎರಡೂ ಕರೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕ್ಕಿಂಗ್‌ ಆರಂಭಿಸಲಾಗಿದೆ ಎಂದರು.

ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮ

ಈ ಹಿಂದೆ ಕಲಬುರಗಿಗೆಯಿದ್ದ ವಿಮಾನಸೇವೆ ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್‌ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವಿಶೇಷ ನೆರವಿನಿಂದ ಒಂದು ವಿಮಾನ ಸೇವೆ ನೀಡಲಾಗುತ್ತಿತ್ತು. ಅದೂ ಸ್ಥಗಿತಗೊಂಡಿತ್ತು. ಇದೀಗ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗದ ಬೆಳವಣಿಗೆ ಪರಿಗಣಿಸಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮದಡಿ ವಿಮಾನ ಸೇವೆ ಮತ್ತೆ ಆರಂಭಿಸಲಾಗುತ್ತಿದೆ. ಅಲ್ಲದೆ, ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಿಗೆ ವಿಮಾನ ಸಂಪರ್ಕ ಒದಗಿಸಬೇಕು ಎನ್ನುವುದು ಸರ್ಕಾರದ ಕಾಳಜಿಯಾಗಿದೆ. ಅದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಜತೆಗೆ ಮೂಲಸೌಕರ್ಯ ಕೂಡ ಸುಧಾರಿಸಲಿದೆ ಎಂದು ವಿವರಿಸಿದರು.

 

 

PREV

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶ್ರೀಕೃಷ್ಣನ ಕಿರೀಟದಂತೆ ಕಾಣುವ ಹವಾ ಮಹಲ್: ಜೈಪುರದ ಈ ಪ್ರಸಿದ್ಧ ಅರಮನೆಯ ರೋಚಕ ಕಥೆ ಮಿಸ್ ಮಾಡ್ಬೇಡಿ?
450 ವರ್ಷಗಳ ಹಳೆಯ ದೇವಸ್ಥಾನವಿದು! ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತು ದೂರದೂರಿನಿಂದ ಬರುತ್ತಾರೆ ದಂಪತಿ