ಗೌರಿ- ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯು ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲಿದೆ. ಈ ರೈಲು ಸೇವೆಯು ಸೆಪ್ಟೆಂಬರ್ ತಿಂಗಳಲ್ಲಿ ವಿಶೇಷವಾಗಿ ಕಾರ್ಯನಿರ್ವಹಿಸಲಿದೆ.
ಬೆಂಗಳೂರು (ಸೆ.03) : ಗೌರಿ- ಗಣೇಶ ಹಬ್ಬದ ಪ್ರಯುಕ್ತ ಊರಿಗೆ ಹೋಗುವವರಿಗೆ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರಲಿದೆ ಎಂಬುದನ್ನು ಮನಗಂಡ ರೈಲ್ವೆ ಇಲಾಖೆಯು ಭುವನೇಶ್ವರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆಯನ್ನು ನೀಡಲು ಮುಂದಾಗಿದೆ.
ನಮ್ಮ ದೇಶದಲ್ಲಿ ಗೌರಿ ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇನ್ನು ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗೋವಾ, ಮುಂಬೈ ನಗರಗಳಲ್ಲಿ ಗಣೇಶ ಹಬ್ಬವನ್ನು ಜಾತ್ರೆಗಿಂತಲೂ ದೊಡ್ಡ ಮಟ್ಟದಲ್ಲಿ ಆಚರಣೆ ಮಾಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ಕೆಲಸ ಮಾಡುವ ಸ್ಥಳದಿಂದ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆಯಿಂದ (Indian Railway Special train for Ganesh Chaturthi 2024) ವಿಶೇಷ ರೈಲು ಸೇವೆ ನೀಡಲು ಮುಂದಾಗಿದೆ. ಈ ಮೂಲಕ ಸಾಮಾನ್ಯ ದಿನಗಳಲ್ಲಿ ಸಂಚಾರ ಮಾಡುವ ರೈಲುಗಳಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ತಪ್ಪಿಸಲು ಚಿಂತಿಸಿದೆ.
undefined
ಗಣೇಶ ಹಬ್ಬಕ್ಕೆ ಗುಡ್ ನ್ಯೂಸ್ ಕೊಟ್ಟ ಭಾರತೀಯ ರೈಲ್ವೇ, ಸುಗಮ ಸಂಚಾರಕ್ಕೆ 342 ವಿಶೇಷ ಟ್ರೈನ್!
ಭುವನೇಶ್ವರ-ಬೆಳಗಾವಿ ನಿಲ್ದಾಣಗಳ ನಡುವೆ ವಾರದ ವಿಶೇಷ ರೈಲು ಬಿಡಲಾಗುತ್ತಿದೆ. ರೈಲು ಸಂಖ್ಯೆ 02813/02814 ರೈಲುಗಳನ್ನು ಓಡಿಸಲಾಗುತ್ತಿದೆ.
1 . ರೈಲು ಸಂಖ್ಯೆ 02813 - ಸೆ.7, 14, 21 ಮತ್ತು 28, 2024 ರಂದು ಪ್ರತಿ ಶನಿವಾರ ಭುವನೇಶ್ವರದಿಂದ ಸಂಜೆ 07:15 ಗಂಟೆಗೆ ಹೊರಟು, ಸೋಮವಾರ ಬೆಳಗಿನ ಜಾವ 3 ಗಂಟೆಗೆ ಬೆಳಗಾವಿ ನಿಲ್ದಾಣಕ್ಕೆ ಬರಲಿದೆ.
2. ರೈಲು ಸಂಖ್ಯೆ 02814 - ಸೆ. 9, 16, 23 ಮತ್ತು 30 ರಂದು ಪ್ರತಿ ಸೋಮವಾರ ಬೆಳಗಾವಿಯಿಂದ ಬೆಳಗ್ಗೆ 07:30 ಗಂಟೆಗೆ ಹೊರಟು ಮಂಗಳವಾರ ಮಧ್ಯಾಹ್ನ 02:30 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ.
ಈ ರೈಲು ನಿಲುಗಡೆ ಆಗುವ ನಿಲ್ದಾಣಗಳು:
ತುಮಕೂರು ಜಿಲ್ಲೆಯ ಬಹುದಿನದ ಬೇಡಿಕೆ ಈಡೇರಿಸಿದ ರೈಲ್ವೆ ಇಲಾಖೆ!
ಈ ವಿಶೇಷ ರೈಲು ಹದಿನಾರು ಎಸಿ-3 ಟೈಯರ್ ಬೋಗಿಗಳನ್ನು ಹೊಂದಿರಲಿದೆ. ಎರಡು ಬ್ರೇಕ್, ಲಗೇಜ್ ಕಮ್ ಜನರೇಟರ್ ಕಾರುಗಳನ್ನು ಒಳಗೊಂಡಿದೆ. ಈ ಮೂಲಕ ಉತ್ತರ ಕರ್ನಾಟಕ ರಾಜ್ಯದ ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ದೊಡ್ಡ ಮಟ್ಟದ ಅನುಕೂಲ ಮಾಡಿಕೊಡಲಾಗಿದೆ. ಇನ್ನು ಮುಂದಿನ ತಿಂಗಳು ಈ ವಿಶೇಷ ರೈಲು ಸಂಚಾರ ಮಾಡುವುದಿಲ್ಲ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಆದರೆ, ಪ್ರಯಾಣಿಕರ ಸಂಚಾರ ದಟ್ಟಣೆ ನೋಡಿಕೊಂಡು ಮತ್ತೊಮ್ಮೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.