2023ರಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ ಪ್ರವಾಸಿಗರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2 ಲಕ್ಷ ಭಾರತೀಯರು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ.
ನವದೆಹಲಿ: 2023ರಲ್ಲಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ ಪ್ರವಾಸಿಗರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪ್ರವಾಸೋದ್ಯಮ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2 ಲಕ್ಷ ಭಾರತೀಯರು ಮಾಲ್ಡೀವ್ಸ್ ಪ್ರವಾಸ ಕೈಗೊಂಡಿದ್ದಾರೆ.
2023ರ ಡಿ.13ರವೆಗೆ 17 ಲಕ್ಷ ಮಂದಿ ಮಾಲ್ಡೀವ್ಸ್‌ಗೆ ಭೇಟಿ ನೀಡಿದ್ದು, 2022ಕ್ಕೆ ಹೋಲಿಸಿದರೆ ಇದರ ಪ್ರಮಾಣ ಶೇ.12.6ರಷ್ಟು ಹೆಚ್ಚಾಗಿದೆ. 2022ರಲ್ಲಿ 15 ಲಕ್ಷ ಮಂದಿ ಭೇಟಿ ನೀಡಿದ್ದರು. ಇದರಲ್ಲಿ ಭಾರತೀಯರ ಸಂಖ್ಯೆ 2.09 ಲಕ್ಷ ಇದ್ದು, ರಷ್ಯಾ (2 ಲಕ್ಷ), ಚೀನಾ (1.87 ಲಕ್ಷ) ನಂತರದ 2 ಸ್ಥಾನಗಳಲ್ಲಿವೆ. ಇದಲ್ಲದೇ ಬ್ರಿಟನ್‌ನಿಂದ 1.55 ಲಕ್ಷ, ಜರ್ಮನಿಯಿಂದ 1.35 ಲಕ್ಷ, ಇಟಲಿಯಿಂದ 1.18 ಲಕ್ಷ, ಅಮೆರಿಕದಿಂದ 75 ಸಾವಿರ ಮಂದಿ ಪ್ರವಾಸ ಕೈಗೊಂಡಿದ್ದಾರೆ.
ಈ ಅಂಕಿ ಅಂಶಗಳನ್ನು ಗಮನಿಸಿದರೆ ಮಾಲ್ಡೀವ್ಸ್ ದೇಶವು ಭಾರತೀಯ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿದ್ದು ಸಾಬೀತಾಗಿದೆ. ಈಗ ಭಾರತವು ಲಕ್ಷದ್ವೀಪವನ್ನು ಮಾಲ್ಡೀವ್ಸ್‌ಗೆ ಪರ್ಯಾಯ ಪ್ರವಾಸಿ ತಾಣವೆಂದು ಅಭಿವೃದ್ಧಿಪಡಿಸಿದರೆ ಮಾಲ್ಡೀವ್ಸ್ ಆರ್ಥಿಕತೆಗೆ ಭಾರಿ ಹೊಡೆತ ಬೀಳುವ ಸಾಧ್ಯತೆ ಇದೆ.
ಭಾರತೀಯರಿಂದ 'ಬಾಯ್ಕಾಟ್ ಮಾಲ್ಡೀವ್ಸ್' ಅಭಿಯಾನ, ಪ್ರವಾಸ ರದ್ದು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿ ಮಾಲ್ಡೀವ್ಸ್ ಸಚಿವೆ ಟ್ವೀಟ್ ಮಾಡಿರುವ ಬೆನ್ನಲ್ಲೇ ಮಾಲ್ಡೀವ್ಸ್ ಪ್ರವಾಸವನ್ನು ಭಾರತೀಯರು ರದ್ದು ಮಾಡುತ್ತಿದ್ದಾರೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ‘ಬಾಯ್ಕಾಟ್ ಮಾಲ್ಡೀವ್ಸ್’ (ಮಾಲ್ಡೀವ್ಸ್‌ಗೆ ಬಹಿಷ್ಕಾರ ಹಾಕಿ) ಎಂಬುದು ಟ್ರೆಂಡ್ ಆಗಿದೆ. ಮಾಲ್ಡೀವ್ಸ್ ಪ್ರವಾಸವನ್ನು ರದ್ದು ಮಾಡಿರುವ ಸ್ಕ್ರೀನ್‌ಶಾಟ್‌ಗಳನ್ನು ಹಲವು ಜನ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಭಾರತವು ಆತ್ಮನಿರ್ಭರವಾಗಬೇಕು. ಮಾಲ್ಡೀವ್ಸ್‌ಗೆ ಹೋಗದೇ ಅವರಿಗೆ ತಿರುಗೇಟು ನೀಡಬೇಕು ಎಂಬ ಸಂದೇಶಗಳು ಹರಿದಾಡುತ್ತಿವೆ. ಮಾಲ್ಡೀವ್ಸ್ ಪ್ರವಾಸೋದ್ಯಮದಲ್ಲಿ ಭಾರತೀಯ ಪ್ರವಾಸಿಗಳ ಪಾಲೇ ಅಧಿಕವಾಗಿದೆ.
ಲಕ್ಷದ್ವೀಪಕ್ಕೆ ಸ್ವಾಗತ: ಇರುವೆ ಬಿಟ್ಕೊಂಡ ಮಾಲ್ಡೀವ್ಸ್‌ಗೆ ಮುಟ್ಟುನೋಡಿಕೊಳ್ಳೋ ಪಾಠ ಕಲಿಸಿದ ಬಾಲಿವುಡ್!
ಇತ್ತೀಚಿನ ಕೆಲವು ದಿನಗಳಿಂದ ಉಭಯ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟಿತ್ತು. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಬಳಿಕ, ಮಾಲ್ಡೀವ್ಸ್ ನಾಯಕರು ಭಾರತದ ವಿರುದ್ಧ ಹಲವು ಟೀಕೆಗಳನ್ನು ಮಾಡಿದ್ದರು.