ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರೋಪ್-ವೇ ನಿರ್ಮಾಣ ಮಾಡಗುತ್ತಿದ್ದು, ರಾಜ್ಯ ಸರ್ಕಾರ ಎರಡು ಎಕರೆ ಭೂಮಿ ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಬೆಂಗಳೂರು (ಆ.19): ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಖ್ಯಾತ ಪ್ರವಾಸಿತಾಣ ನಂದಿ ಗಿರಿಧಾಮದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಸರ್ಕಾರಿ, ಖಾಸಗಿ ಸಹಭಾಗಿತ್ವದಲ್ಲಿ ರೋಪ್-ವೇ ನಿರ್ಮಾಣ ಕಾಮಗಾರಿಗಳನ್ನು ಮಾಡಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಸಿದ್ದರಾಮಯ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿ ಯೋಜನೆಗೆ ಗ್ರೀನ್ ಸಿಗ್ನಲ್ ನೀಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ 2 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ 30 ವರ್ಷಕ್ಕೆ ಈ ಭೂಮಿಯನ್ನು ಗುತ್ತಿಗೆಗೆ ನೀಡಲಾಗಿದೆ.
ರೋಪ್ ವೇ ಕಾಮಗಾರಿ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ಡೈನಾಮಿಕ್ಸ್ ರೋಪ್‌ವೇ ಪ್ರೈವೇಟ್ ಲಿಮಿಟೆಡ್ ಜೊತೆಗೆ ಒಪ್ಪಂದಕ್ಕೆ ಈಗಾಗಲೇ ಸಹಿ ಹಾಕಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ( public-private-participation) ಮಾದರಿಯಲ್ಲಿ ನಂದಿ ಬೆಟ್ಟದಲ್ಲಿ ರೋಪ್‌ವೇ ಅಭಿವೃದ್ಧಿಪಡಿಸುವ ಈ ಯೋಜನೆಗೆ 115 ಕೋಟಿ ವೆಚ್ಚ ತಗುಲಲಿದೆ. ನಿರ್ಮಿತ ರೋಪ್ ವೇ ಗೆ ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣ ತಲುಪಲು ಅಂದಾಜು 13ರಿಂದ 15 ನಿಮಿಷಗಳು ಬೇಕಾಗುತ್ತದೆ. ಪ್ರತಿ ಗಂಟೆಗೆ ಅಂದಾಜು 1000 ಜನರನ್ನು ಕೆಳಗಿನ ನಿಲ್ದಾಣದಿಂದ ಮೇಲಿನ ನಿಲ್ದಾಣಕ್ಕೆ ಕರೆದೊಯ್ಯಬಹುದು.
ಬಿಗ್‌ಬಾಸ್ ಕನ್ನಡ ಸೀಸನ್ 11: ಹೈದರಾಬಾದ್ ಪ್ರೋಮೋ ಶೂಟಿಂಗ್ ಸೆಟ್‌ನಿಂದ ಎರಡು ಫೋಟೋ ಲೀಕ್!
ಬಂಡವಾಳ ಹೂಡುವ ರೋಪ್ ವೇ ನಿರ್ಮಾಣ ಸಂಸ್ಥೆಗೇ 30 ವರ್ಷಗಳ ಕಾಲ ನಿರ್ವಹಣೆ ಜವಾಬ್ದಾರಿಯನ್ನು ನೀಡಲಾಗಿದೆ. ಸುಮಾರು 3 ಕಿ.ಮೀ ಉದ್ದದ ರೋಪ್ ವೇ ನಲ್ಲಿ 50 ಕೇಬಲ್ ಕಾರ್ ಗಳು ಹೋಗುವ ಮತ್ತು 50 ಕೇಬಲ್ ಕಾರ್ ಗಳು ಬರುವ ವ್ಯವಸ್ಥೆಯಿದ್ದು, ಪ್ರತಿ ಕಾರ್ ನಲ್ಲಿ ಆರು ಜನರು ಕುಳಿತುಕೊಳ್ಳಲು ಅವಕಾಶವಿರುತ್ತದೆ.
ಮಾಗಡಿಗೆ ಹೇಮಾವತಿ ನೀರು: ಎಕ್ಸ್‌ಪ್ರೆಸ್ ಕೆನಾಲ್ ಕಾಮಗಾರಿ ಆರಂಭಿಸಲು ಆಗ್ರಹ
ಇನ್ನು ಪ್ರವಾಸಿಗರಿಗೆ ಹೋಟೆಲ್ ಮತ್ತು ವಸತಿ ಸೌಕರ್ಯದ ಜೊತೆಗೆ ಬೆಟ್ಟದ ಕೆಳಗೆ ದ್ವಿಚಕ್ರ, ನಾಲ್ಕು ಚಕ್ರ ಮತ್ತು ಬಾಡಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆ , ಎಟಿಎಂ, ಕುಡಿಯುವ ನೀರಿನ ಘಟಕಗಳು, ಶೌಚಾಲಯ, ಟಿಕೆಟ್ ಕೌಂಟರ್‌ಗಳು, ವಿಶ್ರಾಂತಿ ಕೊಠಡಿಗಳು, ರೆಸ್ಟೋರೆಂಟ್, ಟೀ ಮತ್ತು ಕಾಫಿ ಮಳಿಗೆ ಸೇರಿದಂತೆ ಇನ್ನಿತರ ಸೌಲಭ್ಯಗಳು ದೊರೆಯಲಿದೆ. ಈ ಮೂಲಕ ರೂಪ್ ವೇ ಜೊತೆಗೆ ಪ್ರವಾಸೋಧ್ಯಮದ ಕಡೆಗೂ ಹೆಚ್ಚಿನ ಒತ್ತು ನೀಡಲಾಗಿದೆ.