ಬೆಂಗಳೂರು ಮತದಾರರಿಗೆ ಗುಡ್ ನ್ಯೂಸ್: ಏ.26ರಂದು ನಮ್ಮ ಮೆಟ್ರೋ ಸಂಚಾರದ ಅವಧಿ ವಿಸ್ತರಿಸದ ಬಿಎಂಆರ್‌ಸಿಎಲ್

By Sathish Kumar KH  |  First Published Apr 24, 2024, 3:24 PM IST

ಬೆಂಗಳೂರಿನಲ್ಲಿ ಮತದಾನ ಮಾಡುವ ಮತದಾರರಿಗೆ ಅನುಕೂಲ ಆಗುವಂತೆ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು 12.35ರವರೆಗೆ ವಿಸ್ತರಣೆ ಮಾಡುವುದಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ. 


ಬೆಂಗಳೂರು (ಏ.24): ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಲ್ಲಿ ಏ.26ರ ಶುಕ್ರವಾರ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ಸಂಚಾರದ ಅವಧಿಯನ್ನು ಮಧ್ಯರಾತ್ರಿ 11.55ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿ.(ಬಿಎಂಆರ್‌ಸಿಎಲ್‌) ವತಿಯಿಂದ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ. ಏ.26ರಂದು ಬೆಂಗಳೂರಿನಲ್ಲಿ ನಡೆಯುವ ಲೋಕಸಭಾ ಚುನಾವಣೆ 2024ರ ಪ್ರಯುಕ್ತ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಹಾಗೂ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 23.55ಕ್ಕೆ (11.55pm) ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

Tap to resize

Latest Videos

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಎಲ್ಲ ಮತಗಟ್ಟೆಗಳಿಗೆ ವೆಬ್ ಕಾಸ್ಟಿಂಗ್; ಡಬಲ್ ಸೆಕ್ಯೂರಿಟಿ ಅಳವಡಿಕೆ

ಇನ್ನು ಎಲ್ಲ ಮೆಟ್ರೋ ಟರ್ಮಿನಲ್‌ಗಳಿಂದ ಮೆಜೆಸ್ಟಿಕ್‌ಗೆ ಆಗಮಿಸುವ ಮೆಟ್ರೋ ರೈಲುಗಳು ಮಧ್ಯರಾತ್ರಿ 12.35ಕ್ಕೆ ಅಂದರೆ (April 27th 00.35 AM) ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಕೋರಿದೆ.

click me!