ಚೀನಾ ಸೇರಿ ಈ 4 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯ

By Vinutha Perla  |  First Published Dec 24, 2022, 1:35 PM IST

ವಿಶ್ವದ ಕೆಲವು ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಕೇಂದ್ರ ಸರ್ಕಾರ ಕಟ್ಟೆಚ್ಚರ ವಹಿಸುತ್ತಿದೆ. ಚೀನಾ ಸೇರಿ ಈ 4 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.


ಕೋವಿಡ್ ಆತಂಕ ಕೇವಲ ಚೀನಾ ಮಾತ್ರವಲ್ಲದೆ ಇನ್ನೂ ಹಲವು ರಾಷ್ಟ್ರಗಳಲ್ಲಿ ಹೆಚ್ಚಿದೆ. ಹೀಗಾಗಿ ಕೇಂದ್ರ ಸರ್ಕಾರ, ಇನ್ನೂ 4 ರಾಷ್ಟ್ರಗಳಿಂದ ಆಗಮಿಸುವವರಿಗೆ ಕಡ್ಡಾಯ (Compulsory) ಆರ್‌ಟಿ-ಪಿಸಿಆರ್ ಪರೀಕ್ಷೆ (Test) ನಡೆಸುವಂತೆ ಸೂಚಿಸಿದೆ. ಚೀನಾ, ದಕ್ಷಿಣ ಕೊರಿಯಾ, ಜಪಾನ್ ಮತ್ತು ಥಾಯ್ಲೆಂಡ್‌ನಿಂದ ಆಗಮಿಸುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಗಳು ಕಡ್ಡಾಯವಾಗಿರುತ್ತವೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿಯನ್ನು ಚರ್ಚಿಸಲು ಮತ್ತು ದೇಶವು ಎಲ್ಲಾ ಕ್ರಮಗಳೊಂದಿಗೆ ಸಿದ್ಧವಾಗಿದೆ ಎಂದು ಖಚಿತಪಡಿಸಿಕೊಳ್ಳಲು ಕೇಂದ್ರ ಆರೋಗ್ಯ ಸಚಿವರು (Health minister) ರಾಜ್ಯ ಸಚಿವರೊಂದಿಗೆ ಸಭೆ ನಡೆಸಿದ ನಂತರ ಈ ನಿರ್ಧಾರವನ್ನು ಪ್ರಕಟಿಸಲಾಯಿತು. 

ಐದು ರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ
ಕೇಂದ್ರ ಸರ್ಕಾರ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಕಾಂಗ್ ಮತ್ತು ಥೈಲ್ಯಾಂಡ್‌ನಿಂದ ಅಂತರರಾಷ್ಟ್ರೀಯ ಆಗಮನಕ್ಕೆ ಆರ್ಟಿ-ಪಿಸಿಆರ್ ಕಡ್ಡಾಯವಾಗಲಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ. ಇನ್ನು ಈ ದೇಶಗಳಿಂದ ಬಂದ ಯಾವುದೇ ಪ್ರಯಾಣಿಕರಿಗೆ ರೋಗಲಕ್ಷಣಗಳು (Symptoms) ಕಂಡುಬಂದರು ಅಥವಾ ಕೋವಿಡ್ ಪಾಸಿಟಿವ್ ಎಂದು ಕಂಡುಬಂದರೆ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಸಚಿವರು ತಿಳಿಸಿದರು.

Tap to resize

Latest Videos

Corona Virus: ಕೋವಿಡ್‌ ಸೋಂಕಿಗೆ ರುಚಿ ಮತ್ತು ವಾಸನೆಯ ನಷ್ಟವಾಗೋದು ಯಾಕೆ ?

ಆರೋಗ್ಯ ಸ್ಥಿತಿಯ ಬಗ್ಗೆ ತಿಳಿಯಲು ಏರ್ ಸುವಿಧಾ ಫಾರ್ಮ್‌ ಭರ್ತಿ ಮಾಡುವುದು ಅಗತ್ಯ
ಚೀನಾದಲ್ಲಿ ಓಮಿಕ್ರಾನ್ ಹೊಸ ರೂಪಾಂತರದ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಡಿಸೆಂಬರ್‌ನ ಮೊದಲ 20 ದಿನಗಳಲ್ಲಿ ದೇಶದ ಜನಸಂಖ್ಯೆಯ ಸುಮಾರು 18 ಪ್ರತಿಶತದಷ್ಟು ಜನರು ವೈರಸ್‌ಗೆ ಬಲಿಯಾಗಲಿದ್ದಾರೆ ಎಂದು ವರದಿಯಿಂದ ತಿಳಿದುಬಂದಿದೆ. ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಘೋಷಿಸಲು ಏರ್ ಸುವಿಧಾ ಫಾರ್ಮ್‌ಗಳನ್ನು ಭರ್ತಿ ಮಾಡುವುದು ಈ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ (Passengers) ಕಡ್ಡಾಯವಾಗಿದೆ. ಏರ್ ಸುವಿಧಾ ಸ್ವಯಂ ಘೋಷಣೆಯ ನಮೂನೆಯು ಡಿಜಿಟಲ್ ಆರೋಗ್ಯ ಮತ್ತು ಪ್ರಯಾಣದ (Travel) ದಾಖಲೆಯಾಗಿದ್ದು, ಭಾರತವನ್ನು ಪ್ರವೇಶಿಸಲು ಬಯಸುವ ಎಲ್ಲಾ ಪ್ರಯಾಣಿಕರು ಇದನ್ನು ಭರ್ತಿ ಮಾಡುವುದು ಅಗತ್ಯವಾಗಿದೆ. 

ಮಾಂಡವಿಯಾ, ರಾಜ್ಯ ಸಚಿವರೊಂದಿಗಿನ ಸಭೆಯ ನಂತರ ಟ್ವೀಟ್ ಮಾಡಿದ್ದಾರೆ, 'ರಾಜ್ಯ ಆರೋಗ್ಯ ಮಂತ್ರಿಗಳೊಂದಿಗಿನ COVID-19 ಪರಿಶೀಲನಾ ಸಭೆಯಲ್ಲಿ ಎಚ್ಚರಿಕೆಯ ಅಗತ್ಯವನ್ನು ಒತ್ತಿಹೇಳಿದ್ದಾರೆ. ಜನರು ಭಯಪಡುವ ಅಗತ್ಯವಿಲ್ಲ. ನಮಗೆ ಸಾಂಕ್ರಾಮಿಕ ನಿರ್ವಹಣೆಯಲ್ಲಿ 3 ವರ್ಷಗಳ ಅನುಭವವಿದೆ. COVID-19 ಅನ್ನು ಎದುರಿಸಲು ಕೇಂದ್ರ ಸರ್ಕಾರವು ಎಲ್ಲಾ ಬೆಂಬಲವನ್ನು ನೀಡುತ್ತದೆ. ನಾವು ಅಗತ್ಯಗಳಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳುತ್ತೇವೆ'  ಎಂದು ಹೇಳಿದ್ದಾರೆ.

ಮೂಗಿನ ಲಸಿಕೆ ಬೂಸ್ಟರ್‌ ಡೋಸ್‌ಗೆ ಕೇಂದ್ರ ಅಸ್ತು..!

'ಅಲ್ಲದೆ, ಪರೀಕ್ಷೆ, ಜೀನೋಮ್ ಅನುಕ್ರಮವನ್ನು ಹೆಚ್ಚಿಸುವ ಮೂಲಕ ಮತ್ತು COVID-ಸೂಕ್ತ ನಡವಳಿಕೆಯನ್ನು ಅನುಸರಿಸುವ ಮೂಲಕ ಪೂರ್ವಭಾವಿ ವಿಧಾನದೊಂದಿಗೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ಒತ್ತು ನೀಡಲಾಗಿದೆ' ಎಂದು ತಿಳಿಸಲಾಗಿದೆ. 'ನಾವು ಪ್ರತಿದಿನ ಜಾಗತಿಕ ಕೋವಿಡ್ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ದೇಶದಲ್ಲಿ ರೋಗ ಹರಡದಂತೆ ಖಚಿತಪಡಿಸಿಕೊಳ್ಳಲು ನಾವು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ' ಎಂದರು.

ಮುಂಬರುವ ಹಬ್ಬದ ಸೀಸನ್‌ಗಾಗಿ ಶುಕ್ರವಾರ ಆರೋಗ್ಯ ಸಚಿವಾಲಯವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಜನರು ಎಚ್ಚರಿಕೆಯಿಂದ ಆಚರಿಸಲು ಕೇಳಿಕೊಂಡಿದೆ. ಜಾಗತಿಕವಾಗಿ ಲಕ್ಷಾಂತರ ಪ್ರಕರಣಗಳು ದಾಖಲಾಗುತ್ತಿದ್ದರೂ ಭಾರತದಲ್ಲಿ ಸದ್ಯ ಪ್ರತಿದಿನ ಕೆಲವು ನೂರು ಪ್ರಕರಣಗಳು ದಾಖಲಾಗುತ್ತಿವೆ.

Omicron BF.7, ಸೋಂಕು ತಗುಲೋ ಮುನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ

click me!