
ಬೆಂಗಳೂರು: ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಗೋವಾ ಮಡಗಾಂವ್ ನಡುವೆ ಒಂದು ಟ್ರಿಪ್ ವಿಶೇಷ ರೈಲನ್ನು ಸಂಚರಿಸುವುದಾಗಿ ನೈಋತ್ಯ ರೈಲ್ವೆ ತಿಳಿಸಿದೆ.
ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು (06507) ಫೆ.13ರಂದು ಮಧ್ಯಾಹ್ನ 12.30ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ಮಡಗಾಂವ್ ತಲುಪಲಿದೆ. ಅಲ್ಲಿಂದ ಹಿಂದಿರುಗುವ ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು (06508) ಫೆ. 16ರ ಬೆಳಗ್ಗೆ 11 ಗಂಟೆಗೆ ಮಡಗಾಂವ್’ನಿಂದ ಹೊರಟು, ಮರುದಿನ ಬೆಳಗ್ಗೆ 4.45ಕ್ಕೆ ಯಶವಂತಪುರ ತಲುಪಲಿದೆ.
ಇದನ್ನೂ ಓದಿ: ತತ್ಕಾಲ್ ರೈಲು ಟಿಕೆಟ್ ಬುಕಿಂಗ್‌ನಲ್ಲಿ ಮಹತ್ತರ ಬದಲಾವಣೆ, ಪ್ರಯಾಣಿಕನಿಗೆ ನೆರವಾದ ಸ್ಮಾರ್ಟರ್ ಟಿಕೆಟ್
ಈ ರೈಲು ಚಿಕ್ಕಬಾಣಾವರ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ಆಗಲಿವೆ.
ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ, ಬೆಂಗಳೂರಿನಿಂದ ವಿಜಯಪುರಕ್ಕೆ ವಿಶೇಷ ರೈಲು ಯಾವೆಲ್ಲ ಸ್ಟೇಷನ್‌ನಲ್ಲಿ ನಿಲುಗಡೆ ಇರಲಿದೆ
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.