ಚಿಕ್ಕಮಗಳೂರು: ಮುಳ್ಳಯ್ಯನಗಿರಿಗೆ ಹರಿದು ಬಂದ ಪ್ರವಾಸಿಗರ ದಂಡು, ಗಿರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್..!

By Girish Goudar  |  First Published Jun 9, 2024, 9:20 PM IST

ಕೊರೆಯುವ ಚಳಿಯಲ್ಲಿ ದಟ್ಟ ಮಂಜಿನ ನಡುವೆ ಪ್ರವಾಸಿಗರು ಕುಣಿದು ಕುಪ್ಪಳಿಸಿದ್ದು, ಪ್ರತಿ ವೀಕೆಂಡ್‌ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಸುತ್ತಮುತ್ತಲಿನ ಗಿರಿ ಶಿಖರಕ್ಕೆ ಇಂದು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಪ್ರಕೃತಿ ಮಡಿಲಿನಲ್ಲಿ ಸಿಗುವ ಖುಷಿಯನ್ನ ಅನುಭವಿಸಿದರು. 
 


ವರದಿ: ಆಲ್ದೂರು ಕಿರಣ್, ಏಷ್ಯಾ ನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

ಚಿಕ್ಕಮಗಳೂರು(ಜೂ.09): ಮಳೆಗಾಲದಲ್ಲಿ ರಾಜ್ಯದ ಅತಿ ಎತ್ತರದ ಗಿರಿ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಇಂದು (ಭಾನುವಾರ) ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರವಾಸಿಗರು, ಎತ್ತರದ ಶಿಖರದ ಮೇಲೆ ನಿಂತು ಮಳೆಗಾಲದಲ್ಲಿ ಸೃಷ್ಟಿಯಾಗಿರುವ ದೃಶ್ಯ ಕಾವ್ಯವನ್ನು ಸವಿದು ಎಂಜಾಯ್ ಮಾಡಿದ್ದಾರೆ.

Tap to resize

Latest Videos

undefined

ದಟ್ಟ ಮಂಜಿನ ನಡುವೆ ಪ್ರವಾಸಿಗರು : 

ಕೊರೆಯುವ ಚಳಿಯಲ್ಲಿ ದಟ್ಟ ಮಂಜಿನ ನಡುವೆ ಪ್ರವಾಸಿಗರು ಕುಣಿದು ಕುಪ್ಪಳಿಸಿದ್ದು, ಪ್ರತಿ ವೀಕೆಂಡ್‌ಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಸುತ್ತಮುತ್ತಲಿನ ಗಿರಿ ಶಿಖರಕ್ಕೆ ಇಂದು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಪ್ರಕೃತಿ ಮಡಿಲಿನಲ್ಲಿ ಸಿಗುವ ಖುಷಿಯನ್ನ ಅನುಭವಿಸಿದರು. 

ಜಗತ್ತಿನ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಕುರಿತು ನಿಮಗೆ ಗೊತ್ತಿರದ ಸಂಗತಿಗಳು

ಗಿರಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ : 

ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರಿಂದ ಕಿರಿದಾದ ರಸ್ತೆಯ ಮೂಲಕ ಚಿಕ್ಕಮಗಳೂರಿನಿಂದ ಮುಳ್ಳಯ್ಯನಗಿರಿಗೆ ತೆರಳುವ ಮಾರ್ಗ ಮಧ್ಯೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಟ್ರಾಫಿಕ್‌ನಲ್ಲಿ ಸಿಲುಕಿ ಗಂಟೆಗಟ್ಟಲೆ ಪ್ರವಾಸಿಗರ ವಾಹನಗಳು ನಿಂತಲ್ಲೇ ನಿಲ್ಲಬೇಕಾಯಿತು. ಇನ್ನು ಜಿಲ್ಲಾಡಳಿತದಿಂದ ಯಾವುದೇ ಸೂಚನೆ ಇಲ್ಲದಿದ್ದರು ಮುಳ್ಳಯ್ಯನಗಿರಿಗೆ ಪ್ರವಾಸಿಗರ ವಾಹನಗಳಿಗೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ನಿರ್ಬಂಧ ಮಾಡಿದರು. ಮುಳ್ಳಯ್ಯನಗಿರಿ ತೆರಳುವ ಮಾರ್ಗ ಮಧ್ಯೆ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಹಾಕಿ ಸೀತಾಳಯ್ಯನ ಗಿರಿ ಬಳಿ ಪ್ರವಾಸಿಗರ ವಾಹನಗಳಿಗೆ ಪಾರ್ಕಿಂಗ್ ಮಾಡಿಸಿ ಖಾಸಗಿ ವಾಹನಗಳ ಮೂಲಕ ಮುಳ್ಳಯ್ಯನಗಿರಿಗೆ ತೆರಳುವಂತೆ ಸೂಚನೆ ನೀಡಿದರು. 

click me!