
ನಾಳೆ ಅರ್ಥಾತ್ ಆಗಸ್ಟ್ 19ರಿಂದ ಬರುವ 26ನೇ ತಾರೀಖಿನವರೆಗೆ ಕೆಲವೊಂದು ದಿನಾಂಕಗಳಲ್ಲಿ ತಾಳಗುಪ್ಪ-ಬೆಂಗಳೂರು ಎಕ್ಸ್‌ಪ್ರೆಸ್ ಸೇರಿ ಕೆಲ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಮಲ್ಲಸಂದ್ರ ಮತ್ತು ಗುಬ್ಬಿ ನಡುವೆ ನಡೆಯುತ್ತಿರುವ ಕಾಮಗಾರಿ ಹಿನ್ನೆಲೆ ಈ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ತಾಳಗುಪ್ಪ ಹಾಗೂ ಶಿವಮೊಗ್ಗ ಮಾರ್ಗದ ಪ್ರಮುಖ ರೈಲುಗಳ ಸಂಚಾರ ಭಾಗಶಃ ರದ್ದು ಮತ್ತು ಮಾರ್ಗ ಬದಲಾವಣೆ ಮಾಡಲಾಗಿದ್ದು, ಅವುಗಳ ಫುಲ್ ಡಿಟೇಲ್ಸ್ ಇಲ್ಲಿದೆ:
ರೈಲು ಸಂಖ್ಯೆ 20652: ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ (Talguppa – KSR Bengaluru Express) ರೈಲಿನ ಸಂಚಾರವು ಭಾಗಶಃ ರದ್ದಾಗಲಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಅರಸೀಕೆರೆಯಲ್ಲಿಯೇ ಮುಕ್ತಾಯಗೊಳ್ಳಲಿದ್ದು, ಮುಂದೆ ಹೋಗುವವರು ಬೇರೆ ವ್ಯವಸ್ಥೆ ಮಾಡಿಕೊಳ್ಳಬೇಕಿದೆ.
ರೈಲು ಸಂಖ್ಯೆ 20689: ಯಶವಂತಪುರ–ಶಿವಮೊಗ್ಗ ಟೌನ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ( Yesvantpur–Shivamogga Town Intercity Express) ರೈಲಿನ ಮಾರ್ಗ ಬದಲಾವಣೆ ಮಾಡಲಾಗಿದೆ. ಆಗಸ್ಟ್ 19, 22, 23 ಮತ್ತು 26 ರಂದು ಈ ರೈಲು ಚಿಕ್ಕಬಾಣಾವರ, ನೆಲಮಂಗಲ, ಹಾಸನ ಹಾಗೂ ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲಿಗೆ ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.