ತುಮಕೂರು: ಧಾರಾಕಾರ ಮಳೆಗೆ ಹೆದ್ದಾರಿ ಬಿರುಕು

By Kannadaprabha NewsFirst Published Oct 23, 2019, 10:21 AM IST
Highlights

ಗುಬ್ಬಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ನಿಟ್ಟೂರು ಬಳಿ ಹೇಮಾವತಿ ನಾಲೆಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಿರುಕು ಬಿಟ್ಟಿದೆ. ತುಮಕೂರಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ರಸ್ತೆ ಬಿರುಕು ಬಿಟ್ಟಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ತೀವ್ರ ಸಂಚಾರದ ಸಮಸ್ಯೆ ಉಂಟಾಯಿತು

ತುಮಕೂರು(ಅ.23): ಗುಬ್ಬಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ನಿಟ್ಟೂರು ಬಳಿ ಹೇಮಾವತಿ ನಾಲೆಗೆ ಹೊಂದಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆ ಬಿರುಕು ಬಿಟ್ಟಿದೆ.

ರಸ್ತೆ ಬಿರುಕು ಬಿಟ್ಟಿದ್ದರಿಂದ ರಸ್ತೆಯಲ್ಲಿ ಕೆಲಕಾಲ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರಿಂದ ತೀವ್ರ ಸಂಚಾರದ ಸಮಸ್ಯೆ ಉಂಟಾಯಿತು. ರಭಸದಿಂದ ನೀರು ಹರಿಯುತ್ತಿದ್ದರಿಂದ ರಸ್ತೆ ಕುಸಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ಸ್ಥಳೀಯರು ಮೂಟೆಗಳನ್ನು ಅಳವಡಿಸಿ ನೀರು ನಿಲ್ಲಿಸುವ ಪ್ರಯತ್ನ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಗೆ ಭೂ ಸ್ವಾಧೀನ, ಪರಿಹಾರ ಕೊಟ್ಟಿದ್ರೂ ನಡೀತು ಮಾತಿನ ಚಕಮಕಿ..!

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಹಾದು ಹೋಗುವ ರಸ್ತೆಯ ಕೆಳಭಾಗದಲ್ಲಿ ಹರಿಯುವ ಹೇಮಾವತಿ ನಾಲೆಗೆ ಮಳೆ ನೀರು ರಭಸದಿಂದ ಹರಿದಿದ್ದರಿಂದ ಬಿರುಕು ಕಾಣಿಸಿಕೊಂಡಿತು. ಕೇಬಲ್‌ ಅಳವಡಿಕೆಗಾಗಿ ತೆಗೆದಿದ್ದ ಗುಂಡಿಯಲ್ಲಿ ನೀರು ತುಂಬಿಕೊಂಡು ಮಣ್ಣು ಕುಸಿತ ಉಂಟಾಯಿತು. ಮಣ್ಣು ಕುಸಿತ ಹೆಚ್ಚಾಗಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಎಚ್ಚೆತ್ತುಕೊಂಡು ಮರಳಿನ ಮೂಟೆಗಳನ್ನು ಹಾಕಿ ಮಣ್ಣು ಕುಸಿತವನ್ನು ನಿಯಂತ್ರಣಕ್ಕೆ ತಂದರು. ಅಧಿಕಾರಿಗಳು ಬರುವುದಕ್ಕೆ ಮುನ್ನವೇ ಸ್ಥಳೀಯರೇ ತೊಂದರೆಯಾಗದಂತೆ ಮುಂಜಾಗ್ರತೆ ವಹಿಸಿದ್ದರು.

ರಸ್ತೆಗಳ ದುರಸ್ತಿಗೆ ಆಗ್ರಹ:

ಹತ್ತಾರು ವರ್ಷದಿಂದ ನಾಲೆಯ ಎರಡೂ ಬದಿಯಲ್ಲಿ ಮಣ್ಣು ಕಸಿಯುವುದು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಸುರಿದ ಭಾರಿ ಮಳೆ ನಾಲೆ ಅಪಾಯಕಾರಿ ಹಂತ ತಲುಪಿದೆ. ಕೂಡಲೇ ನಾಲೆ ಪಕ್ಕದ ರಸ್ತೆಗಳನ್ನು ದುರಸ್ತಿಗೊಳಿಸಬೇಕೆಂದು ಬೆಲವತ್ತ ಗ್ರಾಪಂ ಉಪಾಧ್ಯಕ್ಷ ಎನ್‌.ಬಿ.ರಾಜಶೇಖರ್‌ ತಿಳಿಸಿದ್ದಾರೆ.

ರೈತನಿಂದ ಲಂಚ ಸ್ವೀಕಾರ: ರೆಡ್‌ ಹ್ಯಾಂಡ್‌ ಆಗಿ ಎಸಿಬಿ ಬಲೆಗೆ ಬಿದ್ದ ಪೊಲೀಸ್..!

ಪಟ್ಟಣದಿಂದ ಚೇಳೂರಿಗೆ ಸಂಪರ್ಕ ಕಲ್ಪಿಸುವ ರೈಲ್ವೆ ಅಂಡರ್‌ಪಾಸ್‌ನಲ್ಲಿ ಮಳೆ ನೀರು ತುಂಬಿಕೊಂಡಿದ್ದು ವಾಹನ ಸವಾರರು ವಾಹನ ಚಲಾಯಿಸಲು ಹರಸಾಹಸ ಪಡಬೇಕಾಯಿತು. ಇನ್ನು ಸಿಐಟಿ ಕಾಲೇಜು ಹಿಂಭಾಗದ ರೈಲ್ವೆ ಅಂಡರ್‌ ಪಾಸ್‌ನಲ್ಲಿ ಯೂ ಮಳೆ ನೀರು ತುಂಬಿಕೊಂಡಿದ್ದು ಕೆರೆಯಂತಾಗಿದೆ ಈಭಾಗದಲ್ಲಿ ಸಂಚರಿಸುವ ವಾಹನ ಸವಾರರು ತೀವ್ರ ಸಮಸ್ಯೆ ಎದುರಿಸುವಂತಾಗಿದೆ. ಬಹುತೇಕ ತಾಲೂಕಿನಾದ್ಯಂತ ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಹಳ್ಳ ಕೊಳ್ಳಗಳಲ್ಲಿ ಮಳೆ ನೀರು ತುಂಬಿಕೊಂಡಿದೆ.

click me!