ಡಾ. ಶಿವಕುಮಾರ ಸ್ವಾಮೀಜಿ ಪವಿತ್ರ ಗದ್ದುಗೆ ಮೇಲೆ ವಿಶೇಷ ಶಿವಲಿಂಗ ಪ್ರತಿಷ್ಠಾಪನೆ

By Web Desk  |  First Published Nov 10, 2019, 11:05 PM IST

ತುಮಕೂರು ಸಿದ್ಧಗಂಗಾ ಮಠದಲ್ಲಿ ವಿಶೇಷ ಕಾರ್ಯಕ್ರಮ/ ಶತಾಯುಷಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಪವಿತ್ರ ಗದ್ದುಗೆ ಮೇಲೆ ವಿಶೇಷ ಶಿವಲಿಂಗ  ಪ್ರತಿಷ್ಠಾಪನೆ/ ಸೋಮವಾರ ಲಿಂಗ ಪ್ರತಿಷ್ಠಾಪನೆ ಕಾರ್ಯ


ತುಮಕೂರು[ನ. 10]  ಶತಾಯುಷಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಪವಿತ್ರ ಗದ್ದುಗೆ ಮೇಲೆ ವಿಶೇಷವಾದ ಶಿವಲಿಂಗವನ್ನು ಪ್ರತಿಷ್ಠಾಪನೆ ಮಾಡಲು ಶ್ರೀ ಸಿದ್ದಗಂಗಾ ಮಠದ ವತಿಯಿಂದ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸೋಮವಾರ ನವೆಂಬರ್ 11 ರಂದು ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಶ್ರೀಗಳ ಗದ್ದುಗೆ ಮೇಲೆ ಲಿಂಗ ಪ್ರತಿಷ್ಠಾಪನೆ ಮಾಡಲಾಗುವುದು. ಲಿಂಗವನ್ನು ಶಿವಕುಮಾರ ಸ್ವಾಮೀಜಿಯವರು ವಿಶ್ರಾಂತಿ ಪಡೆಯುತ್ತಿದ್ದ ಹಳೆ ಮಠದ  ಕೋಣೆಯಲ್ಲಿ ಇರಿಸಲಾಗಿತ್ತು. ಧರ್ಮಗುರುಗಳ ಗದ್ದುಗೆಗಳ ಮೇಲೆ ವಿಧಿವಿಧಾನದಂತೆ ಇರಿಸಲಾಗುವುದು .

Tap to resize

Latest Videos

27  ಇಂಚು ಉದ್ದ ಇರುವಂತಹ ಶಿವಲಿಂಗವನ್ನು ಈಗಾಗಲೇ ಅವರ ಗದ್ದುಗೆಯ ಮೇಲೆ ಇರಿಸಲಾಗಿರುವ ಪೀಠದಮೇಲೆ ಬೆಳಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಸರ್ವ ವಿಧಿ ವಿಧಾನಗಳೊಂದಿಗೆ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ಸಿದ್ಧಗಂಗಾ ಸ್ವಾಮೀಜಿ ಅವರಿಗೆ ಮೊದಲು ಭಾರತ ರತ್ನ ನೀಡಿ

ವಯೋಸಂಬಂಧಿ ಅನಾರೋಗ್ಯದಿಂದ ಬಳಲಿದ ಸ್ವಾಮೀಜಿಯವರನ್ನು 2018ರ ಡಿಸೆಂಬರ್ ನಲ್ಲಿ ಚೆನ್ನೈನ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಸ್ವಾಮೀಜಿ ಮಠಕ್ಕೆ ಹಿಂದಿರುಗಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಶ್ವಾಸಕೋಶ ಸೋಂಕಿನಿಂದ ಬಳಲಿದ ಶ್ರೀಗಳನ್ನು ಮತ್ತೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಆರೋಗ್ಯ ಸುಧಾರಿಸಿದ ಕಾರಣ ಸ್ವಾಮೀಜಿಯವರನ್ನು ಮಠಕ್ಕೆ  ಕರೆತರಲಾಗಿತ್ತು. 2019 ಜನವರಿ 21 ರಂದು ಬೆಳಗ್ಗೆ ಸ್ವಾಮೀಜಿ ಲಿಂಗೈಕ್ಯರಾಗಿದ್ದರು.

click me!