
ಬೆಂಗಳೂರು (ನ.28): ಕಿರುತೆರೆ ನಟಿ, ಬಿಗ್ ಬಾಸ್ ತಾರೆ ದೀಪಿಕಾ ದಾಸ್ ತಾಯಿಗೆ ಕಿಡಿಗೇಡಿಯೊಬ್ಬ ಬೆದರಿಕೆ ಹಾಕಿದ್ದಾರೆ. ಮಧ್ಯರಾತ್ರಿಯ ವೇಳೆ ಅವಾಚ್ಯ ಶಬ್ಧಗಳಿಂದ ನಿಂದಿಸಿ ಬೆದರಿಸಿದ ಸಂಬಂಧ, ಬೆಂಗಳೂರು ಹೊರವಲಯ ಮಾದನಾಯಕನಹಳ್ಳಿ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಾಗಿದೆ. ಮಾದನಾಯಕನಹಳ್ಳಿಯಲ್ಲಿಯೇ ದೀಪಿಕಾ ದಾಸ್ ವಾಸವಾಗಿದ್ದು, ನಡುರಾತ್ರಿ ದೀಪಿಕಾ ಅವರ ತಾಯಿ ಪಾರ್ವತಿಗೆ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಕಿಡಿಗೇಡಿಗಾಗಿ ಮಾದನಾಯಕನಹಳ್ಳಿ ಪೊಲೀಸರ ಹುಡಕಾಟ ಆರಂಭಿಸಿದ್ದಾರೆ.
ಪಾರ್ವತಿ ದಾಖಲಿಸಿದ ದೂರಿನಲ್ಲಿ ಏನಿದೆ?: ದೀಪಿಕಾ ದಾಸ್ ತಾಯಿ ಪದ್ಮಲತಾ ದಾಖಲಿಸಿದ ದೂರನ್ನು ನೋಡೋದಾದರೆ, ನನ್ನ ಮಗಳು ಚಲನ ಚಿತ್ರನಟಿಯಾಗಿದ್ದು, 8 ತಿಂಗಳ ಹಿಂದೆ ದೀಪಕ್ ಕುಮಾರ್ ಎನ್ನುವವರ ಜೊತೆ ವಿವಾಹವಾಗಿದೆ. ಮಗಳು ಮತ್ತು ಅಳಿಯ 1 ತಿಂಗಳ ಹಿಂದೆ ಇಂಗ್ಲೆಂಡ್ ಪ್ರವಾಸಕ್ಕೆ ಹೋಗಿದ್ದರು. ಈ ಹಂತದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನನಗೆ ಫೋನ್ ಮಾಡಿ ನಿಮ್ಮ ಮಗಳಿಗೆ ಯಾಕೆ ಆ ಹುಡುಗನ ಜೊತೆ ಮದುವೆ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದ. ನಿಮ್ಮ ಅಳಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿ ಜನರಿಗೆ ಮೋಸ ಮಾಡಿದ್ದಾನೆ ಎಂದಿದ್ದ.
ಈ ವೇಳೆ ಹಾಗೇನಾದರೂ ಇದ್ದಲ್ಲಿ ಕಾನೂನಾತ್ಮಕವಾಗಿ ದೂರು ನೀಡುವಂತೆ ನಾನು ತಿಳಿಸಿದ್ದೆ. ಕೆಲವು ದಿನಗಳ ನಂತರ ನನ್ನ ಮಗಳು ದೀಪಿಕಾ ದಾಸ್‌ಗೂ ಆತ ಕರೆ ಮಾಡಿದ್ದ. ನಿಮ್ಮ ಪತಿ ಅಕ್ರಮ ಚಟುವಟಿಕೆ ಮಾಡುತ್ತಿದ್ದು, ಬಡಾವಣೆ ಮೋಸ ಮಾಡಿದ್ದು ನಿಮಗೆ ತಿಳಿದಿಲ್ಲವೆ. ನೀವೂ ಪುನೀತ್ ರಾಜ್ ಕಾಮಾರ್ ಸಮಾಧಿ ಬಳಿ ಆಣೆ ಮಾಡುವಂತೆ ಕೇಳಿದ್ದ. ಅದಕ್ಕೆ ಈ ಆರೋಪಗಳೆಲ್ಲ ಸುಳ್ಳು ಇದಕ್ಕೆ ಪುನೀತ್ ರಾಜ್ ಕುಮಾರ್ ಹೆಸರು ತರಬೇಡಿ. ನೀವೂ ಕಾನೂನು ರೀತಿ ದೂರು ನೀಡಿ ಎಂದು ಹೇಳಿದ್ದಳು.
ಮಾಜಿ ಬಾಯ್‌ಫ್ರೆಂಡ್‌ನ ಬಿಟ್‌ಕಾಯಿನ್ ಇದ್ದ ಹಾರ್ಡ್‌ಡ್ರೈವ್ ಕಸದ ಗಾಡಿಗೆ ಎಸೆದ ಯುವತಿ, ಇದರ ಮೌಲ್ಯ 5900 ಕೋಟಿ!
ನನಗೆ ಹಣ ನೀಡಿ ಇಲ್ಲದೇ ಇದ್ದಲ್ಲಿ ನಿಮ್ಮ ಹೆಸರಿಗೆ ಧಕ್ಕೆ ತರುತ್ತೇನೆ ಎಂದಿದ್ದ. ಹಣ ನೀಡದೆ ಇದ್ದರೆ ನಿಮ್ಮ ಹೆಸರು ಅತ್ಮಹತ್ಯೆ ಮಾಡಿಕೊಳ್ಳೋದಾಗಿ ಬೆದರಿಸಿದ್ದ. ನನ್ನ ಮಗಳು ಮತ್ತು ಅಳಿಯನ ಹೆಸರು ಬಳಿಸಿಕೊಂಡು ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡಿದ್ದಾನೆ. ಪದೇ ಪದೇ ಫೋನ್ ಹಣಕ್ಕೆ ಬೇಡಿಕೆ ಹಾಗೂ ಸಾಯೋದಾಗಿ ಬೆದರಿಕೆ ಹಾಕಿದ್ದಾನೆ. ಯಶವಂತ ಎಂಬ ವ್ಯಕ್ತು ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಲಾಗಿದೆ. ಬಿಎನ್ಎಸ್ 308(2) ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಮಾದನಾಯಕಹಳ್ಳಿ ಪೊಲೀಸರಿಂದ ತನಿಖೆ ಮುಂದುವರಿದಿದೆ.
Chitradurga: 20 ವರ್ಷದ ಯುವತಿಗೆ 40ರ ಅಂಕಲ್ ಜೊತೆ ಲವ್-ಮದುವೆ; ಅಳಿಯನ ಜೀವ ತೆಗೆದ ಪೋಷಕರು!
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.