BBK13: 'ಪ್ರತಿ ವರ್ಷವೂ ನನ್ನ ಹೆಸರು ಕೇಳಿಬರುತ್ತೆ'... ಈ ಬಾರಿ ಬಿಗ್ ಬಾಸ್‌ಗೆ ಹೋಗ್ತಾರಾ ಮೇಘಾ ಶೆಟ್ಟಿ?

Published : Jul 03, 2026, 06:12 PM IST
Megha Shetty

ಸಾರಾಂಶ

ಪ್ರತಿ ವರ್ಷ 'ಬಿಗ್ ಬಾಸ್ ಕನ್ನಡ' ಹೊಸ ಸೀಸನ್ ಘೋಷಣೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಮೇಘಾ ಶೆಟ್ಟಿ ಹೆಸರು ಚರ್ಚೆಗೆ ಬರುತ್ತದೆ. ಆದರೆ ಇದುವರೆಗೆ ಅವರು ಒಂದೇ ಒಂದು ಸೀಸನ್‌ನಲ್ಲೂ ಭಾಗವಹಿಸಿಲ್ಲ. 

'ಜೊತೆ ಜೊತೆಯಲಿ' ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದ ನಟಿ ಮೇಘಾ ಶೆಟ್ಟಿ, ಇದೀಗ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೇ ವೇಳೆ 'ಬಿಗ್ ಬಾಸ್ ಕನ್ನಡ ಸೀಸನ್ 13' ಆರಂಭದ ಸುದ್ದಿಯೊಂದಿಗೆ ಮತ್ತೊಮ್ಮೆ ಅವರ ಹೆಸರು ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿಬರುತ್ತಿದ್ದು, ಈ ಬಗ್ಗೆ ನಟಿಯೇ ಸ್ಪಷ್ಟನೆ ನೀಡಿದ್ದಾರೆ. ಪ್ರತಿ ವರ್ಷ 'ಬಿಗ್ ಬಾಸ್ ಕನ್ನಡ' ಹೊಸ ಸೀಸನ್ ಘೋಷಣೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಮೇಘಾ ಶೆಟ್ಟಿ ಹೆಸರು ಚರ್ಚೆಗೆ ಬರುತ್ತದೆ.

ಆದರೆ ಇದುವರೆಗೆ ಅವರು ಒಂದೇ ಒಂದು ಸೀಸನ್‌ನಲ್ಲೂ ಭಾಗವಹಿಸಿಲ್ಲ. ಈ ಬಾರಿಯೂ ಅವರ ಎಂಟ್ರಿ ಬಗ್ಗೆ ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಮೇಘಾ, ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ. "ಈ ಸಲ ಬಿಗ್ ಬಾಸ್ ರೇಸ್‌ನಲ್ಲಿ ನನ್ನ ಹೆಸರು ಇದೆಯೋ ಇಲ್ಲವೋ ನನಗೂ ಗೊತ್ತಿಲ್ಲ. ನಾನು ಇನ್ನೂ ಅಂತಹ ಪಟ್ಟಿಯನ್ನು ನೋಡಿಲ್ಲ. ಆದರೆ ಪ್ರತಿ ವರ್ಷವೂ ನನ್ನ ಹೆಸರು ಕೇಳಿಬರುವುದು ಹೊಸದೇನಲ್ಲ" ಎಂದು ಅವರು ತಿಳಿಸಿದ್ದಾರೆ.

ಇದೇ ವೇಳೆ ಈ ಬಾರಿ 'ಬಿಗ್ ಬಾಸ್'ಗೆ ಹೋಗುವ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಮೇಘಾ, "ಸದ್ಯ ಬ್ಯಾಕ್-ಟು-ಬ್ಯಾಕ್ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಹೀಗಾಗಿ ಈಗಲೇ ಬಿಗ್ ಬಾಸ್ ಮನೆಗೆ ಹೋಗುವ ಅವಕಾಶ ಇಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆ ನೋಡೋಣ" ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ, ಈ ಬಾರಿಯೂ ಅವರು 'ಬಿಗ್ ಬಾಸ್ ಕನ್ನಡ ಸೀಸನ್ 13'ರಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂಬ ಸಂದೇಶ ನೀಡಿದೆ. ಈ ಹಿಂದೆ ಕೂಡ ಹಲವು ಬಾರಿ ಬಿಗ್ ಬಾಸ್ ಆಫರ್ ಕುರಿತು ಪ್ರಶ್ನೆ ಎದುರಿಸಿದ್ದ ಮೇಘಾ, ಸಿನಿಮಾಗಳು ಮತ್ತು ಧಾರಾವಾಹಿಗಳ ಬ್ಯುಸಿ ಶೆಡ್ಯೂಲ್‌ನಿಂದಾಗಿ ಡೇಟ್ಸ್ ಹೊಂದಿಸುವುದು ಕಷ್ಟವಾಗುತ್ತಿತ್ತು ಎಂದು ತಿಳಿಸಿದ್ದಾರೆ.

ನಿರಂತರವಾಗಿ ಬ್ಯುಸಿ

"ಕಳೆದ ಬಾರಿ 'ಕೈವ' ಸಿನಿಮಾ ಬಿಡುಗಡೆಯ ಕೆಲಸಗಳಿದ್ದವು. ಅದೇ ಸಮಯದಲ್ಲಿ ಬೇರೆ ಸಿನಿಮಾಗಳ ಚಿತ್ರೀಕರಣವೂ ನಡೆಯುತ್ತಿತ್ತು. ಈಗ 'ಗ್ರಾಮಾಯಣ' ಸಿನಿಮಾ ಬಿಡುಗಡೆಯಾಗಿದೆ. ಈ ಹಿಂದೆ ಧಾರಾವಾಹಿಯಲ್ಲೂ ನಿರಂತರವಾಗಿ ಬ್ಯುಸಿಯಾಗಿದ್ದೆ. ಇಂತಹ ಸಂದರ್ಭಗಳಲ್ಲಿ ಬಿಗ್ ಬಾಸ್‌ಗೆ ಅಗತ್ಯವಿರುವ ದಿನಾಂಕಗಳನ್ನು ನೀಡುವುದು ಸಾಧ್ಯವಾಗುವುದಿಲ್ಲ" ಎಂದು ಅವರು ವಿವರಿಸಿದ್ದಾರೆ.

ಇನ್ನು ಮೇಘಾ ಶೆಟ್ಟಿ ಅಭಿನಯದ 'ಗ್ರಾಮಾಯಣ' ಸಿನಿಮಾ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿನಯ್ ರಾಜ್‌ಕುಮಾರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಹಳ್ಳಿ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಘಾ ಅವರ ಅಭಿನಯಕ್ಕೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

ಗಿಚ್ಚಿ ಗಿಲಿಗಿಲಿ ಪ್ರಶಾಂತ್ ಬಾಳಲ್ಲಿ ಶುರುವಾಯ್ತು ಹೊಸ ಅಧ್ಯಾಯ: ಮದುವೆ ಶಾಸ್ತ್ರಗಳ ಕ್ಯೂಟ್​ ಫೋಟೋಸ್​ ಇಲ್ಲಿವೆ
ಕೆಲವೇ ದಿನಗಳಲ್ಲಿ ನಟಿ Mokshitha Pai 'ಜಗದ್ದಾತ್ರಿ' ಧಾರಾವಾಹಿ ಆರಂಭ; ಯಾವ ಸೀರಿಯಲ್‌ ಅಂತ್ಯ ಆಗಲಿದೆ?