ವೀಕೆಂಡ್ ವಿತ್ ರಮೇಶ್ ಶೋನಲ್ಲಿ ಕಾಣಿಸಿಕೊಂಡಿದ್ದ ರಮ್ಯಾ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಇದೀಗ ಪ್ರತಿಕ್ರಿಯೆ ನೀಡಿದ್ದು ಎಲ್ಲಾ ಅಜ್ಜಿಯರಿಗಾಗಿ ಮುಂದಿನ ಶೋನಲ್ಲಿ ಕನ್ನಡ ಮಾತಾಡ್ತೀನಿ ಎಂದು ಹೇಳಿದ್ದಾರೆ.
ವೀಕೆಂಡ್ ವಿತ್ ರಮೇಶ್ ಸೀಸನ್-5 ಅದ್ದೂರಿಯಾಗಿ ಪ್ರಾರಂಭವಾಗಿದೆ. ಮೊದಲ ಸಾಧಕಿಯಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಕಾಣಿಸಿಕೊಂಡಿದ್ದರು. ರಮ್ಯಾ ಅವರನ್ನು ಕೆಂಪು ಕುರ್ಚಿಯಲ್ಲಿ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಕೊನೆಗೂ ಅಭಿಮಾನಿಗಳ ಆಸೆ ಈಡೇರಿದೆ. ರಮ್ಯಾ ತನ್ನ ಜೀವನದ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ. ಸಿನಿಮಾ, ರಾಜಕೀಯ ಸೇರಿದಂತೆ ಅನೇಕ ಗೊತ್ತಿರದ ಸಂಗತಿಯಗಳು ವೀಕೆಂಡ್ ಟೆಂಟ್‌ನಲ್ಲಿ ಬಹಿರಂಗವಾಗಿದೆ. ಆದರೆ ರಮ್ಯಾ ಸಂಚಿಕೆ ಟ್ರೋಲಿಗರಿಗೆ ಆಹಾರವಾಗಿದೆ. ಸಂಪೂರ್ಣ ಎಪಿಸೋಡ್‌ನಲ್ಲಿ ರಮ್ಯಾ ಹೆಚ್ಚಾಗಿ ಇಂಗ್ಲಿಷ್ ಮಾತನಾಡಿದ್ದಾರೆ ಎಂದು ನೆಟ್ಟಿಗರು ಸಖತ್ ಟ್ರೋಲ್ ಮಾಡುತ್ತಿದ್ದಾರೆ. ರಮ್ಯಾ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಅಷ್ಟೆಯಲ್ಲದೆ ಜೀಕನ್ನಡದ ಬ್ಯುಸಿನೆಸೆ ಹೆಡ್ ರಾಘವೇಂದ್ರ ಹುಣಸೂರು ವಿರುದ್ಧವು ನೆಟ್ಟಿಗರು ಆಕ್ರೋಶ ಹೊರಹಾಕುತ್ತಿದ್ದಾರೆ.
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ಯೂಟ್ಯೂಬರ್ ಡಾ.ಬ್ರೋ ಅವರನ್ನು ಕರೆಸಿ ಎಂದಿದ್ದಕ್ಕೆ ರಾಘವೇಂದ್ರ ಹುಣುಸೂರು ಅವರು ನಿಮ್ಮ ಅಜ್ಜಿಗೆ ಗೊತ್ತಿದಿಯಾ ಎಂದು ಪ್ರಶ್ನೆ ಮಾಡಿದ್ದರು. ಈ ಮಾತು ಕೂಡ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿದೆ. ರಮ್ಯಾ ಮಾತನಾಡಿದ್ದು ನಮ್ಮ ಅಜ್ಜಿಗೆ ಅರ್ಥವಾಗಿಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯೆ ನೀಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮತ್ತು ಮೀಮ್‌ಗಳು ಹರಿಗಾಡುತ್ತಿವೆ.
ಇದೀಗ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದಾರೆ. ಮೀಮ್ ಒಂದಕ್ಕೆ ಕಾಮೆಂಟ್ ಮಾಡಿರುವ ರಮ್ಯಾ ಮುಂದಿನ ಶೋನಲ್ಲಿ ಎಲ್ಲಾ ಅಜ್ಜಿಯರಿಗಾಗಿ ಕನ್ನಡದಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ. 'ಕಾರ್ಯಕ್ರಮದ ಅತಿಥಿಗಳು ಕನ್ನಡೇತರರು. ನಾನು ಎಲ್ಲರನ್ನು ಒಳಗೊಳ್ಳಲು ಪ್ರಯತ್ನಿಸುತ್ತಿದ್ದೆ ಅಷ್ಟೆ. ಮುಂದಿನ ಕಾರ್ಯಕ್ರಮದಲ್ಲಿ ಎಲ್ಲಾ ಮುದ್ದು ಅಜ್ಜಿಗಳಿಗೆ ಸಂಪೂರ್ಣ ಕನ್ನಡ ಮಾತನಾಡುತ್ತೇನೆ' ಎಂದು ಹೇಳಿದ್ದಾರೆ. ನಾವೆಲ್ಲರೂ ಪ್ರೀತಿ ಮತ್ತು ದಯೆಯ ಭಾಷೆಯನ್ನು ಮಾತನಾಡೋಣ ಎಂದು ಹೇಳಿದ್ದಾರೆ. ರಮ್ಯಾ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಮ್ಯಾ ಕಾಮೆಂಟ್‌ಗೂ ಪರ ವಿರೋಧ ಚರ್ಚೆ ನಡೆಯುತ್ತಿದೆ.
ಅಪ್ಪ ನಿಧನರಾದಾಗ ಜೀವನ ಕೊನೆಗೊಳಿಸಲು ನಿರ್ಧರಿಸಿದ್ದೆ; ಶಾಕಿಂಗ್ ವಿಚಾರ ಬಿಚ್ಚಿಟ್ಟ ರಮ್ಯಾ
ವೀಕೆಂಡ್ ವಿತ್ ರಮೇಶ್ ಸೀಸನ್ 5ನಲ್ಲಿ ರಮೇಶ್ ಅನೇಕ ವಿಚಾರಗಳನ್ನು ಬಹಿರಂಗ ಪಡಿಸಿದ್ದಾರೆ. ತಂದೆಯ ಸಾವು, ರಾಜಕೀಯ, ಸಿನಿಮಾ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಭಾವುಕರಾಗಿದ್ದಾರೆ, ಕಣ್ಣೀರಾಕಿದ್ದಾರೆ. ತನ್ನ ಸಿನಿಮಾ ಜರ್ನಿ ನೆನೆದು ರಮ್ಯಾ ಕಣ್ಣೀರಿಟ್ಟರು.
'ಎಕ್ಸ್ ಕ್ಯೂಸ್ ಮಿ' ಸಿನಿಮಾ ಮಾಡಲು ಇಷ್ಟ ಇರ್ಲಿಲ್ಲ, ಗೌಡ್ರು ಎನ್ನುವ ಕಾರಣಕ್ಕೆ ಒಪ್ಪಿಕೊಂಡೆ; ನಟಿ ರಮ್ಯಾ
ಜೀವನ ಕೊನೆಗೊಳಿಸಿಕೊಳ್ಳಲು ನಿರ್ಧರಿಸಿದ್ದೆ ಎಂದ ರಮ್ಯಾ
'ನನ್ನ ಜೀವನದ ಮೊದಲ ಪ್ರಭಾವಶಾಲಿ ವ್ಯಕ್ತಿ ನನ್ನ ತಾಯಿ, ಎರಡನೇಯವರು ನನ್ನ ತಂದೆ, ಮೂರನೇ ಅವರು ರಾಹುಲ್ ಗಾಂಧಿ ಎಂದು ಭಾವುಕರಾದರು. ನಾನು ಸುಳ್ಳು ಹೇಳಲ್ಲ. ನನ್ನ ತಂದೆ ನಿಧನ ಹೊಂದಿದಾಗ ನನ್ನ ಜೀವನ ಕೊನೆ ಮಾಡಿಕೊಳ್ಳಬೇಕು ಅಂದ್ಕೊಂಡಿದ್ದೆ. ಆಗ ನನಗೆ ರಾಹುಲ್ ಗಾಂಧಿ ಸಹಾಯ ಮಾಡಿದ್ರು. ಸಾವು ಅಂದ್ರೇನು, ಬದುಕು ಅಂದ್ರೇನು ನಾವು ಏನಕ್ಕೆ ಬಂದಿದ್ದೇವೆ ಅಂತಾ ಧೈರ್ಯ ತುಂಬಿದರು' ಎಂದು ರಾಹುಲ್ ಗಾಂಧಿ ಬಗ್ಗೆ ರಮ್ಯಾ ಹೇಳಿದರು.