ನೇರಪ್ರಸಾರದಲ್ಲಿ ಬಂದ ಸುಧಾರಾಣಿ ವೀಕ್ಷಕರಿಗೆ ಕೊಟ್ಟಿದ್ದಾರೆ ಬಿಗ್‌ ಆಫರ್! ಏನದು ನೋಡಿ...

Published : Nov 28, 2024, 06:57 PM ISTUpdated : Nov 28, 2024, 06:58 PM IST
ನೇರಪ್ರಸಾರದಲ್ಲಿ ಬಂದ ಸುಧಾರಾಣಿ ವೀಕ್ಷಕರಿಗೆ ಕೊಟ್ಟಿದ್ದಾರೆ ಬಿಗ್‌ ಆಫರ್! ಏನದು ನೋಡಿ...

ಸಾರಾಂಶ

 ನೇರಪ್ರಸಾರದಲ್ಲಿ ವೀಕ್ಷಕರ ಜೊತೆ ಮಾತನಾಡಿದ ನಟಿ  ಸುಧಾರಾಣಿ ನೆಟ್ಟಿಗರಿಗೆ ಕೊಟ್ಟಿದ್ದಾರೆ ಬಿಗ್‌ ಆಫರ್‍‌! ಏನದು ನೋಡಿ...  

ವಯಸ್ಸು 51 ಆದರೂ ನಟಿ ಸುಧಾರಾಣಿ ಇನ್ನೂ 21ರ ಯುವತಿಯೇ. ಅದೇ ಚೆಲುವು, ಅದೇ ಮೈಮಾಟವನ್ನು ಮೆಂಟೇನ್​ ಮಾಡಿದ್ದಾರೆ ನಟಿ. ಅವರಿನ್ನೂ ಸಿಂಪಲ್​ ಬ್ಯೂಟಿ. ವಯಸ್ಸು ಎನ್ನುವುದು ಒಂದು ಸಂಖ್ಯೆಯಷ್ಟೇ ಎನ್ನುವುದು ಸುಧಾರಾಣಿ ಅವರಿಗೆ ನೋಡಿದರೆ ತಿಳಿಯುತ್ತದೆ. ಸದ್ಯ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗ್ತಿರೋ ಶ್ರೀರಸ್ತು-ಶುಭಮಸ್ತುವಿನಲ್ಲಿ ಎಲ್ಲರ ಬಾಯಲ್ಲೂ ತುಳಸಿಯಮ್ಮಾನೇ ಆಗಿದ್ದಾರೆ. ರಿಯಲ್​ ಲೈಫ್​ನಲ್ಲಿ ಓರ್ವ ಮಗಳಿದ್ದರೆ, ಸೀರಿಯಲ್​ನಲ್ಲಿ ಮದುವೆಯಾದ ಮಕ್ಕಳ ಅಮ್ಮ. ಇನ್ನೇನು ಅಜ್ಜಿಯಾಗುವ ಕಾಲ.  ತಮ್ಮ ಅದ್ಭುತ ನಟನೆಯಿಂದ ಮನಸೂರೆಗೊಳ್ಳುತ್ತಿದ್ದಾರೆ ನಟಿ ಸುಧಾರಾಣಿ. ಸದ್ಯ ಸೀರಿಯಲ್​ನಲ್ಲಿ ಗರ್ಭಿಣಿಯಾಗುವ ಮೂಲಕ ಬಹುದೊಡ್ಡ ಪ್ರೇಕ್ಷಕ ವರ್ಗದಿಂದ ನಟಿ ಅಸಮಾಧಾನಕ್ಕೂ ಗುರಿಯಾಗಿದ್ದಾರೆ. ಒಂದೊಳ್ಳೆ ಸಂದೇಶ ನೀಡುವ ಸಲುವಾಗಿ ಈ ಟ್ವಿಸ್ಟ್​ ಸೇರಿಸಲಾಗಿದೆ ಎನ್ನಲಾಗುತ್ತಿದ್ದರೂ ಹೆಚ್ಚಿನ ವೀಕ್ಷಕರಿಗೆ ಇದು ಇಷ್ಟವಾಗುತ್ತಿಲ್ಲ.

ಇದೀಗ ನಟಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ. ತುಂಬಾ ಕೆಲಸ ಇದ್ದ ಹಿನ್ನೆಲೆಯಲ್ಲಿ ಕೆಲವು ಸಮಯದಿಂದ ಸೋಷಿಯಲ್‌ ಮೀಡಿಯಾದಿಂದ ಬ್ರೇಕ್‌ ತೆಗೆದುಕೊಂಡಿದ್ದೆ. ಈಗ ನಿಮ್ಮ ಜೊತೆ ಮಾತನಾಡುತ್ತಿದ್ದೇನೆ. ನಾನು ಏನು ಪೋಸ್ಟ್‌ ಮಾಡಿದ್ರೆ ನಿಮಗೆ ಇಷ್ಟವಾಗುತ್ತದೆ ಎಂದು ಹೇಳಿ ಎಂದು ನಟಿ ಸುಧಾರಾಣಿ ಹೇಳಿದ್ದಾರೆ. ನನ್ನಿಂದ ನೀವುಯಾವ ರೀತಿಯ ಪೋಸ್ಟ್‌ ಬಯಸುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಥರಹೇವಾರಿ ಕಮೆಂಟ್ಸ್‌ಗಳು ಬಂದಿವೆ. ಹಲವರು ನಿಮ್ಮ ಹಳೆಯ ಚಿತ್ರದ ದಿನಗಳ ಬಗ್ಗೆ ತಿಳಿಸಿ ಎಂದಿದ್ದಾರೆ. ಮತ್ತೆ ಕೆಲವರು ನೀವು ಸೀರೆ ಉಟ್ಟರೆ ಚೆಂದ, ಹಾಗೆಯೇ ನಿಮ್ಮನ್ನು ನೋಡಲು ಇಷ್ಟಪಡುತ್ತೇವೆ ಎಂದಿದ್ದಾರೆ. ಇನ್ನು ಕೆಲವರು ಮಗಳ ಜೊತೆ ಡಾನ್ಸ್‌ ನೋಡಲು ಇಷ್ಟಪಡುತ್ತಿದ್ದೇವೆ ಎಂದರೆ, ನಿಮ್ಮ ಬ್ಯೂಟಿ ಸೀಕ್ರೇಟ್‌ ಹೇಳಿ ಎಂದಿದ್ದಾರೆ ಕೆಲವರು. ಮತ್ತೆ ಕೆಲವರು ನಟಿಯ ಕಾಲೆಳೆದಿದ್ದು, ದಯವಿಟ್ಟು ಮಗುವನ್ನು ತೆಗೆಸಿಕೊಂಡು ಬಿಡಿ, ನೀವು ಗರ್ಭಿಣಿಯಾಗಿರೋದು ನಮಗೆ ಸ್ವಲ್ಪವೂ ಇಷ್ಟವಿಲ್ಲ ಎಂದು ಶ್ರೀರಸ್ತು ಶುಭಮಸ್ತು ತುಳಸಿ ಪಾತ್ರವನ್ನು ಉದ್ದೇಶಿಸಿ ಹೇಳಿದ್ದಾರೆ. 

ಹೊಸ ಸ್ನೇಹಾ, ಕಂಠಿಯನ್ನು ಮದುವೆಯಾಗ್ತಾಳಾ? ಪಾತ್ರಧಾರಿ ನಟಿ ಅಪೂರ್ವ ನಾಗರಾಜ್ ಹೇಳಿದ್ದೇನು?

 ಇನ್ನು  ಸುಧಾರಾಣಿ ಅವರ ಕುರಿತು ಹೇಳುವುದಾದರೆ, ಈಕೆ ಭರತನಾಟ್ಯ ಕಲಾವಿದೆ ಕೂಡ ಹೌದು. ಭರತನಾಟ್ಯ ಮಾತ್ರವಲ್ಲದೇ ಕೂಚುಪುಡಿ ಕಲಾವಿದೆ ಕೂಡ. ಇವರು ಕನ್ನಡ ಚಿತ್ರರಂಗವಲ್ಲದೇ, ಮಲಯಾಳಂ, ತೆಲುಗು ಹಾಗೂ ತಮಿಳಿನಲ್ಲೂ ನಟಿಸಿದ್ದಾರೆ.   'ಕಿಲಾಡಿ ಕಿಟ್ಟು', 'ರಂಗನಾಯಕಿ' ಮುಂತಾದ ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿರುವ ಇವರು  ಕೂಚಿಪುಡಿ ಹಾಗೂ ಭರತನಾಟ್ಯ ಕಲಾವಿದೆ. ತಮ್ಮ 13ನೇ ವಯಸ್ಸಿನಲ್ಲೇ  ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟಿ  ರಾಜ್ ನಿರ್ಮಾಣ ಸಂಸ್ಥೆಯ ಮೂಲಕವಾಗಿ ಶಿವರಾಜಕುಮಾರ್ ನಟನೆಯ  'ಆನಂದ್' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಮನ ಮೆಚ್ಚಿದ ಹುಡುಗಿ, ಆಸೆಗೊಬ್ಬ ಮೀಸೆಗೊಬ್ಬ, ಸಿರಿಗಂಧ, ಪಂಚಮವೇದ, ಮನೆದೇವ್ರು, ಅರಗಿಣಿ, ಸ್ವಾತಿ, ಅವನೇ ನನ್ನ ಗಂಡ, ಮೈಸೂರು ಮಲ್ಲಿಗೆ, ಮಿಡಿದ ಶೃತಿ, ಮಹಾಕ್ಷತ್ರಿಯ, ಅನುರಾಗ ಸಂಗಮ, ದೇವತಾ ಮನುಷ್ಯ, ಜೀವನ ಚೈತ್ರ, ಮನ ಮೆಚ್ಚಿದ ಹುಡುಗಿ, ಸಮರ, ಅಸೆಗೊಬ್ಬ ಮೀಸೆಗೊಬ್ಬ ಮುಂತಾದ ಹಲವಾರು ಯಶಸ್ವಿ ಚಿತ್ರಗಳಲ್ಲಿ ಸುಧಾರಾಣಿ ನಟಿಸಿದ್ದಾರೆ.

ಸುಧಾರಾಣಿ ಮತ್ತು ಗೋವರ್ಧನ್ ವಿವಾಹ 2000 ನೇ ಇಸವಿಯಲ್ಲಿ ನಡೆಯಿತು.   2001ರಲ್ಲಿ ಜನಿಸಿದ ಪುತ್ರಿ  ನಿಧಿ ಜನಿಸಿದ್ದು, ಕಳೆದ ವರ್ಷವಷ್ಟೇ ಅವರ ಭರತನಾಟ್ಯ ರಂಗಪ್ರವೇಶ ಆಗಿದೆ. ಸುಧಾರಾಣಿಯವರು ತಮ್ಮ ಮುದ್ದಿನ ಮಗಳನ್ನು ಪ್ರೀತಿಯಿಂದ ಸುಬ್ಬಿ ಕುಟ್ಟಿ ಎನ್ನುತ್ತಾರೆ. ಸಂಗೀತ, ನೃತ್ಯದಲ್ಲಿ ಪ್ರವೀಣೇಯಾಗಿದ್ದಾರೆ. ಇದೀಗ ಶ್ರೀರಸ್ತು ಶುಭಮಸ್ತು ಸೀರಿಯಲ್​ನಲ್ಲಿ ಸುಧಾರಾಣಿಯವರು ಮಗ ಅಭಿಗಾಗಿ ಡ್ರೈವಿಂಗ್​, ನೃತ್ಯ, ಇಂಗ್ಲಿಷ್​ ಎಲ್ಲಾ ಕಲಿತು ಸೀರಿಯಲ್​ ಪ್ರೇಮಿಗಳ ಮನಸ್ಸನ್ನು ಕದಿಯುತ್ತಿದ್ದಾರೆ.  ಇವೆಲ್ಲಕ್ಕೂ ಭೇಷ್​ ಎಂದಿದ್ದ ಅಭಿಮಾನಿಗಳಿಗೆ ಗರ್ಭಿಣಿಯಾಗಿದ್ದು ಮಾತ್ರ ಸಹಿಸಿಕೊಳ್ಳಲು ಆಗ್ತಿಲ್ಲ. 

ಸೀರಿಯಲ್ ಸೆಟ್‌ನಲ್ಲಿ ಎಲ್ಲರನ್ನೂ ಸುಸ್ತು ಮಾಡೋ ಸಿಹಿಯ ತುಂಟಾಟ ನೋಡೋದೇ ಚೆಂದ!

PREV

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Articles on
click me!

Recommended Stories

2 ಸತ್ಯ ಬಯಲು ಮಾಡಿದ 'ಲಕ್ಷ್ಮೀ ನಿವಾಸ' ನಿರ್ದೇಶಕರು, ವೀಕ್ಷಕರು ಫುಲ್ ಹ್ಯಾಪಿ
BBK 12: ಟಾಸ್ಕ್ ಆಡದೇ ಈ ವಾರದ ‘ಕ್ಯಾಪ್ಟನ್’ ಆದ ಸ್ಪಂದನಾ.. ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್!