ಸಹಸ್ರಾರು ಕೋಟಿ ಒಡತಿ ಈ ಕೆಲಸದಾಕೆ! ಕಣ್ಣಲ್ಲೇ ಕೊಲ್ಲುವ ಮಲ್ಲಿಗಿಂದು ಹುಟ್ಟುಹಬ್ಬ: ನಟಿಯ ಇಂಟರೆಸ್ಟಿಂಗ್‌ ಸ್ಟೋರಿ ಕೇಳಿ...

By Suchethana D  |  First Published Nov 21, 2024, 1:47 PM IST

 ಸಹಸ್ರಾರು ಕೋಟಿ ಒಡತಿಯಾಗಿರೋ ಕೆಲಸದಾಕೆಗಿಂತ ಹುಟ್ಟುಹಬ್ಬದ ಸಂಭ್ರಮ. ಅಮೃತಧಾರೆಯ ಮಲ್ಲಿಯ  ರಿಯಲ್ ಲೈಫ್‌ ಇಂಟರೆಸ್ಟಿಂಗ್‌ ಸ್ಟೋರಿ ಕೇಳಿ...
 


ಅಕ್ಕವ್ರೇ ಅಕ್ಕವ್ರೇ ಎನ್ನುತ್ತಲೇ ಎಲ್ಲರ ಮನವನ್ನು ಗೆದ್ದಾಕೆ ಅಮೃತಧಾರೆಯ ಮಲ್ಲಿ. ಗಂಡನನ್ನು ಅಗತ್ಯಕ್ಕಿಂತ ಹೆಚ್ಚು ನಂಬಿ ಮೋಸ ಹೋದರೂ ಗಂಡನನ್ನೇ ಸರ್ವಸ್ವ ಎಂದುಕೊಂಡಾಕೆ ಈ ಹೆಣ್ಣಮಗಳು. ಮನೆ ಕೆಲಸದಾಕೆಯಾದವಳು ಮನೆಯೊಡತಿ ಆಗಿದ್ದಾಳೆ. ಆದರೆ ತನ್ನ ಮುಗ್ಧತೆಯನ್ನುಮಾತ್ರ ಬಿಟ್ಟುಕೊಟ್ಟಿಲ್ಲ. ಕುತಂತ್ರಿ ಜೈದೇವ ಸದ್ಯ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ನಾಟಕ ಮಾಡುತ್ತಿದ್ದಾನೆ. ಇದಾಗಲೇ ಸಾಯಿಸಲು ಹೊರಟಿದ್ದ ಪತಿ, ಕೆಟ್ಟವನು ಎಂದು ತಿಳಿದರೂ ಅವನನ್ನು ಮತ್ತೆ ನಂಬಿದ್ದಾಳೆ. ತನ್ನ ಮಗುವಿನ ಸಾವಿಗೆ ಕಾರಣನಾದವ ಎಂದು ಗೊತ್ತಿದ್ದರೂ, ಪತಿಯನ್ನು ಕ್ಷಮಿಸಿದ್ದಾಳೆ. ಈಗ ಏಕಾಏಕಿ ಬದಲಾಗಿದ್ದು ಏಕೆ ಎನ್ನುವುದನ್ನೂ ಅರಿಯದ ಮುಗ್ಧೆ ಈಕೆ.  ಪಕ್ಕಾ ಹಳ್ಳಿ ಹುಡುಗಿಯಾಗಿ ನಟಿಸುತ್ತಿರುವ ಸ್ಟೈಲಿಷ್ ನಟಿ ಈಕೆ.  
 

ಈ ರೀತಿ ಪೆದ್ದು ಪೆದ್ದು ಪಾತ್ರದಲ್ಲಿ ಸೈ ಎನಿಸಿಕೊಂಡಿರುವ ಮಲ್ಲಿಯ ನಿಜವಾದ ಹೆಸರು ರಾಧಾ ಭಗವತಿ. ರಾಮ್​ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ರಾಧಾ ಅವರು ಇದೀಗ ಮಲ್ಲಿಯ ಪಾತ್ರಕ್ಕೆ ಜೀವ ತುಂಬುತ್ತಿದ್ದಾರೆ. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್​ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ  ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  

Tap to resize

Latest Videos

undefined

ಬ್ರೇನ್ ವಾಷ್ ಮಾಡಿ, ಮಂತ್ರ ಮಾಡ್ಸಿ ವಶ ಮಾಡಿಕೊಂಡಳು: ಅಮೃತಧಾರೆ ಅಪರ್ಣಾ ಪತಿ ಹೇಳಿದ್ದೇನು?

ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸುತ್ತಿದ್ದಾರೆ. ಮಾಡೆಲ್ ಕೂಡ ಆಗಿರುವ ಇವರಿಗೆ  ಚಿತ್ರರಂಗದಲ್ಲಿ   ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ. ಅಂದಹಾಗೆ, ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ.  ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ.
 
ಅಂದಹಾಗೆ ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ  ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ  ಜನಪದ ಗೀತೆಗಳಿಗೆ ದನಿಯಾದವರು.  ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ. ಕಿರುತೆರೆ, ಹಿರಿತೆರೆ, ಮ್ಯೂಸಿಕ್ ಆಲ್ಬಂ ಮಾತ್ರವಲ್ಲದೇ ರಾಧಾ ಅವರು, ಹಿನ್ನೆಲೆ ಗಾಯಕಿಯೂ ಹೌದು. ಈಗಾಗಲೇ ಎರಡು ಸಿನಿಮಾಗಳಲ್ಲಿ ಹಾಡಿರುವ ಈಕೆ ಕಂಠದಾನಕ್ಕೂ ಸೈ. 'ಮದುಮಗಳು' ಧಾರಾವಾಹಿಯಲ್ಲಿನ ನಾಯಕಿಯ ಪಾತ್ರಕ್ಕೆ ಕಂಠದಾನ ಮಾಡುತ್ತಿರುವ ರಾಧಾ ಅವರಿಗೆ ಕಲೆ ಎಂಬುದು ರಕ್ತಗತವಾಗಿಯೇ ಒಲಿದು ಬಂದಿದೆ.

ನನ್ನ ನಟನೆ ನೋಡ್ಲಿಲ್ಲ, ಟ್ಯಾಲೆಂಟ್‌ ನೋಡ್ಲಿಲ್ಲ ಎನ್ನುತ್ತಲೇ ಸಿನಿಮಾದಲ್ಲಿ ಅವಕಾಶ ಸಿಕ್ಕ ಬಗ್ಗೆ ಮಿಲನಾ ಓಪನ್‌ ಮಾತು!
 

click me!